India Weather: ದೇಶದ ಈ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

India Weather: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ನಾಲ್ಕು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಸುನಾಮಿಯಂತಹ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎಂದು ಇಲ್ಲಿ ತಿಳಿಯಿರಿ.

ಶುಕ್ರವಾರ (ಜುಲೈ 19) ದಕ್ಷಿಣ ಛತ್ತೀಸ್‌ಗಢ, ದಕ್ಷಿಣ ಒಡಿಶಾ, ಪೂರ್ವ ಮಹಾರಾಷ್ಟ್ರ ಮತ್ತು ಹಿಮಾಲಯ ಪರ್ವತಗಳ ತಪ್ಪಲಿನಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ತೆಲಂಗಾಣ, ಈಶಾನ್ಯ ಆಂಧ್ರಪ್ರದೇಶ, ಕರಾವಳಿ ಮಹಾರಾಷ್ಟ್ರ, ಗೋವಾ, ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.ಇನ್ನು ರಾಜಸ್ಥಾನದಲ್ಲಿ ಗರಿಷ್ಠ ತಾಪಮಾನ 40 °C ಅಥವಾ ಅದಕ್ಕಿಂತ ಹೆಚ್ಚು ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

India Weather Heavy rainfall forecast for the next four days in these states from july 19th

ಇಂದು ಎಲ್ಲೆಲ್ಲಿ ಮಳೆ?: ಶನಿವಾರ (ಜುಲೈ 20) ಛತ್ತೀಸ್‌ಗಢ, ತೆಲಂಗಾಣ, ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಗುಜರಾತ್, ಆಂಧ್ರಪ್ರದೇಶ ಮತ್ತು ಕೇರಳದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಬಿಹಾರ, ಹರಿಯಾಣ, ನವದೆಹಲಿ, ತಮಿಳುನಾಡು, ಅಂಡಮಾನ್-ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಮಿಂಚು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ ನಾಲ್ಕು ದಿನ ಮಳೆ: ಉತ್ತರ ಬಂಗಾಳ ಕೊಲ್ಲಿಯಲ್ಲಿ ಮುಂಗಾರು ಆರ್ಭಟ ಹೆಚ್ಚಾಗಲಿದೆ. ಪೂರ್ವ ಮಹಾರಾಷ್ಟ್ರ, ತೆಲಂಗಾಣ, ಛತ್ತೀಸ್‌ಗಢ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಗುಜರಾತ್‌ನಿಂದ ಕೇರಳದ ಕರಾವಳಿಯ ಉದ್ದಕ್ಕೂ ಸರಾಸರಿ ಸಮುದ್ರ ಮಟ್ಟದಲ್ಲಿ ಆಫ್‌ಶೋರ್ ಟ್ರಫ್ ಮುಂದುವರಿದಿದೆ. ಕನಿಷ್ಠ ಶನಿವಾರದವರೆಗೆ ಮಹಾರಾಷ್ಟ್ರ, ಗೋವಾ ಮತ್ತು ಕರಾವಳಿ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಾಳೆಯಾಗಲಿದೆ. ಅಲ್ಲದೆ, ಈ ಭಾಗಗಳಲ್ಲಿ ಮಂಗಳವಾರದಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ನೀಡಿದೆ. ಭಾರತದ ವಾಯುವ್ಯ ಮತ್ತು ಆಗ್ನೇಯ ಭಾಗಗಳಲ್ಲಿ ವಾತಾವರಣ ತಂಪಾಗಿರುತ್ತದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+