India Weather: ದೇಶದ ಈ ಭಾಗಗಳಲ್ಲಿ ಮುಂದಿನ 5 ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
India Weather: ದೇಶದ ಹಲವು ಭಾಗಗಳಲ್ಲಿ ಮಳೆರಾಯನ ಆರ್ಭಟ ಹೆಚ್ಚಾಗುತ್ತಲೇ ಇದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಇಲ್ಲಿ ತಿಳಿಯಿರಿ.
ಆಗಸ್ಟ್ 30ರಂದು ಒಡಿಶಾ, ಕರಾವಳಿ ಕರ್ನಾಟಕ, ಕೇರಳ, ತೆಲಂಗಾಣ, ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಭಾರೀ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ನವದೆಹಲಿಯಲ್ಲಿ ನಾಳೆ ದಿನವಿಡೀ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಹವಾಮಾನ ಇಲಾಖೆಯ ಪ್ರಕಾರ, ಆಗ್ನೇಯ ಉತ್ತರ ಪ್ರದೇಶದ ಮೇಲೆ ಚಂಡಮಾರುತದ ಪರಿಚಲನೆ ಇದ್ದು, ಈ ಭಾಗದಲ್ಲಿ ಭಾರೀ ಮಳೆ ಸುಯುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನು ಈಗಾಗಲೇ ಭಾರೀ ಮಳೆಯಿಂದ ಗುಜರಾತ್‌ನ ಬಹುತೇಕ ಭಾಗಗಳಲ್ಲಿ ಪ್ರವಾಹದ ಪರಿಸ್ಥಿತಿತಿ ನಿರ್ಮಾಣವಾಗಿದ್ದು, ಇದರಿಂದ ಇಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ. ಹಾಗೆಯೇ ನಾಳೆ (ಆಗಸ್ಟ್ 30) ಇಲ್ಲಿನ ಪಶ್ಚಿಮ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಮುನ್ಸೂಚನೆ ನೀಡಿದೆ.
ಈಗಾಗಲೇ ಗುಜರಾತ್‌ನ 18 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಸುರಿದ ಪರಿಣಾಮ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಇಲ್ಲಿನ ಜನರು ತತ್ತರುಸಿ ಹೋಗಿದ್ದಾರೆ. ಕಚ್, ದ್ವಾರಕಾ, ಜಾಮ್‌ನಗರ್, ಮೊರ್ಬಿ, ಸುರೇಂದ್ರನಗರ, ಜುನಾಗಢ್, ರಾಜ್‌ಕೋಟ್, ಬೊಟಾಡ್, ಗಿರ್ ಸೋಮನಾಥ್, ಅಮ್ರೇಲಿ ಮತ್ತು ಭಾವ್‌ನಗರ್ ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ. ಹಾಗೆಯೇ ಈ ಭಾಗಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಮುಂದುವರೆಯುವ ಮುನ್ಸೂವನೆ ನೀಡಿದೆ.
ಇನ್ನು ನವದೆಹಲಿಯಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನವದೆಹಲಿಯ ಹಲವಾರು ಭಾಗಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಇದರಿಂದ ಗುರುವಾರ ಬೆಳಗ್ಗೆ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.












Click it and Unblock the Notifications