India Weather: ಮುಂದಿನ 5 ದಿನ ದೇಶದ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ
India Weather: ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಇನ್ನು ಕೆಲವು ಭಾಗಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.
ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು (ಆಗಸ್ಟ್ 18) ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ಈ ಭಾಗಗಳಿಗೆ ಮುಂಜಾಗ್ರತಾ ಕ್ರಮವಾಗಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಮಳೆ ಮುಂದುವರೆಯಲಿದೆ ಅಂತಲೂ ತಿಳಿಸಿದೆ. ಇಲ್ಲಿದೆ ನೋಡಿ ವಿವರ.

ಆಗಸ್ಟ್ 23ರವರೆಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದು, ಇಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮುಂದಿನ ಐದು ದಿನಗಳ ಕಾಲ ವ್ಯಾಪಕವಾದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪಶ್ಚಿಮ ಮತ್ತು ಮಧ್ಯ ಭಾರತಕ್ಕೆ ಸಂಬಂಧಿಸಿದಂತೆ, ಮಧ್ಯಪ್ರದೇಶ, ಕೊಂಕಣ ಮತ್ತು ಗೋವಾ ಮತ್ತು ಛತ್ತೀಸ್‌ಗಢದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಗುಜರಾತ್, ಮರಾಠವಾಡ ಮತ್ತು ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಅಲ್ಲಲ್ಲಿ ಚದುರಿದ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪೂರ್ವ ಮತ್ತು ಈಶಾನ್ಯ ಭಾರತದ ಹವಾಮಾನ: ಆಗಸ್ಟ್ 20ರಿಂದ 22ರ ವರೆಗೆ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಆಗಸ್ಟ್ 20ರ ವರೆಗೆ ಬಿಹಾರ, ಜಾರ್ಖಂಡ್ ಮತ್ತು ಒಡಿಶಾ, ಆಗಸ್ಟ್ 22 ರವರೆಗೆ ಅರುಣಾಚಲದಲ್ಲಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ದಕ್ಷಿಣ ಭಾರತದ ಹವಾಮಾನ: ಮುಂದಿನ 5 ದಿನಗಳಲ್ಲಿ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುಮ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ಇಂದು (ಆಗಸ್ಟ್ 18) ಪ್ರತ್ಯೇಕವಾ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 20ರ ವರೆಗೆ ಲಕ್ಷದ್ವೀಪದಲ್ಲಿ ಮತ್ತು ಕರ್ನಾಟಕದಲ್ಲೂ ಇದೇ ರೀತಿಯ ಹವಾಮಾನ ಮುಂದುವರೆಯಲಿದೆ ಎಂದು ತಿಳಿಸಿದೆ.












Click it and Unblock the Notifications