India weather: ದೇಶದ ಈ ಭಾಗಗಳಲ್ಲಿ ನವೆಂಬರ್ 23ರಿಂದ 27ರವರೆಗೆ ಬಲು ಮಳೆ ಮುನ್ಸೂಚನೆ, ಎಲ್ಲೆಲ್ಲಿ? - ಮಾಹಿತಿ
India rain update: ಕಳೆದ ಕೆಲವು ದಿನಗಳಿಂದ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಇಂದಿನಿಂದ ನವೆಂಬರ್ 27ರವರೆಗೂ ಕೂಡ ಹಲವು ರಾಜ್ಯದಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.
ನವೆಂಬರ್ 23 ರಿಂದ ಮಹಾರಾಷ್ಟ್ರ, ಪುಣೆ ಮತ್ತು ಗೋವಾದ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕೊಂಕಣ ಪ್ರದೇಶ ಮತ್ತು ಗೋವಾ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ನವೆಂಬರ್ 23 ರಿಂದ ನವೆಂಬರ್ 27 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.

ಇನ್ನು ಭಾರೀ ಗಾಳಿಯ ಇರಲಿದ್ದು, ಜೊತೆಗೆ ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 23 ರಿಂದ ನವೆಂಬರ್ 27ರವರೆಗೆ ಈ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಪುಣೆಯ ಐಎಂಡಿ ಹವಾಮಾನ ಮುನ್ಸೂಚನೆ ವಿಭಾಗದ ಮುಖ್ಯಸ್ಥ ಅನುಪಮ್ ಕಶ್ಯಪಿ ತಿಳಿಸಿದ್ದಾರೆ.
ನವೆಂಬರ್ 24-27ರ ಅವಧಿಯಲ್ಲಿ ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿರುವ ಪುಣೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ತಿಳಿಸಿದ್ದಾರೆ. ಸ್ಕೈಮೆಟ್ ಪ್ರಕಾರ, ತಮಿಳುನಾಡು ಕರಾವಳಿಯಲ್ಲಿ ಮಳೆಯಾಗಲಿದೆ. ಇದರ ಪ್ರಭಾವ ಕೇರಳ ಮತ್ತು ಪಕ್ಕದ ಪ್ರದೇಶಗಳ ಮೇಲೆ ಇರಲಿದೆ. ಇನ್ನು ನವೆಂಬರ್ 25 ಮತ್ತು 26ರ ನಡುವೆ ಮುಂಬೈ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಮುಂಬೈನಲ್ಲಿ ನವೆಂಬರ್ 24ರಂದು ಕೂಡ ಮೋಡ ಕವಿದ ವಾತಾವರಣ ಕಂಡುಬರುವ ನಿರೀಕ್ಷೆಯಿದೆ. ನವೆಂಬರ್ 25 ಮತ್ತು 26 ರಂದು ನಗರದಾದ್ಯಂತ ಉತ್ತಮ ತುಂತುರು ಮಳೆಯನ್ನು ಕಾಣಬಹುದು, ನವೆಂಬರ್ 27ರಂದು ಮಳೆಯ ಪ್ರಮಾಣ ಕಡಿಮೆಯಾಗಲಿದೆ. ನವೆಂಬರ್ 28ರ ಸುಮಾರಿಗೆ ಮಳೆರಾಯನ ಆರ್ಭಟ ಸಂಪೂರ್ಣ ತಗ್ಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ (ನವೆಂಬರ್ 22) ಎರಡು ದಿನಗಳ ಕಾಲ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ನಿರೀಕ್ಷೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಅತಿ ಹೆಚ್ಚು ಮಳೆ ಸುರಿಯಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಭ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಕಲವು ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಬಿಸಿಲಿನ ವಾತಾರವರಣ ಮುಂದುವರೆಯಲಿದೆ ಎಂದು ತಿಳಿಸಿದೆ.












Click it and Unblock the Notifications