India Weather: ದೇಶದ ಈ ಭಾಗಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ
ನವದೆಹಲಿ, ಮಾರ್ಚ್, 10: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಇದರ ನಡುವೆಯೂ ಹಲವೆಡೆ ಮುಂದಿನ 5 ದಿನಗಳವರೆಗೂ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಮಾರ್ಚ್ 11-14ರವರೆಗೆ ಲಘುವಾಗಿ ಮಧ್ಯಮ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಇನ್ನು IMDಯ ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ದಿನಗಳವರೆಗೆ ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳ ಸೇರಿದಂತೆ ದೇಶದ ದಕ್ಷಿಣ ಭಾಗದಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಇರುತ್ತವೆ ಎಂದು ನಿರೀಕ್ಷಿಸಲಾಗಿದೆ. ಈ ಪ್ರದೇಶಗಳಲ್ಲಿ ದಿನದ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ದೆಹಲಿ ಹವಾಮಾನ ಮುನ್ಸೂಚನೆ: ದೆಹಲಿಯ ಆರ್‌ಡಬ್ಲ್ಯುಎಫ್‌ಸಿ ಪ್ರಕಾರ, ಇಂದು ರಾಷ್ಟ್ರ ರಾಜಧಾನಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕನಿಷ್ಠ ಮತ್ತು ಗರಿಷ್ಠ ತಾಪಮಾನವು ಕ್ರಮವಾಗಿ 11 ಮತ್ತು 28 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇದಲ್ಲದೆ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಮತ್ತು ಹಿಮಾಚಲ ಪ್ರದೇಶ ಪ್ರದೇಶದಲ್ಲಿ, ಹವಾಮಾನ ಇಲಾಖೆಯು ಮಾರ್ಚ್ 10-12 ಮತ್ತು ಮಾರ್ಚ್ 14ರವರೆಗೆ ಚದುರಿದ ಸಾಧಾರಣ ಮಳೆ ಮತ್ತು ಹಿಮಪಾತದ ಮುನ್ಸೂಚನೆ ನೀಡಿದೆ. ಮಾರ್ಚ್ 13ರಂದು ಮಳೆ ಮತ್ತು ಹಿಮಪಾತವನ್ನು ನಿರೀಕ್ಷಿಸಲಾಗಿದೆ, ಜೊತೆಗೆ ಮಾರ್ಚ್ 12-13 ರಂದು ಪ್ರತ್ಯೇಕವಾದ ಗುಡುಗು ಮತ್ತು ಮಿಂಚು ಇರುತ್ತದೆ ಎಂದು ತಿಳಿಸಿದೆ.
ಉತ್ತರಾಖಂಡದಲ್ಲಿ ಮಾರ್ಚ್ 11-12ರಂದು ಪ್ರತ್ಯೇಕವಾದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ನಂತರ ಮಾರ್ಚ್ 13-14 ರಂದು ಸಾಕಷ್ಟು ವ್ಯಾಪಕ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಮುನ್ಸೂಚನೆ ಇದೆ. ಇನ್ನು ಪಂಜಾಬ್‌ನಲ್ಲಿ ಮಾರ್ಚ್ 11-14ರವರೆಗೆ ಚದುರಿದ ಮಳೆಯಾಗಲಿದೆ. ಮಾರ್ಚ್ 13ರಂದು ಹರಿಯಾಣ, ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಪ್ರತ್ಯೇಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರುಣಾಚಲ ಪ್ರದೇಶದಲ್ಲಿ ಮಾರ್ಚ್ 10-13ರವರೆಗೆ ಪ್ರತ್ಯೇಕವಾದ ಲಘು ಮಳೆ ಮತ್ತು ಹಿಮಪಾತಕ್ಕೆ ಸಾಕ್ಷಿಯಾಗಲಿದೆ. ನಂತರ ಮಾರ್ಚ್ 14-15ರಂದು ಚದುರಿದ ಲಘು ಮಳೆ ಮತ್ತು ಹಿಮಪಾತವಾಗುತ್ತದೆ. ಅಸ್ಸಾಂ, ಮೇಘಾಲಯ, ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮಾರ್ಚ್ 13-14 ರಂದು ಪ್ರತ್ಯೇಕವಾದ ಲಘು ಮಳೆಯಾಗುವ ನಿರೀಕ್ಷೆಯಿದೆ. ಇನ್ನು ಇಂದು (ಮಾರ್ಚ್ 10) ರಾತ್ರಿ ವೇಳೆಗೆ ವೇಳೆ ಕೇರಳ ಮತ್ತು ಉತ್ತರ ಕರಾವಳಿ ಆಂಧ್ರಪ್ರದೇಶದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications