India Weather: ದೇಶದ ಈ ಭಾಗಗಳಲ್ಲಿ ಮುಂದಿನ ಒಂದು ವಾರ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
India Weather: ದೇಶದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಹಾಗೆಯೇ ಮುಂದಿನ 7 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಇಲ್ಲಿ ತಿಳಿಯಿರಿ.
ದೇಶದ ಹಲವೆಡೆ ಮತ್ತೆ ಮುಂಗಾರು ಮಳೆ ಚುರುಕು ಪಡೆದಿದೆ. ಹಾಗೆಯೇ ಮುಂದಿನ ಕೆಲವು ದಿನಗಳ ಕಾಲ ಕರಾವಳಿ ಆಂಧ್ರ ಪ್ರದೇಶ, ಗುಜರಾತ್ ಪ್ರದೇಶ, ಮರಾಠವಾಡ, ಅಸ್ಸಾಂ, ಉತ್ತರಾಖಂಡ ಮತ್ತು ಪಶ್ಚಿಮ ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಭಾರತದ ಹವಾಮಾನ: ಮುಂದಿನ ಒಂದು ವಾರ ಕರಾವಳಿ ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ವ್ಯಾಪಕವಾದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಆಂಧ್ರಪ್ರದೇಶ, ಯಾನಂ, ತೆಲಂಗಾಣ, ರಾಯಲಸೀಮಾ ಮತ್ತು ಕರ್ನಾಟಕದ ಒಳನಾಡಿನಲ್ಲಿ ಅಲ್ಲಲ್ಲಿ ಸಾಕಷ್ಟು ವ್ಯಾಪಕವಾಗಿ ಮಳೆಯಾಗಲಿದೆ. ಹಾಗೆಯೇ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಚದುರಿದ ಮಳೆಯಾಗಲಿದೆ ಎಂದು ತಿಳಿಸಿದೆ.ಸೆಪ್ಟೆಂಬರ್ 2ರಿಂದ 5ರ ವರೆಗೆ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ಸೆಪ್ಟೆಂಬರ್ 2ರಂದು ತೆಲಂಗಾಣ, ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 4ರ ವರೆಗೆ ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಪಶ್ಚಿಮ ಮತ್ತು ಮಧ್ಯ ಭಾರತದ ಹವಾಮಾನ: ಮುಂದಿನ ಒಂದು ವಾರ ಪಶ್ಚಿಮ ಮತ್ತು ಮಧ್ಯ ಭಾರತದಲ್ಲಿ ವ್ಯಾಪಕವಾಗಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.ಇತ್ತೀಚಿನ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಸೆಪ್ಟೆಂಬರ್ 2 ಮತ್ತು 3ರಂದು ಗುಜರಾತ್‌ನಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ.
ಸೆಪ್ಟೆಂಬರ್ 3ರಂದು ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಮತ್ತು ಸೆಪ್ಟೆಂಬರ್ 2ರಂದು ಪಶ್ಚಿಮ ಮಧ್ಯಪ್ರದೇಶ ಮತ್ತು ಮರಾಠವಾಡದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆ ಸುರಿಯಲಿದ ಎಂದು ಮುನ್ಸೂಚನೆ ನೀಡಿದೆ.
ಮುಂದಿನ 7 ದಿನಗಳ ಕಾಲ ಕೊಂಕಣ ಮತ್ತು ಗೋವಾ, ಸೆಪ್ಟೆಂಬರ್ 2 ರಿಂದ 8ರ ವರೆಗೆ ಮಧ್ಯ ಮಹಾರಾಷ್ಟ್ರ, ಸೆಪ್ಟೆಂಬರ್ 2ರಿಂದ 5ರ ವರೆಗೆ ಗುಜರಾತ್, ಸೆಪ್ಟೆಂಬರ್ 2ರಿಂದ 4ರ ವರೆಗೆ ಸೌರಾಷ್ಟ್ರ ಮತ್ತು ಕಚ್, ಸೆಪ್ಟೆಂಬರ್ 2ರಿಂದ 6ರ ವರೆಗೆ ಪಶ್ಚಿಮ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 20ರಂದು ಪೂರ್ವ ಮಧ್ಯಪ್ರದೇಶ ಮತ್ತು ಮರಾಠವಾಡ, ಸೆಪ್ಟೆಂಬರ್ 4ರ ವರೆಗೆ ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಪೂರ್ವ ಮತ್ತು ಈಶಾನ್ಯ ಭಾರತದ ಹವಾಮಾನ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಹಿಮಾಲಯ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಿಹಾರ, ಜಾರ್ಖಂಡ್, ಬಿಹಾರ, ಜಾರ್ಖಂಡ್, ಒಡಿಶಾದಲ್ಲೂ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 2ರಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಮುಂದಿನ 7 ದಿನಗಳ ಕಾಲ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದದಲ್ಲಿ ಇದೆ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.
ವಾಯುವ್ಯ ಭಾರತದ ಹವಾಮಾನ: ಒಂದು ವಾರ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ರಾಜಸ್ಥಾನ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ನವದೆಹಲಿಯಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಏಳು ದಿನಗಳಲ್ಲಿ ಪೂರ್ವ ರಾಜಸ್ಥಾನ, ಸೆಪ್ಟೆಂಬರ್ 3ರಂದು ಹಿಮಾಚಲ ಪ್ರದೇಶ, ಸೆಪ್ಟೆಂಬರ್ 2-4ರ ವರೆಗೆ ರಂದು ಉತ್ತರಾಖಂಡ, ಸೆಪ್ಟೆಂಬರ್ 3 ಮತ್ತು 4ರಂದು ಪಶ್ಚಿಮ ಉತ್ತರ ಪ್ರದೇಶ, ಸೆಪ್ಟೆಂಬರ್ 4 & 5ರಂದು ಪೂರ್ವ ಉತ್ತರ ಪ್ರದೇಶ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications