India Weather: ದೇಶದ ಈ ಭಾಗಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

India Weather: ದೇಶದ ಹಲವೆಗೆ ಮಳೆರಾಯನ ಇದೀಗ ತಗ್ಗಿದ್ದು, ಕೆಲವು ರಾಜ್ಯಗಳಲ್ಲಿ ಮಾತ್ರ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೆ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಇಲ್ಲಿ ತಿಳಿಯಿರಿ.

ಆಗಸ್ಟ್ 11ರಂದು ತಮಿಳುನಾಡು, ರಾಜಸ್ಥಾನ, ಉತ್ತರಾಖಂಡ, ಬಿಹಾರ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಅಸ್ಸಾಂ, ಮೇಘಾಲಯ ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

India Weather Heavy rainfall forecast in these states for next five days from august 11th

ಹವಾಮಾನ ಇಲಾಖೆ ಪ್ರಕಾರ, ನವದೆಹಲಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಆಗಸ್ಟ್ 10ರಂದು, ನವದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾದ ಹಿನ್ನೆಲೆ ಹಲವೆಡೆ ದೊಡ್ಡ ದೊಡ್ಡ ಮರಗಳು ಧರೆಗುಳಿದ ಪರಿಣಾಮ ಸಂಚಾರ ದಟ್ಟಣೆಯಾಗಿ ವಾಹನ ಸವಾರರು ಪರದಾಡಿದ್ದಾರೆ.

ಇನ್ನು ಆಗಸ್ಟ್ 16ರ ವರೆಗೆ ಹಿಮಾಚಲ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಉತ್ತರಾಖಂಡ, ರಾಜಸ್ಥಾನ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಉತ್ತರ ಪ್ರದೇಶ, ತ್ರಿಪುರಾ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ಹರಿಯಾಣದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ಆಗಸ್ಟ್ 11ರಂದು ಉತ್ತರಾಖಂಡ ಮತ್ತು ಆಗಸ್ಟ್ 14ರವರೆಗೆ ರಾಜಸ್ಥಾನದಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಆಗಸ್ಟ್ 11ರಂದು ಮಧ್ಯಪ್ರದೇಶ, ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ಲಘು/ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮುಂಬೈನಲ್ಲಿ ಮೋಡ ಕವಿದ ವಾತವಾರಣ ಇದ್ದು, ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಆಗಸ್ಟ್ 14ರಿಂದ 15ರವರೆಗೆ ವರೆಗೆ ತಮಿಳುನಾಡು, ಕೇರಳದಲ್ಲಿ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಆಗಸ್ಟ್ 11ರಿಂದ 13ರ ವರೆಗೆ ತಮಿಳುನಾಡು, ಕೇರಳದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+