India Weather: ದೇಶದ ಈ ಭಾಗಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಮುನ್ಸೂಚನೆ

India Weather: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಇಲ್ಲಿ ತಿಳಿಯಿರಿ.

ಭಾರೀ ಮಳೆ ಹಿನ್ನೆಲೆ ಮಹರಾಷ್ಟ್ರ, ಕೇರಳ, ಹರಿಯಾಣ, ಕರ್ನಾಟಕ, ಮುಂಬೈ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಹಾಗೆಯೇ ಮುಂದಿನ ದಿನಗಳಲ್ಲೂ ಈ ಭಾಗಗಳ ಹಲವೆಡೆ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

India Weather Heavy rainfall forecast for next two days in these states on August 4th

ಇನ್ನು ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಈಶಾನ್ಯ ಮಧ್ಯಪ್ರದೇಶ, ಪಶ್ಚಿಮ ರಾಜಸ್ಥಾನದ ಹಲವೆಡೆ ಭಾರೀ ಮಳೆಯಾಗಲಿದೆ. ಇನ್ನು ಜಾರ್ಖಂಡ್ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 4 ಮತ್ತು 5ರಂದು ಜಾರ್ಖಂಡ್, ಬಿಹಾರ ಮತ್ತು ಛತ್ತೀಸ್‌ಗಢ, ಪೂರ್ವ ಮಧ್ಯಪ್ರದೇಶದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷಿಯಿದೆ. ಹಾಗೆಯೇ ಪಶ್ಚಿಮ ಮಧ್ಯಪ್ರದೇಶದಲ್ಲೂ ಕೂಡ ಇದೆ ವೇಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಆಗಸ್ಟ್ 4 ರಂದು ಪೂರ್ವ ಉತ್ತರ ಪ್ರದೇಶದಲ್ಲಿ ಹಲವಾರು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆದರೆ ಪಶ್ಚಿಮ ಉತ್ತರ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಇದೇ ರೀತಿಯ ವಾತಾವರಣ ಇರುವ ಸಾಧ್ಯತೆಯಿದೆ. ಪೂರ್ವ ರಾಜಸ್ಥಾನವು ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ ಬೀಳಲಿದೆ ಎಂದು ತಿಳಿಸಿದೆ.

ಆಗಸ್ಟ್ 4, 5 ಮತ್ತು 6ರಂದು ಪಶ್ಚಿಮ ರಾಜಸ್ಥಾನದ ಅಲ್ಲಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹಾಗೆಯೇ ಸೌರಾಷ್ಟ್ರ ಮತ್ತು ಕಚ್ ಸೇರಿದಂತೆ ಗುಜರಾತ್‌ನ ಪ್ರತ್ಯೇಕ ಸ್ಥಳಗಳಲ್ಲಿ ಆಗಸ್ಟ್ 4ರಂದು ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಇಲ್ಲಿನ ನಿವಾಸಿಗಳು ಮುಂಜಾಗ್ರತೆಯಿಂದ ಇರಬೇಕು ಎಂದು ಸೂಚನೆ ನೀಡಿದೆ.

ಈಗಾಗಲೇ ಭಾರೀ ಮಳೆಯಿಂದ ಹಲವು ರಾಜ್ಯಗಳಲ್ಲಿ ಪ್ರಮುಖ ಜಲಾಶಯಗಳು ತುಂಬಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಮತ್ತೊಂದೆಡೆ ಕೆಲವೆಡೆ ರಣಭೀಕರ ಮಳೆಯಿಂದ ಪ್ರವಾಹದಂತಹ ಅವಾಂತರಗಳು ಸೃಷ್ಟಿಯಾಗಿದ್ದು, ಇದರಿಂದ ಜನರ ಜೀವನ ಅಸ್ತವಾಗಿದೆ. ಅದರಲ್ಲೂ ಕೇರಳದ ವೈನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ದೊಡ್ಡ ಮಟ್ಟದಲ್ಲಿ ಪ್ರಾಣಹಾನಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+