India weather: ದೇಶದ ಈ ಭಾಗಗಳಲ್ಲಿ ಮುಂದಿನ ಎರಡು ದಿನ ಭರ್ಜರಿ ಮಳೆ ಮುನ್ಸೂಚನೆ-ಎಲ್ಲೆಲ್ಲಿ?

India weather: ಇಷ್ಟು ದಿನ ಬಿಸಿಲಿನ ಬೇಗೆಗೆ ಬೆಂದಿದ್ದ ದೇಶದ ಹಲವು ರಾಜ್ಯಗಳ ಕೆಲವು ಭಾಗಗಳಲ್ಲಿ ಇದೀಗ ಭಾರೀ ಮಳೆಯಾಗುತ್ತಿದೆ. ಹಾಗೆಗೆ ಇನ್ನು ಮುಂದಿನ ಎರಡು ದಿನಗಳ ಕಾಲ ಕರ್ನಾಟಕ ಸೇರಿದಂತೆ ದೇಶದ ಈ ಭಾಗಗಳಲ್ಲಿ ಅಬ್ಬರದ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ, ಯಾವ್ಯಾವತ್ತು ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಶನಿವಾರ (ಏಪ್ರಿಲ್ 13 ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪಂಜಾಬ್, ಸಿಕ್ಕಿಂ, ಅರುಣಾಚಲ ಪ್ರದೇಶ, ಹರಿಯಾಣ, ರಾಜಸ್ಥಾನ, ಪಶ್ಚಿಮ ಬಂಗಾಳ, ಅಸ್ಸಾಂ, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢ, ಒಡಿಶಾ, ತೆಲಂಗಾಣ, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗಲಿದೆ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

India weather Heavy rainfall forecast for next two days in this states including Karnataka

ಏಪ್ರಿಲ್ 14ರಂದು ಲಡಾಖ್ ಮತ್ತು ಜಮ್ಮು-ಕಾಶ್ಮೀರ, ಸಿಕ್ಕಿಂ, ಅರುಣಾಚಲ ಪ್ರದೇಶದಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಪಂಜಾಬ್, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ಕೇರಳ ಮತ್ತು ತಮಿಳುನಾಡಿನಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಗುಜರಾತ್, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು 40° C ಗಿಂತ ಹೆಚ್ಚಿರುವ ಸಾಧ್ಯತೆಯಿದೆ.

ಏಪ್ರಿಲ್ 13ರಂದು ಮಧ್ಯಪ್ರದೇಶ, ಛತ್ತೀಸ್‌ಗಢ, ಮರಾಠವಾಡ ಮಧ್ಯ ಮಹಾರಾಷ್ಟ್ರದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಇಲ್ಲಿ ಬಿರುಗಾಳಿ ವೇಗವು ಗಂಟೆಗೆ 30-40 ಕಿಲೋ ಮೀಟರ್‌ ವೇಗದಲ್ಲಿ ಬೀಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಇದೇ ಅವಧಿಯಲ್ಲಿ ತಮಿಳುನಾಡು, ಪುದುಚೇರಿ-ಕಾರೈಕಲ್, ಕೇರಳ, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ ಮತ್ತು ಕರ್ನಾಟಕದಲ್ಲೂ ಕೂಡ ಇದೇ ರೀತಿಯ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಏಪ್ರಿಲ್ 13-15ರವರೆಗೆ ವಾಯುವ್ಯ ಉತ್ತರ ಪ್ರದೇಶ, ಪಂಜಾಬ್ ಮತ್ತು ಹರಿಯಾಣದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದ್ದು, ಇಲ್ಲಿ ಗಾಳಿ ವೇಗವು ಗಂಟೆಗೆ 30-40 ಕಿಲೋ ಮೀಟರ್‌ ಇರುವ ಸಾಧ್ಯತೆಯಿದೆ. ಇನ್ನು ಏಪ್ರಿಲ್ 13ರಂದು ಜಮ್ಮು ಮತ್ತು ರಾಜಸ್ಥಾನದಲ್ಲಿ, ಏಪ್ರಿಲ್ 13-14 ರಂದು ಹಿಮಾಚಲ, ಪಂಜಾಬ್ ಮತ್ತು ಹರಿಯಾಣ ಮತ್ತು ಏಪ್ರಿಲ್ 14ರಂದು ಉತ್ತರಾಖಂಡ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಭಾರೀ ಮಳಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+