India weather: ಭೀಕರ ಚಳಿ ನಡುವೆಯೂ ಫೆಬ್ರವರಿ 4ರವರೆಗೆ ದೇಶದ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ
India weather: ಇದೀಗ ದೇಶದ ಬಹುತೇಕ ಭಾಗಗಲ್ಲಿ ಸಂಜೆಯಾಗುತ್ತಿದ್ದಂತೆ ಚಳಿಯ ಪ್ರಮಾಣ ಹೆಚ್ಚಾಗುತ್ತಲಿದ್ದು, ಬೆಳಗ್ಗೆ ಗಂಟೆ 10 ಆದರೂ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗುತ್ತಿದೆ. ಇನ್ನು ಕೆಲವೇ ಕಡೆಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದೆ. ಹಾಗೆಯೇ ಹಲವು ರಾಜ್ಯಗಳಲ್ಲಿ ಜನವರಿ 31ರಿಂದ ಫೆಬ್ರವರಿ 4ರವರೆಗೆ ಮಳೆಯಾಗುವ ಮುನ್ಸೂಚನೆ ಇದೆ. ಹಾಗಾದರೆ ಯಾವೆಲ್ಲ ಭಾಗಗಳಲ್ಲಿ ಮಳೆ ಬೀಳಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗಲಿನ ವೇಳೆಯಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಇನ್ನು ಜನವರಿ 31ರಿಂದ ಫೆಬ್ರವರಿ 4ರ ವರೆಗೆ ಹಲವು ರಾಜ್ಯಗಳಲ್ಲಿ ಮಳೆ ಮುನ್ಸೂಚನೆ ಇದೆ. ಜನವರಿ 31ರಂದು ನವದೆಹಲಿಯಲ್ಲಿ ಸಾಧಾರಣ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ಮುಂದಿನ 24 ಗಂಟೆಗಳಲ್ಲಿ, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಲಡಾಖ್, ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಲ್ಲಿ ಅಲ್ಲಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ಇದೆ. ಇನ್ನು ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಮಳೆಯಾಗುವ ಮುನ್ಸೂಚನೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಸಿಕ್ಕಿಂ, ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದೇಶದ ಹಲವು ಭಾಗಗಳಲ್ಲಿ ಚಳಿ ಕಾಣಿಸಿಕೊಂಡರೆ, ಕೆಲ ಭಾಗಗಳಲ್ಲಿ ಈಗಾಗಲೇ ಚಳಿಯ ಪ್ರಮಾಣ ಕಡಿಮೆಯಾಗಿದೆ. ನವದೆಹಲಿಯಲ್ಲೂ ಕಳೆದ 1-2 ದಿನಗಳಿಂದ ಬಿಸಿಲು ಕಾಣಿಸಿಕೊಂಡಿದೆ, ಆದರೆ ಬೆಳಗ್ಗೆ 10 ಗಂಟೆಯಾದರೂ ದಟ್ಟವಾದ ಮಂಜು ಇರಲಿದ್ದು, ಸಂಜೆ ವೇಳೆ ಚಳಿಯ ವಾತಾವರಣ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಚಳಿಯ ಪ್ರಮಾಣ ತುಸು ಹೆಚ್ಚಾಗಿರಲಿ. ಉತ್ತರ ಪ್ರದೇಶದ ಅನೇಕ ಭಾಗಗಳಲ್ಲಿ ಮತ್ತು ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ಪ್ರತ್ಯೇಕ ಪ್ರದೇಶಗಳಲ್ಲಿ ಬೆಳಗ್ಗೆ ಮತ್ತು ರಾತ್ರಿ ವೇಳೆ ದಟ್ಟವಾದ ಮಂಜು ನಿರೀಕ್ಷಿಸಲಾಗಿದೆ.
ಬಿಹಾರ, ಉತ್ತರ ಮಧ್ಯಪ್ರದೇಶ, ಉತ್ತರಾಖಂಡ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಈಶಾನ್ಯ ಭಾರತದ ಪ್ರತ್ಯೇಕ ಪ್ರದೇಶಗಳಲ್ಲಿ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ ಎಂದು ತಿಳಿಸಿದ.
ಹವಾಮಾನ ಇಲಾಖೆಯ ಪ್ರಕಾರ, ನವದೆಹಲಿ, ಹರಿಯಾಣ, ಯುಪಿ, ಪಂಜಾಬ್, ಚಂಡೀಗಢ, ಉತ್ತರ ರಾಜಸ್ಥಾನ, ಬಿಹಾರ, ಜಾರ್ಖಂಡ್, ಈಶಾನ್ಯ ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು 7 ರಿಂದ 10 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ ಎಂದು ತಿಳಿಸಿದೆ.












Click it and Unblock the Notifications