India Weather: ದೇಶದ ಈ ಭಾಗಗಳಲ್ಲಿ ಮುಂದಿನ 7 ದಿನ ಭಾರೀ ಮಳೆ ಮುನ್ಸೂಚನೆ-ಆರೆಂಜ್ ಅಲರ್ಟ್ ಘೋಷಣೆ
India Weather: ದೇಶದ ಹಲವೆಡೆ ಮಳೆರಾಯನ ಆರ್ಭಟ ತಗ್ಗಿದ್ದರೆ, ಇನ್ನೂ ಕೆಲವೆಡೆ ಅಬ್ಬರದ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಇಲ್ಲಿ ತಿಳಿಯಿರಿ.
ಹಿಮಾಚಲ ಪ್ರದೇಶ, ಉತ್ತರಾಖಂಡ, ಪೂರ್ವ ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ಅಸ್ಸಾಂ ಮತ್ತು ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಪಶ್ಚಿಮ ಬಂಗಾಳ, ಕೇರಳ, ಛತ್ತೀಸ್‌ಗಢ, ತಮಿಳುನಾಡು ಮತ್ತು ಒಡಿಶಾಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ನವದೆಹಲಿಯಲ್ಲಿ ಮುಂದಿನ ಆರು ದಿನಗಳವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಯುವ್ಯ ಭಾರತದ ಹವಾಮಾನ: ಜಮ್ಮು ಮತ್ತು ಕಾಶ್ಮೀರ, ಲಡಾಕ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಪಂಜಾಬ್‌ನಲ್ಲಿ ಚದುರಿದಂತೆ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್‌ನಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ಒಂದು ವಾರ ಹರಿಯಾಣ, ಚಂಡೀಗಢ, ನವದೆಹಲಿ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಆಗಸ್ಟ್ 19 ಮತ್ತು 20ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್, ಆಗಸ್ಟ್ 17-20 ರ ವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 20ರಂದು ಹರಿಯಾಣ, ಚಂಡೀಗಢ ಮತ್ತು ನವದೆಹಲಿ, ಆಗಸ್ಟ್ 18-22 ರ ವರೆಗೆ ಪಶ್ಚಿಮ ಉತ್ತರ ಪ್ರದೇಶ, ಆಗಸ್ಟ್ 17-22 ರ ವರೆಗೆ ಪೂರ್ವ ಉತ್ತರ ಪ್ರದೇಶ ಮತ್ತು ಆಗಸ್ಟ್ 17ರಂದು ಪಶ್ಚಿಮ ರಾಜಸ್ಥಾನದಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಪಶ್ಚಿಮ ಮತ್ತು ಮಧ್ಯ ಭಾರತದ ಹವಾಮಾನ: ಹವಾಮಾನ ಇಲಾಖೆಯು ಮಧ್ಯಪ್ರದೇಶ, ಕೊಂಕಣ, ಗೋವಾ ಮತ್ತು ಛತ್ತೀಸ್‌ಗಢದಲ್ಲಿ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಗುಜರಾತ್, ಮರಾಠವಾಡ ಮತ್ತು ಮಧ್ಯ ಮಹಾರಾಷ್ಟ್ರ, ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಮುಂದಿನ ಒಂದು ವಾರ ಚದುರಿದ ಮಳೆಯಾಗಲಿದೆ ಎಂದು ತಿಳಿಸಿದೆ.
ಆಗಸ್ಟ್ 17-22ರ ವರೆಗೆ ಮಧ್ಯಪ್ರದೇಶ, 17-21ರ ವರೆಗೆ ಛತ್ತೀಸ್‌ಗಢ, ಆಗಸ್ಟ್ 18-21ರ ವರೆಗೆ ಕೊಂಕಣ ಮತ್ತು ಗೋವಾ ಮತ್ತು ಮಧ್ಯ ಮಹಾರಾಷ್ಟ್ರದಲ್ಲಿ ಆಗಸ್ಟ್ 19 ಮತ್ತು 20ರಂದು ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 17ರಂದು ಛತ್ತೀಸ್‌ಗಢದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪೂರ್ವ ಮತ್ತು ಈಶಾನ್ಯ ಭಾರತದ ಹವಾಮಾನ: ಪೂರ್ವ ಭಾರತದಾದ್ಯಂತ ವ್ಯಾಪಕವಾಗಿ ಸಾಧಾರನ ಮಳೆಯಾಗುದ ಸಾಧ್ಯತೆಯಿದೆ. ಇನ್ನು ಈ ವಾರದಲ್ಲಿ ಈಶಾನ್ಯದಲ್ಲಿ ವ್ಯಾಪಕವಾಗಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಆಗಸ್ಟ್ 20ರಿಂದ 22ರವರೆಗೆ ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಆಗಸ್ಟ್ 17ರಿಂದ 20ರ ವರೆಗೆ ಜಾರ್ಖಂಡ್ ಮತ್ತು ಒಡಿಶಾ, ಆಗಸ್ಟ್ 18ರಿಂದ 20ರ ವರೆಗೆ ಬಿಹಾರ, ಆಗಸ್ಟ್ 22ರಂದು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಆಗಸ್ಟ್ 17ರಿಂದ 22ರ ವರೆಗೆ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ದಕ್ಷಿಣ ಭಾರತದ ಹವಾಮಾನ ವರದಿ: ಮುಂದಿನ ಒಂದು ವಾರ ಕೇರಳ, ಲಕ್ಷದ್ವೀಪ ಮತ್ತು ಕರಾವಳಿ ಕರ್ನಾಟಕದಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಆಂಧ್ರಪ್ರದೇಶ, ಯಾನಂ, ತೆಲಂಗಾಣದಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಆಗಸ್ಟ್ 17-18ರಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಆಗಸ್ಟ್ 17ರಿಂದ 20ರ ವರೆಗೆ ಲಕ್ಷದ್ವೀಪ, ಆಗಸ್ಟ್ 19 ಮತ್ತು 20ರಂದು ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕಚಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications