India Weather: ದೇಶದ ಈ ಭಾಗಗಳಲ್ಲಿ ಮುಂದಿನ 5-6 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
India Weather: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದು ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಹಾಗೆಯೇ ಮುಂದಿನ 5-6 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಮುಂದಿನ ಹಲವು ದಿನಗಳ ಕಾಲ ದೇಶಾದ್ಯಂತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಗುಜಾರಾತ್‌ನ ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಹಾಗೆಯೇ ಕೇರಳ, ಒಡಿಶಾ, ಕರಾವಳಿ ಕರ್ನಾಟಕ, ತೆಲಂಗಾಣ, ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇನ್ನು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಗುಜಾರಾತ್‌ನ ಕಚ್, ಸೌರಾಷ್ಟ್ರ ಸೇರಿ ತೆಲಂಗಾಣ, ಕರಾವಳಿ ಆಂಧ್ರಪ್ರದೇಶ, ಕೇರಳ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಸೆಪ್ಟೆಂಬರ್ 2ರಂದು ನವದೆಹಲಿ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಗಿಲ್ಗಿಟ್, ಬಾಲ್ಟಿಸ್ತಾನ್, ಹರಿಯಾಣ, ಚಂಡೀಗಢ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಆಗಸ್ಟ್ 30 ರಿಂದ ಸೆಪ್ಟೆಂಬರ್ 2ರ ವರೆಗೆ ಉತ್ತರಾಖಂಡ್, ಸೆಪ್ಟೆಂಬರ್ 1 ಮತ್ತು 2ರಂದು ಪೂರ್ವ ಉತ್ತರ ಪ್ರದೇಶ, ಸೆಪ್ಟೆಂಬರ್ 2 ಮತ್ತು 3ರಂದು ಪಶ್ಚಿಮ ರಾಜಸ್ಥಾನದಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಧ್ಯ ಮತ್ತು ಪಶ್ಚಿಮ ಭಾರತದ ಹವಾಮಾನ: ಸೆಪ್ಟೆಂಬರ್ 2 & 3ರಂದು ಗುಜಾರಾತ್‌ನ ಕಚ್, ಸೌರಾಷ್ಟ್ರ ಮತ್ತು ಛತ್ತೀಸ್‌ಗಢದ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಗೋವಾ, ಕೊಂಕಣ, ಆಗಸ್ಟ್ 31ರಿಂದ ಸೆಪ್ಟೆಂಬರ್ 4ರ ವರೆಗೆ ಮಧ್ಯ ಮಹಾರಾಷ್ಟ್ರ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದ ಹವಾಮಾನದ ವಿವರ: ಇನ್ನು ಕರಾವಳಿ ಕರ್ನಾಟಕ, ಕರ್ನಾಟಕದ ಒಳನಾಡು ಮತ್ತು ಕೇರಳದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಹಾಗೆಯೇ ತೆಲಂಗಾಣ, ಯಾನಂ ಮತ್ತು ಉತ್ತರ ಒಳನಾಡಿದ ಕರ್ನಾಟಕದಲ್ಲಿ ಇದೇ ರೀತಿಯ ಹವಾಮಾನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಶಾನ್ಯ ಮತ್ತು ಪೂರ್ವ ಭಾರತದ ಹವಾಮಾನ: ಮುಂದಿನ 6 ದಿನಗಳ ಕಾಲ ಈಶಾನ್ಯ ರಾಜ್ಯಗಳಾದ ತ್ರಿಪುರ, ನಾಗಾಲ್ಯಾಂಡ್, ಮಣಿಪುರ ಮತ್ತು ಮಿಜೋರಾಂನಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ ಮತ್ತು ಅಂಡಮಾನ್, ನಿಕೋಬಾರ್ ದ್ವೀಪ, ಮೇಘಾಲಯ, ಅಸ್ಸಾಂ & ಒಡಿಶಾದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications