India Weather: ಮುಂದಿನ ನಾಲ್ಕು ದಿನ ದೇಶದ ಈ ಭಾಗಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ

India Weather: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯ ಆಬ್ಬರಿಸಿ ಬೊಬ್ಬೆರೆಯುತ್ತಿದ್ದು, ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಹಾಗೆಯೇ ಮುಂದಿನ ನಾಲ್ಕು ದಿನಗಳ ಕಾಲ ಈ ಭಾಗಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಈಗಾಗಲೇ ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕು ಪಡೆದಿದೆ. ಜೂನ್ 1ರಿಂದ ಕರ್ನಾಟಕದಲ್ಲಿ 376.6 ಮಿಲಿ ಮೀಟರ್‌, ಕೇರಳ 831.2 ಮಿಲಿ ಮೀಟರ್‌ ತೆಲಂಗಾಣ 264 ಮಿಲಿ ಮೀಟರ್‌, ಆಂಧ್ರಪ್ರದೇಶದಲ್ಲಿ 230 ಮಿಲಿ ಮೀಟರ್‌ ಮತ್ತು ತಮಿಳುನಾಡಿನಲ್ಲಿ 164 ಮಿಲಿ ಮೀಟರ್‌ ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

India Weather Heavy rainfall forecast in these states for Nexr four days from july 17th

ಇನ್ನು ಕೆಲವೇ ಕ್ಷಣಗಳಲ್ಲಿ ಗುಜರಾತ್, ಕೇರಳ ಕರಾವಳಿಯುದ್ದಕ್ಕೂ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಇನ್ನು ಮುಂದಿನ ಐದು ದಿನಗಳಲ್ಲಿ, ಕೇರಳ, ಲಕ್ಷದ್ವೀಪ, ಕರ್ನಾಟಕ, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ತೆಲಂಗಾಣದಲ್ಲಿ ಗುಡುಗು ಸಹಿತ ವ್ಯಾಪಕವಾದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ರಾಯಲಸೀಮಾದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜುಲೈ 17-21ರವರೆಗೆ ಕರ್ನಾಟಕ, ಕೇರಳದ ಪ್ರತ್ಯೇಕ ಪ್ರದೇಶಗಳಲ್ಲಿ, ತೆಲಂಗಾಣ, ಕರಾವಳಿ ಆಂಧ್ರಪ್ರದೇಶದಲ್ಲಿ ಜುಲೈ 19-21ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದಲ್ಲಿ ಜುಲೈ 17ರಂದು ಅಂದರೆ ಇನ್ನೂ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡಿನಲ್ಲಿ ಜುಲೈ 18-21ರ ವರೆಗೆ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕಕ್ಕೆ ಜುಲೈ 17ರಂದು ರೆಡ್ ಅಲರ್ಟ್‌ ಘೋಷಣೆ ಮಾಡಿದೆ. ಮತ್ತು ಜುಲೈ 18-21ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ದಕ್ಷಿಣ ಒಳನಾಡಿನಲ್ಲಿ ಜುಲೈ 17, 18, 20, 21ರಂದು, ಕೇರಳದಲ್ಲಿ ಜುಲೈ 17-19, ತಮಿಳುನಾಡು ಜುಲೈ 17, ಮತ್ತು ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಜುಲೈ 18-21ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಭಾರೀ ಮಳೆಯಿಂದಾಗಿ ಕೇರಳದಲ್ಲಿ ಭಾರೀ ಅವಾಂತರಗಳೇ ಸೃಷ್ಟಿಯಾಗಿದ್ದು, ಸತತ ಎರಡು ದಿನಗಳಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆಯೇ ಕರ್ನಾಟಕದಲ್ಲಿನ ಹಳೆ ಮೈಸೂರು ಭಾಗ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಈಗಾಗಲೇ ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+