India weather: ಈ ಭಾಗಗಳಲ್ಲಿ ಮುಂದಿನ ಐದು ದಿನ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ

India weather: ಈಗಾಗಲೇ ಭಾರತದ ಉತ್ತರ ಭಾಗದಲ್ಲಿ ಹಲವೆಡೆ ಅಬ್ಬರದ ಮಳೆಯಾಗುತ್ತಿದ್ದರೆ ಹಾಗೂ ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗಳ ಕೆಲವೆಡೆ ಮಾತ್ರ ಸಾಧಾರಣ ಮಳೆ ಆರಂಭವಾಗಿದೆ. ಇನ್ನು ಮುಂದಿನ ಐದು ದಿನಗಳ ಕಾಲ ಈ ಭಾಗಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಏಪ್ರಿಲ್‌ 19-20 ಮತ್ತು 22ರ ಅವಧಿಯಲ್ಲಿ ಜಮ್ಮು-ಕಾಶ್ಮೀರ, ಲಡಾಖ್‌, ಗಿಲ್ಗಿಟ್‌, ಬಾಲ್ಟಿಸ್ತಾನ್‌, ಮುಜಫರಾಬಾದ್, ಹಿಮಾಚಲ ಪ್ರದೇಶದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಗಾಳಿಯಾಗುವ ಮುನ್ಸೂಚನೆ ಮತ್ತು ಏಪ್ರಿಲ್‌ 19-24ರ ಅವಧಿಯಲ್ಲಿ ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

India weather Heavy rainfall forecast for the next five days in this states

ಏಪ್ರಿಲ್‌ 19ರಿಂದ 22 ರವರೆಗೆ ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿಯಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಸಹಿತ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಭವಿಷ್ಯ ನುಡಿದಿದೆ.

ಇನ್ನು ಇಂದು (ಏಪ್ರಿಲ್ 19) ಜಮ್ಮು & ಕಾಶ್ಮೀರ, ಲಡಾಖ್‌, ಗಿಲ್ಗಿಟ್‌, ಬಾಲ್ಟಿಸ್ತಾನ್, ಮುಜಫರಾಬಾದ್‌, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಪೂರ್ವ ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗಲಿದ ಎಂದು ತಿಳಿಸಿದೆ. ಅಷ್ಟೇ ಅಲ್ಲದೇ, ಇದೇ ವೇಳೆ ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಸೇರಿದಂತೆ ನವದೆಹಲಿಯಲ್ಲಿ ಗಳಿಯ ವೇಗ ಹೆಚ್ಚಿರಲಿದೆ ಎಂದು ತಿಳಿಸಿದೆ.

ಸಿಕ್ಕಿಂನಲ್ಲಿ ಏಪ್ರಿಲ್ 21ರವರೆಗೆ ವ್ಯಾಪಕವಾಗಿ ಭಾರೀ ಮಳೆಯಾಗಲಿದೆ. ಏಪ್ರಿಲ್‌ 22ರಂದು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಪ್ರತ್ಯೇಕವಾದ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗಲಿದೆ. ಇನ್ನು ಏಪ್ರಿಲ್ 19 ರಿಂದ 21ರವರೆಗೆ ಪಶ್ಚಿಮ ಬಂಗಾಳದಲ್ಲಿ ಪ್ರತ್ಯೇಕವಾದ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ತಿಳಸಿದೆ.

ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: IMD ಪ್ರಕಾರ, ಏಪ್ರಿಲ್ 19ರಿಂದ 22 ರವರೆಗೆ ಕೇರಳ ಮತ್ತು ಮಾಹೆಯಲ್ಲಿ ಪ್ರತ್ಯೇಕವಾದ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇದೇ ಅವಧಿಯಲ್ಲಿ ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ ಮತ್ತು ತೆಲಂಗಾಣದಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಏಪ್ರಿಲ್ 19 ಮತ್ತು 20 ರಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಪ್ರತ್ಯೇಕವಾಗಿ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ಇದೇ ವೇಳೆ ಕರಾವಳಿ ಕರ್ನಾಟಕದ ಬಹುತೇಕ ಕಡೆ ಬಿಸಿಲಿನ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿ 18 ರಿಂದ 21ರವರೆಗೆ ಮಳೆಯಾಗುವ ಮುನ್ಸೂಚನೆ ಇದೆ, ಆದರೆ ದಕ್ಷಿಣ ಒಳನಾಡಿನ ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಏಪ್ರಿಲ್ 19 ಮತ್ತು 20 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಏಪ್ರಿಲ್‌ 19ರಿಂದ 22 ರವರೆಗೆ ಛತ್ತೀಸ್‌ಗಢದಲ್ಲಿ, ಏಪ್ರಿಲ್‌ 20 ಮತ್ತು 21ರಂದು ಮಧ್ಯಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಶುಕ್ರವಾರ ಬೆಳಗ್ಗೆ ಕೇರಳ, ಮಾಹೆ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ ಎಂದು ತಿಳಿದುಬಂದಿದೆ.

ಎಲ್ಲೆಲ್ಲಿ ತಾಪಮಾನ ಹೆಚ್ಚಳ?: ಏಪ್ರಿಲ್ 18 ರಿಂದ 21ರವರೆಗೆ ಒಡಿಶಾದ ಪ್ರತ್ಯೇಕ ಭಾಗಗಳಲ್ಲಿ ಬಿಸಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಹಾಗೆಯೇ ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ ಹಲವೆಡೆ ಏಪ್ರಿಲ್‌ 18ರಿಂದ 22ರವರೆಗೆ ತಾಪಮಾನ ಪ್ರಮಾಣ ಹೆಚ್ಚಿರಲಿದೆ ಎಂದು ತಿಳಿಸಿದೆ.

ಏಪ್ರಿಲ್ 19ರಂದು ಕೊಂಕಣ ಮತ್ತು ಗೋವಾ, ಕರಾವಳಿ ಆಂಧ್ರಪ್ರದೇಶ, ಏಪ್ರಿಲ್‌ 20ರಿಂದ 22, 21 ಮತ್ತು 22ರವರೆಗೆ ಯಾನಂ, ರಾಯಲಸೀಮಾ ಮತ್ತು ತೆಲಂಗಾಣದಲ್ಲಿ ತಾಪಮಾನ ಪ್ರಮಾಣದಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+