India Weather: ದೇಶದ ಈ ಭಾಗಗಳಲ್ಲಿ ಕಂಡು ಕೇಳರಿಯದ ಭಾರೀ ಮಳೆಯಾಗುವ ಮುನ್ಸೂಚನೆ-ಶಾಲೆಗಳಿಗೆ ರಜೆ ಘೋಷಣೆ
India Weather:: ಈಗಾಗಲೇ ದೇಶದ ಹಲವೆಡೆ ಮಳೆರಾಯನ ಅಬ್ಬರಿಸಿ ಬೊಬ್ಬರೆದು ಹವಾಂತರಗಳನ್ನೇ ಸೃಷ್ಟಿಸಿದ್ದಾನೆ. ಹಾಗೆಯೇ ಭಾರತೀಯ ಹವಾಮಾನ ಇಲಾಖೆ ಮುಂದಿನ ಎರಡ್ಮೂರು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಭಾಗಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮುಂದಿನ 2-3 ದಿನಗಳ ಕಾಲ ರಾಜಸ್ಥಾನ, ಗುಜರಾತ್, ಗೋವಾ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಅಲ್ಲದೆ, ಇದೇ ವೇಳೆ ದಕ್ಷಿಣ ರಾಜಸ್ಥಾನ, ಮಧ್ಯ ಮಹಾರಾಷ್ಟ್ರ ಮತ್ತು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದ್ದು, ಕೆಲವೆಡೆ ಪ್ರವಾದಹ ಮುನ್ಸೂಚನೆಯನ್ನು ಕೂಡ ಹವಾಮಾನ ಇಲಾಖೆ ನೀಡಿದೆ.

ನವದೆಹಲಿ ಹವಾಮಾನದ ವಿವರ: ಇಂದು (ಆಗಸ್ಟ್ 27) ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆ ನವದೆಹಲಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇನ್ನು ನಗರದಲ್ಲಿ ಬಹುತೇಕ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಈ ಭಾಗದಲ್ಲಿ ಗಾಳಿ ವೇಗವು ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಇನ್ನು ಇಂದಿನ ಗರಿಷ್ಠ ತಾಪಮಾನವು ಸುಮಾರು 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗುಜರಾತ್‌ನಲ್ಲಿ ಶಾಲೆಗಳಿಗೆ ರಜೆ: ಗುಜರಾತ್‌ನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಇಂದು (ಆಗಸ್ಟ್ 27) ರಜೆ ಘೋಷಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವ ಪ್ರಫುಲ್ ಪನ್ಶೇರಿಯಾ ಘೋಷಿಸಿದ್ದಾರೆ. ಅಲ್ಲದೆ ಮುಂದಿನ 2-3 ದಿನಗಳ ಕಾಲ ಗುಜರಾತ್‌ನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಭಾಗದಲ್ಲಿ ಈಗಾಗಲೇ ಕಳೆದ ಎರಡು ದಿನಗಳಲ್ಲಿ ವ್ಯಾಪಕವಾಗಿ ಭಾರೀ ಮಳೆಯಾಗಿದ್ದು, ಅಪಾಯದ ಸ್ಥಳಗಳಿಂದ ನೂರಾರು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಈ ಭಾಗದಲ್ಲಿ ಸಾಧಾರಣ ಮಳೆ: ಮಂಗಳವಾರ ಮತ್ತು ಬುಧವಾರದಂದು ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಈ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.












Click it and Unblock the Notifications