India Weather: ಮುಂದಿನ 5-6 ದಿನಗಳ ಕಾಲ ದೇಶದ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ-ರೆಡ್ ಅಲರ್ಟ್ ಘೋಷಣೆ
India Weather: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ 5-6 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮುಂದಿನ ಮೂರು ದಿನಗಳ ಕಾಲ ಗುಜರಾತ್‌ನ ಕಚ್ ಮತ್ತು ಸೌರಾಷ್ಟ್ರದ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಇದೇ ವೇಳೆ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಗುಜರಾತ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಕರಾವಳಿ ಕರ್ನಾಟಕ ಭಾಗಕ್ಕೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಪಶ್ಚಿಮ ಮತ್ತು ಮಧ್ಯ ಭಾರತದ ಹವಾಮಾನ: ಪೂರ್ವಮಧ್ಯಪ್ರದೇಶ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಗುಜರಾತ್ ಮತ್ತು ಸೌರಾಷ್ಟ್ರದಲ್ಲಿ ಇದೇ ರೀತಿಯ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ. ಮಧ್ಯ ಮಹಾರಾಷ್ಟ್ರ, ಗೋವಾ ಮತ್ತು ಕೊಂಕಣದಲ್ಲೂ ಭಾರೀ ಮಳೆಯಾಗಲಿದ ಎಂದು ತಿಳಿಸಿದೆ.
ಪೂರ್ವ ಮತ್ತು ಈಶಾನ್ಯ ಭಾರತದ ಹವಾಮಾನ: ಒಡಿಶಾ, ಬಿಹಾರ, ಅರುಣಾಚಲ ಪ್ರದೇಶ ಮತ್ತು ಜಾರ್ಖಂಡ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ನಾಗಾಲ್ಯಾಂಡ್, ಮೇಘಾಲಯ ಮತ್ತು ಅಸ್ಸಾಂನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ: ಕೇರಳದಲ್ಲಿ ಮುಂದಿನ 6 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ಕರಾವಳಿ ಕರ್ನಾಟಕದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ವಾಯುವ್ಯ ಭಾರತದ ಹವಾಮಾನದ ವಿವರ: ಮುಜಫರಾಬಾದ್, ಲಡಾಖ್, ಬಾಲ್ಟಿಸ್ತಾನ್, ಗಿಲ್ಗಿಟ್ ಮತ್ತು ಜಮ್ಮು-ಕಾಶ್ಮೀರದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆ ಬೀಳುವ ಸಾಧ್ಯತೆಯುದೆ. ಅಲ್ಲದೆ, ಪಂಜಾಬ್, ಪಶ್ಚಿಮ ಮತ್ತು ಪೂರ್ವ ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶದಲ್ಲೂ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.












Click it and Unblock the Notifications