India Weather: ಮುಂದಿನ ನಾಲ್ಕೈದು ದಿನ ದೇಶದ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ
India Weather: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಸುನಾಮಿಯಂತಹ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾಹಿತಿ ಇಲ್ಲಿದೆ ಗಮನಿಸಿ.
ಈಗಾಗಲೇ ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇನ್ನು ಕರ್ನಾಟಕದ ಮಲೆನಾಡು ಭಾಗದಲ್ಲಿಯೂ ಗುಡ್ಡ ಕುಸಿತ ಉಂಟಾಗಿದ್ದು, ಇದರಿಂದ ಆ ಭಾಗದಲ್ಲಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಮತ್ತೊಂದೆಡೆ, ಕೇರಳ, ಮಹಾರಾಷ್ಟ್ರ, ಗುಜಾರಾತ್, ಕರ್ನಾಟಕದ ಹಲವು ಭಾಗಗಲ್ಲಿ ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪೂರ್ವ ರಾಜಸ್ಥಾನದಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಮತ್ತು ಉತ್ತರಾಖಂಡದಲ್ಲಿ ವಾರವಿಡೀ ಇದೇ ರೀತಿಯ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ. ಅದರಲ್ಲೂ ದಕ್ಷಿಣ ಭಾರತದಲ್ಲಿ ಮುಂದಿನ ನಾಲ್ಕರಿಂದ ಐದು ದಿನಗಳ ಕಾಲ ಮುಂಗಾರು ಮಳೆ ಮತ್ತಷ್ಟು ಚುರುಕು ಪಡೆಯಲಿದೆ ಎಂದು ತಿಳಿಸಿದೆ.
ಕಳೆದ ವಾರ ಪಶ್ಚಿಮ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರಿ ಮಳೆ ಸುರಿದ ಪರಿಣಾಮ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇನ್ನು ವಾರ ಭಾರತದ ಪಶ್ಚಿಮ ಕರಾವಳಿ ಮತ್ತು ಮಧ್ಯ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಗುಜರಾತ್, ಸೌರಾಷ್ಟ್ರ ಮತ್ತು ಕಚ್‌ನ ಅಕ್ಕಪಕ್ಕದ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ತಿಳಿಸಿದೆ.
ಇಂದು (ಆಗಸ್ಟ್ 01) ಇನ್ನೂ ಕೆಲವೇ ಕ್ಷಣಗಳಲ್ಲಿ ಭಾರತದ ಪಶ್ಚಿಮ ಕರಾವಳಿಯುದ್ದಕ್ಕೂ, ಕೊಂಕಣ ಮತ್ತು ಗೋವಾದ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಆಗಸ್ಟ್ 2 ರವರೆಗೆ ಮಹಾರಾಷ್ಟ್ರ, ಛತ್ತೀಸ್‌ಗಢ, ಮಧ್ಯಪ್ರದೇಶದಲ್ಲಿ ಇದೇ ರೀತಿಯ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇನ್ನು ಜೂನ್‌ನಲ್ಲಿ ಮಂದಗತಿಯಲ್ಲಿ ಸಾಗಿದ್ದ ಮುಂಗಾರು ಜುಲೈನಲ್ಲಿ ಚುರುಕು ಪಡೆದುಕೊಂಡಿತು. ಕೇರಳ, ಕರಾವಳಿ ಕರ್ನಾಟಕ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಭಾಗಗಳಿಗೆ ಭಾರೀ ಮಳೆಯಾಯಿತು. ಇನ್ನು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಕಾರೈಕಲ್ ಸೇರಿದಂತೆ ತಮಿಳುನಾಡಿನಲ್ಲಿ ಮುಂಬರುವ ಸೋಮವಾರ ಮತ್ತು ಮಂಗಳವಾರ ಭಾರೀ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಿದೆ.
ಒಡಿಶಾ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಿಮಾಲಯ ಮತ್ತು ಸಿಕ್ಕಿಂಗೆ ಸಮೀಪದಲ್ಲಿರುವ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಪ್ರತ್ಯೇಕವಾಗಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರಾಖಂಡ, ಪಶ್ಚಿಮ ಮಧ್ಯಪ್ರದೇಶ, ಪೂರ್ವ ರಾಜಸ್ಥಾನ, ಗುಜರಾತ್, ಕೇರಳ, ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಇದೇ ವೇಳೆ ಹಿಮಾಚಲ ಪ್ರದೇಶ, ಪಂಜಾಬ್, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಮಧ್ಯ ಮಹಾರಾಷ್ಟ್ರ, ತಮಿಳುನಾಡು, ಪುದುಚೇರಿ, ಕಾರೈಕಲ್, ದಕ್ಷಿಣ ಒಳ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ
ಹರಿಯಾಣ, ನವದೆಹಲಿ, ಚಂಡೀಗಢ, ಹಿಮಾಚಲ ಪ್ರದೇಶ, ಪಶ್ಚಿಮ ಉತ್ತರ ಪ್ರದೇಶ, ಕರಾವಳಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನ ವರದಿಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ, ಮಹಾರಾಷ್ಟ್ರದ ಹಲವೆಡೆಯೂ ಇದೇ ವಾತಾವರಣ ಮುಂದುವರೆದಿತ್ತು ಎಂದು ತಿಳಿಸಿದೆ.












Click it and Unblock the Notifications