India Weather: ದೇಶದ ಈ ಭಾಗಗಳಲ್ಲಿ ಮುಂದಿನ ಒಂದು ವಾರ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

India Weather: ದೇಶದ ಬಹುತೇಕ ಭಾಗಗಳಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗಿದ್ದು, ಕೆಲವೇ ರಾಜ್ಯಗಳಲ್ಲಿ ಮಾತ್ರ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ರಣಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವದೆಹಲಿಯಲ್ಲಿ ಮೋಡ ಕವಿದ ವಾತಾವರಣವಿದ್ದು ಇಂದು (ಆಗಸ್ಟ್ 21) ಇನ್ನೂ ಕೆಲವೇ ಕ್ಷಣಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ಇಂದು ಈ ಭಾಗದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನವು ಇಂದು 25 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ತಿಳಿದುಬಂದಿದೆ.

India Weather Heavy rainfall forecast in these states for next 7 days from August 21st

ಇನ್ನು ನವದೆಹಲಿಯ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ಈ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ಇದ್ದು, ಮೂರು ದಿನ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈಗಾಗಲೇ ಮಂಗಳವಾರ (ಆಗಸ್ಟ್‌ 20) ಬೆಳಗ್ಗೆ ಮಳೆಯಾದ ಪರಿಣಾಮ ರಾಷ್ಟ್ರ ರಾಜಧಾನಿ ನವದೆಹಲಿಯ ಹಲವೆಡೆ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದ ಘಟನೆ ನಡೆಯಿತು.

ಇನ್ನು ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರಾ, ಮಣಿಪುರ, ಕೇರಳ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗಗಳಿಗೆ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಆರೆಂಜ್‌ ಆಲರ್ಟ್‌ ಘೋಷಣೆ ಮಾಡಿದೆ. ಆಗಸ್ಟ್ 21ರಿಂದ 25ರವರೆಗೆ ಹಿಮಾಚಲ ಪ್ರದೇಶದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್‌ 26ರಂದು ಉತ್ತರಾಖಂಡ ಮತ್ತು ರಾಜಸ್ಥಾನದಲ್ಲಿ ಮತ್ತು ಆಗಸ್ಟ್ 24 ರವರೆಗೆ ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಆಗಸ್ಟ್ 21ರಂದು ಮಧ್ಯಪ್ರದೇಶ, ಆಗಸ್ಟ್ 23ರಿಂದ ಆಗಸ್ಟ್ 26ರ ವರೆಗೆ ಮಹಾರಾಷ್ಟ್ರದಲ್ಲಿ, ಆಗಸ್ಟ್ 24ರಿಂದ 26ರ ವರೆಗೆ ಛತ್ತೀಸ್‌ಗಢ, ಗೋವಾ, ಗುಜರಾತ್‌ನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 21ರಿಂದ 24ರ ವರೆಗೆ ಅಸ್ಸಾಂ ಮತ್ತು ಮೇಘಾಲಯದಲ್ಲಿ, ಆಗಸ್ಟ್‌ 25ರ ವರೆಗೆ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 27ರ ವರೆಗೆ ಲಕ್ಷದ್ವೀಪ, ಕರಾವಳಿ ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್, ತೆಲಂಗಾಣ, ಕರಾವಳಿ ಆಂಧ್ರಪ್ರದೇಶದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+