India Weather: ದೇಶದ ಈ ಭಾಗಗಳಲ್ಲಿ ಮುಂದಿನ ಒಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
India Weather: ದೇಶದ ಬಹುತೇಕ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಇನ್ನು ಕೆಲವು ಭಾಗಗಳಲ್ಲಿ ಮಾತ್ರ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಒಂದು ವಾರ ದೇಶಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾಹಿತಿ ಇಲ್ಲಿದೆ ಗಮನಿಸಿ.
ಮುಂದಿನ ವಾರ ದೇಶಾದ್ಯಂತ ವ್ಯಾಪಕವಾದ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರಾಖಂಡ್, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಪಶ್ಚಿಮ ಮಧ್ಯಪ್ರದೇಶ, ಗೋವಾ, ಮಣಿಪುರ, ತಮಿಳುನಾಡು, ಪುದುಚೇರಿ ಮತ್ತು ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಆಗಸ್ಟ್ 16ರಂದು ಅಂದರೆ ಇಂದು ಕರ್ನಾಟಕ, ಛತ್ತೀಸ್‌ಗಢ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ಪೂರ್ವ ರಾಜಸ್ಥಾನದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಭಾಗಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆಗಸ್ಟ್ 17ರ ವರೆಗೆ ಸಾಧಾರಣ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇದೇ ವೇಳೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿಯಲ್ಲಿ ವ್ಯಾಪಕವಾದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 4-5 ದಿನಗಳಲ್ಲಿ ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಭಾರೀ ಮಳೆ ಸುರಯಲಿದೆ ಎಂದು ತಿಳಿಸಿದೆ.
ಉತ್ತರ ಭಾರತದ ಹವಾಮಾನದ ವಿವರ: ಆಗಸ್ಟ್ 16-17ರ ವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಪಶ್ಚಿಮ ರಾಜಸ್ಥಾನ, ಆಗಸ್ಟ್ 16-22ರ ವರೆಗೆ ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶ, ಆಗಸ್ಟ್ 16ರಂದು ಹರಿಯಾಣ, ಚಂಡೀಗಢ ಮತ್ತು ನವದೆಹಲಿಯಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಆಗಸ್ಟ್ 16ರಂದು ಪೂರ್ವ ರಾಜಸ್ಥಾನದಲ್ಲಿ ಅತೀ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದೇ ವೇಳೆ ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೊಂಕಣ, ಗೋವಾ ಮತ್ತು ಗುಜರಾತ್‌ನ ಕೆಲವೆಡೆ ಅಲ್ಲಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪಶ್ಚಿಮ ಮತ್ತು ಮಧ್ಯ ಭಾರತದ ಹವಾಮಾನ: ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಒಂದು ವಾರ ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ವ್ಯಾಪಕವಾದ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಗೆಯೇ ಕೊಂಕಣ, ಗೋವಾ ಮತ್ತು ಗುಜರಾತ್‌ನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಮತ್ತು ಮಧ್ಯ ಮಹಾರಾಷ್ಟ್ರ, ಮರಾಠವಾಡ, ಸೌರಾಷ್ಟ್ರ ಮತ್ತು ಕಚ್‌ನಲ್ಲೂ ಇದೇ ವಾತಾವಣ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ.
ಆಗಸ್ಟ್ 16ರಿಂದ 21ರವರೆಗೆ ಪಶ್ಚಿಮ ಮಧ್ಯಪ್ರದೇಶ, ಆಗಸ್ಟ್ 18-21ರ ವರೆಗೆ ಪೂರ್ವ ಮಧ್ಯಪ್ರದೇಶ, ಆಗಸ್ಟ್ 18-20ರ ವರೆಗೆ ಕೊಂಕಣ ಮತ್ತು ಗೋವಾ, ಆಗಸ್ಟ್ 16-22ರ ವರೆಗೆ ಛತ್ತೀಸ್‌ಗಢದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಪೂರ್ವ ಮತ್ತು ಈಶಾನ್ಯ ಭಾರತದ ಹವಾಮಾನ: ಹವಾಮಾನ ಇಲಾಖೆ ಪ್ರಕಾರ, ಈ ವಾರಪೂರ್ತಿ ಪೂರ್ವ ಭಾರತದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಮತ್ತು ಈಶಾನ್ಯದಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಆಗಸ್ಟ್ 16ರಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಆಗಸ್ಟ್ 16-18ರ ವರೆಗೆ ಪಶ್ಚಿಮ ಬಂಗಾಳ, ಆಗಸ್ಟ್ 16-22ರ ವರೆಗೆ ಬಿಹಾರ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ, ಆಗಸ್ಟ್ 16-20ರ ವರೆಗೆ ಜಾರ್ಖಂಡ್, ಆಗಸ್ಟ್ 16-21ರ ವರೆಗೆ ಒಡಿಶಾದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 16 ಮತ್ತು 17ರಂದು ಗಂಗಾನದಿ ಪಶ್ಚಿಮ ಬಂಗಾಳ, ಆಗಸ್ಟ್ 17ರಂದು ಒಡಿಶಾ ಮತ್ತು ಆಗಸ್ಟ್ 17 ಮತ್ತು 18ರಂದು ಜಾರ್ಖಂಡ್‌ನಲ್ಲಿ ಪ್ರತ್ಯೇಕವಾದ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಆಗಸ್ಟ್ 16ರಂದು ಒಡಿಶಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದ ಹವಾಮಾನ: ಈ ವಾರದ ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ ಮತ್ತು ತೆಲಂಗಾಣ, ಕೇರಳ, ಲಕ್ಷದ್ವೀಪ ಮತ್ತು ಕರ್ನಾಟಕದಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ 16ರಿಂದ 19ರ ವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಆಗಸ್ಟ್ 19ರಂದು ಕೇರಳ, ಆಗಸ್ಟ್ 16-19ರ ವರೆಗೆ ಲಕ್ಷದ್ವೀಪ, ಆಗಸ್ಟ್ 16-17ರ ವರೆಗೆ ರಾಯಲಸೀಮಾ, ಆಗಸ್ಟ್ 16ರಂದು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 16-17ರ ವರೆಗೆ ಭಾರೀ ಮಳೆಯಾಗುವ ಸಧ್ಯತೆಯಿದೆ ಎಂದು ಭಾರತೀಹ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications