India Weather: ದೇಶದ ಈ ಭಾಗಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ
India Weather: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಯಾವ್ಯಾವತ್ತು ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಹಿನ್ನೆಲೆ ಗುಜರಾತ್ ಮತ್ತು ಉತ್ತರಾಖಂಡ ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಜುಲೈ 21-24ರವರೆಗೆ ಮೂರು ದಿನಗಳವರೆಗೆ ಗುಜರಾತ್‌ನಲ್ಲಿ, ಜುಲೈ 21-22ರ ವರೆಗೆ ಉತ್ತರಾಖಂಡದಲ್ಲಿ ಭಾರೀ ಮಳೆ ಬೀಳಲಿದೆ.

ಮತ್ತೊಂದೆಡೆ ಇದೇ ಅವಧಿಯಲ್ಲಿ ಭಾರೀ ಮಳೆ ಹಿನ್ನೆ ಹಿಮಾಚಲ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಂತಹ ಈಶಾನ್ಯ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಜುಲೈ 24ರ ವರೆಗೆ ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶದ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಜುಲೈ 21-22ರ ವರೆಗೂ ಛತ್ತೀಸ್‌ಗಢ ಮತ್ತು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಕರ್ನಾಟಕದ ಉತ್ತರ ಒಳನಾಡು, ಕೇರಳ, ಮಾಹೆ, ಮರಾಠವಾಡ, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ತೆಲಂಗಾಣದಲ್ಲಿ ಜುಲೈ 21ರಂದು ಅಂದರೆ ಇನದನೂ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗರಿಷ್ಠ ತಾಪಮಾನವು ಸುಮಾರು 37 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 26.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ರಾತ್ರಿ ವೇಳೆಗೆ ಲಘು ಮಳೆಯಾಗುವ ಮುನ್ಸೂಚನೆ ನೀಡಿದೆ.
ಹಿಮಾಚಲ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಪ್ರಕಾರ, ಕಂಗ್ರಾ, ಮಂಡಿ, ಹಮೀರ್‌ಪುರ, ಶಿಮ್ಲಾ, ಸಿರ್ಮೌರ್ ಬಿಲಾಸ್‌ಪುರ್ ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆ ನೀಡಿದೆ.
ಜುಲೈ 22ರವರೆಗೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಜುಲೈ 22ರಿಂದ 23ರ ವರೆಗೆ ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಬಿಹಾರ, ಒಡಿಶಾ, ವಿದರ್ಭ, ಛತ್ತೀಸ್‌ಗಢ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಜುಲೈ 21-24ರ ಅವಧಿಯಲ್ಲಿ ಪಶ್ಚಿಮ ಉತ್ತರ ಪ್ರದೇಶ, ಹರಿಯಾಣದಲ್ಲಿ ಪ್ರತ್ಯೇಕವಾದ ಭಾರೀ ಮಳೆಯ ಮುನ್ಸೂಚನೆ ಇದೆ.
ಜುಲೈ 22-24ರ ಅವಧಿಯಲ್ಲಿ ಪಶ್ಚಿಮ ರಾಜಸ್ಥಾನ, ಪೂರ್ವ ಉತ್ತರ ಪ್ರದೇಶ, ಜುಲೈ 22ರಿಂದ 23ರ ವರೆಗೆ ಪಂಜಾಬ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪೂರ್ವ ರಾಜಸ್ಥಾನದಲ್ಲಿ ಮುಂದಿನ ಐದು ದಿನಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications