India Weather: ಮುಂದಿನ ಎರಡು ದಿನಗಳ ಕಾಲ ದೇಶದ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ

India Weather: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಿದ್ದಾನೆ. ಹಾಗೆಯೇ ಈ ಭಾಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಮುಂದಿನ ದಿನಗಳಲ್ಲಿ ದಕ್ಷಿಣ ಮತ್ತು ಮಧ್ಯ ಭಾರತದಾದ್ಯಂತ ವ್ಯಾಪಕ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಂಕಣ ಮತ್ತು ಗೋವಾ, ಗುಜರಾತ್ ಮತ್ತು ಮಧ್ಯ ಮಹಾರಾಷ್ಟ್ರದ ಘಾಟ್ ಪ್ರದೇಶಗಳಲ್ಲಿ ಜುಲೈ 16ರವರೆಗೆ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

India Weather Heavy rainfall forecast in these states for the next two days fron july 14th

ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ 15ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಇದೇ ವೇಳೆ ಕೇರಳದಲ್ಲೂ ಕೂಡ ಭಾರೀ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ. ಇನ್ನು ಮುಂದಿನ 4-5 ದಿನಗಳಲ್ಲಿ ಮಧ್ಯ ಭಾರತದಲ್ಲಿ ಮುಂಗಾರು ಚುರುಕು ಪಡೆಯುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಈ ಭಾಗಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಜುಲೈ 16ರವರೆಗೆ ಗೋವಾ, ಕೊಂಕಣ ಮತ್ತು ಮಧ್ಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಈ ಭಾಗಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದೇ ವೇಳೆ ಮೇಘಾಲಯ, ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಮಣಿಪುರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಿಹಾರ, ಸಿಕ್ಕಿಂ ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಜುಲೈ 15ರವರೆಗೆ ಇದೇ ರೀತಿಯ ಹವಾಮಾನ ಇರಲಿದೆ. ಪೂರ್ವ ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿ ಜುಲೈ 17ರವರೆಗೆ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+