India Weather: ದೇಶದ ಈ ಭಾಗಗಳಲ್ಲಿ ಮುಂದಿನ 5 ದಿನ ಗಡುಗು ಸಹಿತ ಸುನಾಮಿ ಮಳೆ ಮುನ್ಸೂಚನೆ

India Weather: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದ ಪರಿಣಾಮ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ರಣಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಗುರುವಾರ (ಜುಲೈ 18) ಉತ್ತರ ಪ್ರದೇಶ, ಉತ್ತರ ಮಧ್ಯಪ್ರದೇಶ, ದಕ್ಷಿಣ ಛತ್ತೀಸ್‌ಗಢ, ಕರಾವಳಿ ಒಡಿಶಾ ಮತ್ತು ಹಿಮಾಲಯ ಪರ್ವತಗಳ ತಪ್ಪಲಿನಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ವಾಯುವ್ಯ ತೆಲಂಗಾಣ, ಕರಾವಳಿ ಮಹಾರಾಷ್ಟ್ರ, ಗೋವಾ, ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮತ್ತೊಂದೆಡೆ ರಾಜಸ್ಥಾನದಲ್ಲಿ ಗರಿಷ್ಠ ತಾಪಮಾನ 40°C ಅಥವಾ ಅದಕ್ಕಿಂತ ಹೆಚ್ಚು ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

India Weather Heavy rainfall forecast in these states for Nexr five days from july 18th

ಶುಕ್ರವಾರ (ಜುಲೈ 19) ದಕ್ಷಿಣ ಛತ್ತೀಸ್‌ಗಢ, ದಕ್ಷಿಣ ಒಡಿಶಾ, ಪೂರ್ವ ಮಹಾರಾಷ್ಟ್ರ ಮತ್ತು ಹಿಮಾಲಯ ಪರ್ವತಗಳ ತಪ್ಪಲಿನಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ತೆಲಂಗಾಣ, ಈಶಾನ್ಯ ಆಂಧ್ರಪ್ರದೇಶ, ದಕ್ಷಿಣ ಛತ್ತೀಸ್‌ಗಢ, ದಕ್ಷಿಣ ಒಡಿಶಾ, ಕರಾವಳಿ ಮಹಾರಾಷ್ಟ್ರ, ಗೋವಾ, ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ 4-5 ದಿನಗಳವರೆಗೆ ಅಂದರೆ ಮುಂದಿನ ಮೂರು ದಿನಗಳ ಕಾಲ ಚಂಡಮಾರುತದ ಪ್ರಭಾವವು ಆಗ್ನೇಯ ಮಧ್ಯಪ್ರದೇಶ ಮೇಲೆ ಬೀರುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆಯನ್ನು ನೀಡಿದೆ. ಇದೀಗ ದೇಶಾದ್ಯಂತ ಮುಂಗಾರು ಸಕ್ರಿಯವಾಗಿದ್ದು, ಹಲವು ರಾಜ್ಯಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ.

ಈ ಅವಧಿಯಲ್ಲಿ ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕೇರಳ-ಮಾಹೆ, ಲಕ್ಷದ್ವೀಪ, ಕರ್ನಾಟಕ, ಗುಜರಾತ್, ಮಧ್ಯಪ್ರದೇಶ, ಛತ್ತೀಸ್‌ಗಢ, ಕರಾವಳಿ ಆಂಧ್ರ ಪ್ರದೇಶ, ಯಾನಂ ಮತ್ತು ತೆಲಂಗಾಣದಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕವಾಗಿ ಮಳೆಯಾಗುವ ನಿರೀಕ್ಷೆಯಿದೆ.

ಜುಲೈ 19-20ರವರೆಗೆ ಛತ್ತೀಸ್‌ಗಢ, ಜುಲೈ 19-21ರವರೆಗೆ ತೆಲಂಗಾಣ, ಮುಂದಿನ 5 ದಿನಗಳಲ್ಲಿ ಮಧ್ಯಪ್ರದೇಶ, ಗೋವಾ, ಮಧ್ಯ ಮಹಾರಾಷ್ಟ್ರ, ಕಚ್‌, ಕರಾವಳಿ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ತಿಳಿಸಿದೆ.

ಜುಲೈ 18ರಂದು ಕರಾವಳಿ ಕರ್ನಾಟಕ, ದಕ್ಷಿಣ ಕರ್ನಾಟಕ, ಕಚ್ ಮತ್ತು ಕೊಂಕಣ-ಗೋವಾದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ತಮಿಳುನಾಡಿನಲ್ಲೂ ಅಲ್ಲಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜುಲೈ 18-19ರವರೆಗೆ ಕೇರಳ ಮತ್ತು ಗುಜರಾತ್, ಜುಲೈ 18-20ರವರೆಗೆ ಕರಾವಳಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪಶ್ಚಿಮ ಬಂಗಾಳ, ಸಿಕ್ಕಿಂ, ಈಶಾನ್ಯ ಭಾರತ, ಮತ್ತು ಒಡಿಶಾದಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಮುಂದಿನ 5 ದಿನಗಳಲ್ಲಿ ಗಂಗಾನದಿ ಪಶ್ಚಿಮ ಬಂಗಾಳ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಜುಲೈ 18-21ರವರೆಗೆ ಒಡಿಶಾ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ, ಜುಲೈ 20-21ರ ವರೆಗೆ ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಜುಲೈ 19-21ರ ವರೆಗೆ ಅಸ್ಸಾಂ, ಮೇಘಾಲಯ ಮತ್ತು ಗಂಗಾ ಪಶ್ಚಿಮ ಬಂಗಾಳ, ಜುಲೈ 19 ಮತ್ತು 20ರಂದು ಒಡಿಶಾದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 5 ದಿನಗಳಲ್ಲಿ ಜಮ್ಮು-ಕಾಶ್ಮೀರ, ಲಡಾಖ್‌, ಗಿಲ್ಗಿಟ್‌, ಬಾಲ್ಟಿಸ್ತಾನ್‌, ಮುಜಫರಾಬಾದ್, ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ಉತ್ತರ ಪ್ರದೇಶ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ವಾಯುವ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 18-21ರ ವರೆಗೆ ಉತ್ತರಾಖಂಡ ಮತ್ತು ರಾಜಸ್ಥಾನದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜುಲೈ 17 ಮತ್ತು 18ರಂದು ಪಶ್ಚಿಮ ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ, ಜುಲೈ 18-21ರ ವರೆಗೆ ಹಿಮಾಚಲ ಪ್ರದೇಶ ಮತ್ತು ಜುಲೈ 20-21ರ ವರೆಗೆ ಉತ್ತರ ಪ್ರದೇಶ, ಇನ್ನು ಇಂದು ಅಂದರೆ ಜುಲೈ 18ರಂದು ಉತ್ತರಾಖಂಡ ಮತ್ತು ಪೂರ್ವ ರಾಜಸ್ಥಾನದಲ್ಲಿ ಸುನಾಮಿಯಂತಹ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+