India weather: ಮುಂದಿನ 24 ಗಂಟೆಗಳಲ್ಲಿ ದೇಶದ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ

India weather: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಹಾಗೆಯೇ ಮುಂದಿನ 24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆಯು ಸೌರಾಷ್ಟ್ರ, ಕಚ್, ಗುಜರಾತ್, ಪಶ್ಚಿಮ ಮಧ್ಯಪ್ರದೇಶ ಮತ್ತು ಉತ್ತರಾಖಂಡ ರಜ್ಯದಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ, ಮಧ್ಯ ಮಹಾರಾಷ್ಟ್ರ ಮತ್ತು ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

India weather Heavy rainfall forecast in these states in next 24 hours from july 22

ಇನ್ನು ಪಶ್ಚಿಮ ರಾಜಸ್ಥಾನ, ಪೂರ್ವ ರಾಜಸ್ಥಾನ, ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ಪೂರ್ವ ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ, ಮಿಜೋರಾಂ, ಒಡಿಶಾ, ತೆಲಂಗಾಣ, ಕರ್ನಾಟಕ (ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳು), ಕೇರಳ, ತಮಿಳುನಾಡು ರಾಜ್ಯಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಮಧ್ಯಪ್ರದೇಶದಲ್ಲಿ ಜುಲೈ 22ರಿಂದ 23 ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 2 ದಿನಗಳ ಕಾಲ ಗುಜರಾತ್ ರಾಜ್ಯದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮತ್ತು ಮುಂದಿನ 4 ದಿನಗಳ ಕಾಲ ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಜುಲೈ 22ರಂದು ಉತ್ತರಾಖಂಡದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆ ಮತ್ತು ಜುಲೈ 22 ಮತ್ತು 23ರಂದು ಹಿಮಾಚಲ ಪ್ರದೇಶದದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿದ ಕರ್ನಾಟಕ, ಕೊಂಕಣ ಮತ್ತು ಗೋವಾದಲ್ಲಿ, ಉಪ-ವಿಭಾಗಗಳ ಕೆಲವು ಜಲಾನಯನ ಪ್ರದೇಶಗಳಲ್ಲಿ ಪ್ರವಾಹದ ವಾತಾವರಣ ನಿರ್ಮಾಣವಾಗಲಿದೆ ಎಂದು ತಿಳಿಸಿದೆ. ಹಾಗೆಯೇ ಛತ್ತೀಸ್‌ಗಢ, ಪೂರ್ವ ಮಧ್ಯಪ್ರದೇಶ ಹಾಗೂ ಇಲ್ಲಿನ ಉಪ-ವಿಭಾಗಗಳ ಕೆಲವು ಜಲಾನಯನ ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಪ್ರವಾಹ ಆಗುವ ಸಾಧ್ಯತೆಯಿದ ಎಂದು ತಿಳಿಸಿದೆ.

ಹವಾಮಾನ ಇಲಾಖೆಯ ಸಲಹೆಗಳು

*. ದಕ್ಷಿಣ ಗುಜರಾತ್ ಮತ್ತು ಛತ್ತೀಸ್‌ಗಢದಲ್ಲಿ ಭತ್ತದ ನಾಟಿಯನ್ನು ಮುಂದೂಡಿ, ಮಧ್ಯಪ್ರದೇಶದಲ್ಲಿ ಅಕ್ಕಿ, ಆರಂಭಿಕ ಹೂಕೋಸು, ಟೊಮೆಟೊ, ಮೆಣಸಿನಕಾಯಿ ಮತ್ತು ಬದನೆ ಬೆಳೆ ಬಿತ್ತನೆಯನ್ನು ಮುಂದೂಡಿದರೆ ಉತ್ತಮ ಎನ್ನುವ ಸಲಹೆಯನ್ನು ನೀಡಿದೆ.

* ಮಧ್ಯಪ್ರದೇಶದಲ್ಲಿ ಸೋಯಾಬೀನ್, ನೆಲಗಡಲೆ, ಎಳ್ಳು, ಹಸಿಬೇಳೆ, ಕಾಳು ಮತ್ತು ಶುಂಠಿ ಮತ್ತು ದಕ್ಷಿಣ ಛತ್ತೀಸ್‌ಗಢದಲ್ಲಿ ಸೋಯಾಬೀನ್, ಕೆಂಪುಬೇಳೆ, ಹೆಸರುಬೇಳೆ, ಖಾರಿಫ್ ಜೋಳ ಮತ್ತು ರಾಗಿ ಬಿತ್ತನೆಯನ್ನು ಮುಂದೂಡಿ ಎನ್ನುವ ಸಲಹೆಯನ್ನು ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+