India Weather: ಏಪ್ರಿಲ್ 10ರವರೆಗೂ ದೇಶದ ಹಲವೆಡೆ ಗುಡುಗು, ಸಿಡಿಲು ಸಹಿತ ಮಳೆ ಮುನ್ಸೂಚನೆ
India Weather: ಉತ್ರ ಭಾರತದ ಕೆಲವು ರಾಜ್ಯಗಳನ್ನು ಹೊರತುಪಡಿಸಿದರೆ, ಬಹುತೇಕ ರಾಜ್ಯಗಳಲ್ಲಿ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮತ್ತೊಂದೆಡೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಹಲವು ರಾಜ್ಯಗಳ ಕೆಲವೆಡೆ ಏಪ್ರಿಲ್ 10ರವರಗೂ ಭಾರೀ ಮಳೆ ಸುರಿಯಲಿದ್ದು, ಇನ್ನು ಕೆಲವು ಕಡೆ ಬಿಸಿಲಿನ ವಾತಾವರಣ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ವಾತಾವರಣ ಹೇಗಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಶುಕ್ರವಾರ (ಏಪ್ರಿಲ್ 5) ಅರುಣಾಚಲ ಪ್ರದೇಶ, ಅಸ್ಸಾಂ, ಮಹಾರಾಷ್ಟ್ರ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮತ್ತೊಂದೆಡೆ ಉತ್ತರ ಕರ್ನಾಟಕ, ಜಾರ್ಖಂಡ್, ರಾಯಲಸೀಮಾ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಾಂನಲ್ಲಿ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ತಮಿಳುನಾಡು, ಗಂಗಾ ನದಿ ಪಾತ್ರದಲ್ಲಿ, ಡೆಕ್ಕನ್ ಪ್ರಸ್ಥಭೂಮಿಯಲ್ಲಿ ತಾಪಮಾನದ ಪ್ರಮಾಣ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿರಲಿದೆ ಎಂದು ತಿಳಿಸಿದೆ. ಶನಿವಾರ (ಏಪ್ರಿಲ್ 6) ಮೇಘಾಲಯದಲ್ಲಿ ಬೆಳಗಿನ ಸಮಯದಲ್ಲಿ, ಅರುಣಾಚಲ ಪ್ರದೇಶ ಮತ್ತು ಈಶಾನ್ಯ ಅಸ್ಸಾಂನಲ್ಲಿ ಮಧ್ಯಾಹ್ನದಿಂದ ಗುಡುಗು ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಮಧ್ಯ ಮಹಾರಾಷ್ಟ್ರ, ಗೋವಾ, ಮರಾಠವಾಡ, ಮಧ್ಯಪ್ರದೇಶ, ಛತ್ತೀಸ್‌ಗಢ, ಕರ್ನಾಟಕದ ಕೆಲವೆಡೆ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್‌ಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ. ಇನ್ನು ಅರುಣಾಚಲ ಪ್ರದೇಶದ ಈಶಾನ್ಯ ಭಾಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಇನ್ನು ಮುಂದಿನ ಎರಡು ದಿನಗಳಲ್ಲಿ ಹಿಮಾಲಯ ಪ್ರದೇಶದಲ್ಲಿ ಪ್ರತ್ಯೇಕವಾದ ಸಾಧಾರಣ ಮಳೆಯಾಗಲಿದೆ. ಹಾಗೆಯೇ ಇದೇ ವೇಳೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆಯಾಗಲಿದೆ. ಇನ್ನು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ, ಉತ್ತರಾಖಂಡದಲ್ಲಿ ಮುಂದಿನ ಏಳು ದಿನಗಳ ಕಾಲ ಸಾಧಾರಣ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.
ಏಪ್ರಿಲ್ 5-7ರವರೆಗೆ ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹಮಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್ 6-10ರವರೆಗೆ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್‌ನಲ್ಲಿ ಮತ್ತು ಏಪ್ರಿಲ್ 7-8ರವರೆಗೆ ಬಿಹಾರದಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications