India weather: ಲಕ್ಷದ್ವೀಪ ಸೇರಿದಂತೆ ಭಾರತದ ಈ ಭಾಗದಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

ನವದೆಹಲಿ, ಜನವರಿ, 10: ಈಗಾಗಗಲೇ ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದ್ದು, ಕೆಲವೆಡೆಯಂತೂ ಬೆಳಗ್ಗೆ 10 ಗಂಟೆಯಾದರೂ ಮಂಜು ಮುಸುಕಿದ ವಾತಾವರಣವೇ ಮುಂದುವರೆಯುತ್ತಿದೆ. ಮತ್ತೊಂದೆಡೆ ಈ ನಡುವೆಯೂ ಹಲವು ರಾಜ್ಯಗಳಲ್ಲಿ ಮಿಂಚು ಗುಡಗು ಸಹಿತ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಳ ಮಳೆ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆ ಬೀಳಲಿದೆ ಎಂದು ಇಲ್ಲಿ ತಿಳಿಯಿರಿ.

ಈಗಾಗಲೇ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲು ಮಳೆಯಾಗುತ್ತಿದೆ. ಅದರಲ್ಲೂ ತಮಿಳುನಾಡು, ಕೇರಳ ಸೇರಿದಂತೆ ಕರಾವಳಿ ಕರ್ನಾಟಕ ಅಲ್ಲಿ ಮಳೆಯಾಗಿದೆ. ಹಾಗೆಯೇ ಇನ್ನೂ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.

India weather: Heavy rainfall forecast for three days in these parts including Lakshadweep

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಅಲೆಗಳ ಒತ್ತಡದದಿಂದಾಗಿ ಮಂಗಳವಾರ ಸಂಜೆ ಮತ್ತು ಬುಧವಾರ ಬೆಳಗ್ಗೆ ಮುಂಬೈನಲ್ಲಿ ಅಕಾಲಿಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಗರದಲ್ಲಿ ಬಿರುಗಾಳಿ ಸಹಿತ ತುಂತುರು ಮಳೆ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿದ್ದು, ಚಳಿಗಾಲದ ಮಧ್ಯದಲ್ಲಿ ತೇವಾಂಶದ ಹೆಚ್ಚಳಕ್ಕೆ ಕಾರಣವಾಯಿತು.

ಗೋರೆಗಾಂವ್, ಮಲಾಡ್ ಬೊರಿವಲಿ, ಅಂಧೇರಿ, ಜೋಗೇಶ್ವರಿ ಮತ್ತು ಇತರ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದೆ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನು ನೆರೆಯ ರಾಯಗಡ, ಥಾಣೆ ಮತ್ತು ಪಾಲ್ಘರ್ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಂಜೆ ತಡವಾಗಿ ಲಘು ಮಳೆ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಚೆನ್ನೈನಲ್ಲಿ ಸೋಮವಾರ ಬೆಳಿಗ್ಗೆಯಿಂದ ಮಳೆಯಾಗುತ್ತಿದ್ದು, ವಿವಿಧ ಪ್ರದೇಶಗಳು ಜಲಾವೃತವಾಗಿದೆ. "ಆಗ್ನೇಯ ಮತ್ತು ಪಕ್ಕದ ಪೂರ್ವ-ಮಧ್ಯ ಅರೇಬಿಯಾದ ಮೇಲೆ ಒಂದು ಚಂಡಮಾರುತದ ಪರಿಚಲನೆ ಇದೆ ಮತ್ತು ಈ ಚಂಡಮಾರುತದ ಪರಿಚಲನೆಯಿಂದ ದಕ್ಷಿಣ ಗುಜರಾತ್‌ನಲ್ಲಿ ಕಡಿಮೆ ಉಷ್ಣಾಂಶ ದಾಖಲಾಗಿದೆ. ಇದರ ಮಧ್ಯೆಯೂ ಮುಂದಿನ ಮೂರು ದಿನಗಳ ಕಾಲ ತಮಿಳುನಾಡು, ಕೇರಳ, ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪ ದ್ವೀಪಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+