India Weather: ಮುಂದಿನ 5 ದಿನ ದೇಶದ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ
India Weather: ಈಗಾಗಲೇ ಭಾರೀ ಮಳೆಯಿಂದ ಕೇರಳದ ವಯನಾಡಿನಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಅಷ್ಟೇ ಅಲ್ಲದೆ, ದೇಶದ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ದಿನಗಳಲ್ಲಿ ಪೂರ್ವ ಮತ್ತು ವಾಯುವ್ಯ ಭಾರತದಲ್ಲಿ ಪ್ರತ್ಯೇಕವವಾಗಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಉತ್ತರಾಖಂಡ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ಮಣಿಪುರ, ತ್ರಿಪುರಾ, ಮಿಜೋರಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್‌ಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರಾಖಂಡ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ವಾರವಿಡೀ ಮಿಂಚು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ಇದೆ ವೇಳೆ ನವದೆಹಲಿ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 6ರಿಂದ 11ರೆವರೆಗೂ ಪಶ್ಚಿಮ ರಾಜಸ್ಥಾನ, ಉತ್ತರಾಖಂಡ, ರಾಜಸ್ಥಾನ, ಪೂರ್ವ ಉತ್ತರ ಪ್ರದೇಶದದಲ್ಲಿ, ಚಂಡೀಗಢ ಮತ್ತು ಹರಿಯಾಣದಲ್ಲಿ ಆಗಸ್ಟ್ 6 ರಿಂದ ಆಗಸ್ಟ್ 8 ರವರೆಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಆಗಸ್ಟ್ 6, 7, 10 ಮತ್ತು 11, ಪಶ್ಚಿಮ ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಆಗಸ್ಟ್ 6ರಿಂದ 7ರ ವರೆಗೆ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಇನ್ನು ಆಗಸ್ಟ್ 6 ರಿಂದ ಆಗಸ್ಟ್ 9ರ ವರೆಗೆ ಮಧ್ಯ ಮಹಾರಾಷ್ಟ್ರ, ಪಶ್ಚಿಮ ಮಧ್ಯಪ್ರದೇಶ ಮತ್ತು ಗುಜರಾತ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 6 ರಿಂದ ಆಗಸ್ಟ್ 7 ರವರೆಗೆ ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ. ಪೂರ್ವ ಮಧ್ಯಪ್ರದೇಶದಲ್ಲಿ ಆಗಸ್ಟ್ 7 ಮತ್ತು 8ರಂದು, ಗೋವಾ ಮತ್ತು ಕೊಂಕಣದಲ್ಲಿ ಆಗಸ್ಟ್ 6ರಿಂದ 10ರ ವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಈಶಾನ್ಯ, ಪೂರ್ವ ಮತ್ತು ದಕ್ಷಿಣ ಭಾರತದ ಹವಾಮಾನ: ಆಗಸ್ಟ್ 6 ರಿಂದ ಆಗಸ್ಟ್ 10ರ ವರೆಗೆ ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರಾ, ಅಸ್ಸಾಂ, ಮಣಿಪುರ ಮತ್ತು ಮೇಘಾಲಯ, ಆಗಸ್ಟ್ 7ರಂದು ಒಡಿಶಾ, ಆಗಸ್ಟ್ 6ರಂದು ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳ, ಆಗಸ್ಟ್ 6ರಿಂದ ಆಗಸ್ಟ್ 8ರ ವರೆಗೆ ಬಿಹಾರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗಂಗಾನದಿಯ ಪಶ್ಚಿಮ ಬಂಗಾಳದಲ್ಲಿ ಆಗಸ್ಟ್ 6ರಂದು, ಜಾರ್ಖಂಡ್‌ನಲ್ಲಿ ಆಗಸ್ಟ್ 6 ಮತ್ತು 7, ತಮಿಳುನಾಡಿನಲ್ಲಿ ಆಗಸ್ಟ್ 6ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.












Click it and Unblock the Notifications