India weather: ಈ ಭಾಗಗಳಲ್ಲಿ ಬಿರುಗಾಳಿ ಸಹಿತ ಸುನಾಮಿ ಮಳೆ ಮುನ್ಸೂಚನೆ

ನವದೆಹಲಿ, ಆಗಸ್ಟ್‌, 24: ಭಾರತದ ಕೆಲವೇ ರಾಜ್ಯಗಳಲ್ಲಿ ಮಾತ್ರ ಅಬ್ಬರದ ಮಳೆಯಾಗುತ್ತಿದೆ. ಅದರಲ್ಲೂ ಉತ್ತರ ಭಾರದಲ್ಲಂತೂ ಭಾರೀ ಮಳೆಯಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಹಾಗೆಯೇ ಹಿಮಾಚಲ ಪ್ರದೇಶದಲ್ಲಿ ಕಳೆದ ರಾತ್ರಿ ಮಳೆರಾಯನ ಆರ್ಭಟಕ್ಕೆ ಭೂಕುಸಿತ ಉಂಟಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಇಂದು (ಆಗಸ್ಟ್‌ 24) ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಇನ್ನೆಷ್ಟು ಅನಾಹುತಗಳು ಸಂಭವಿಸುತ್ತವೆಯೋ ಅನ್ನುವ ಆತಂಕದಲ್ಲಿ ಇಲ್ಲಿನ ಜನರಿದ್ದಾರೆ.

ಜುಲೈ ತಿಂಗಳಿನಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದ. ಆದರೆ ಆಗಸ್ಟ್‌ ತಿಂಗಳು ಆರಂಭದಿಂದಲೂ ಹಲವು ರಾಜ್ಯಗಳಲ್ಲಿ ಮಳೆ ಕೊರತೆ ಆಗುವುದಲ್ಲದೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಇನ್ನು ಮುಂಗಾರು ನಂಬಿಕೊಂಡು ಬಿತ್ತನೆ ಮಾಡಿದ ದಕ್ಷಿಣ ಭಾರತ ಭಾಗದ ಅದೆಷ್ಟೋ ರೈತರ ಜೀವನ ಸೂರ್ಯನ ಶಾಖಕ್ಕೆ ಬತ್ತಿಹೋಗುತ್ತಲೇ ಇದೆ. ಮತ್ತೊಂದೆಡೆ ಉತ್ತಡ ಭಾರತದ ಕಡೆ ಸುನಾಮಿಯಂತಹ ಮಳೆಯಿಂದ ಅಪಾರ ಪ್ರಮಾಣ ಹಾನಿ ಸಂಭವಿಸುತ್ತಲೇ ಇದೆ.

India weather: Heavy rainfall forecast in these states of country

ಅಲ್ಲದೆ ಹಿಮಾಚಲ ಪ್ರದೇಶದಲ್ಲಿ ಹಲವೆಡೆ ಮನೆಗಳಿಗೆ ಹಾನಿಯಾಗಿದ್ದು, 200ಕ್ಕೂ ಹೆಚ್ಚು ರಸ್ತೆಗಳು ಬಂದ್‌ ಆಗಿವೆ ಎಂದು ಅಲ್ಲಿನ ಮೂಲಗಳು ತಿಳಿಸಿವೆ. ಇಂದು (ಆಗಸ್ಟ್‌ 24) ರಾಜ್ಯದ 12 ಜಿಲ್ಲೆಗಳ ಪೈಕಿ 4 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಕೆಲವೆಡೆ ಅಬ್ಬರದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕಂಗ್ರಾ, ಕುಲು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳ ಕೆಲವು ಭಾಗಗಳಲ್ಲಿ ರೆಡ್ ಅಲರ್ಟ್, ಕೆಲ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಭಾರೀ ಮಳೆಗೆ ಈ ತಿಂಗಳು ರಾಜ್ಯದಲ್ಲಿ ಸುಮಾರು 80ಕ್ಕೂ ಹೆಚ್ಚು ಜನ ಬಲಿಯಾಗಿದ್ದು, ಜೂನ್ 24ರಂದು ರಾಜ್ಯದಲ್ಲಿ ಮುಂಗಾರು ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಒಟ್ಟು 227 ಜನರು ಸಾವನ್ನಪ್ಪಿದ್ದು, 38 ಜನರು ಕಾಣೆಯಾಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಕಳೆದ ಹತ್ತು ದಿನಗಳಲ್ಲಿ ಸುರಿದ ಅಬ್ಬರದ ಮಳೆಯಿಂದ ನಡೆದ ದುರ್ಘಟನೆಗಳಲ್ಲಿ ಶಿಮ್ಲಾ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 26ಕ್ಕೆ ಏರಿದೆ. ಈ ಪೈಕಿ ಸಮ್ಮರ್ ಹಿಲ್ ಪ್ರದೇಶದಲ್ಲಿ ಭೂಕುಸಿತದಿಂದ 17, ಫಾಗ್ಲಿಯಲ್ಲಿ 5 ಹಾಗೂ ಕೃಷ್ಣ ನಗರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದಿಬಂದಿದೆ.

ಭಾರೀ ಮಳೆ ಹಿನ್ನೆಲೆ ಯಾವುದೇ ಅನಾಹುತಗಳು ಸಂಭವಿಸಬಾರದೆಂದು ಮುಂಜಾಗ್ರತಾ ಕ್ರಮವಾಗಿ ಶಿಮ್ಲಾ, ಮಂಡಿ ಮತ್ತು ಸೋಲನ್ ಜಿಲ್ಲೆಗಳಲ್ಲಿ ಬುಧವಾರದಿಂದ ಎರಡು ದಿನಗಳ ಕಾಲ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ಸೋಲನ್ ಜಿಲ್ಲೆಯಲ್ಲಿ ಭೂಕುಸಿತದಿಂದಾಗಿ ಕೆಲವು ಮನೆಗಳಿಗೂ ಅಪಾರ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ನಿನ್ನೆ (ಆಗಸ್ಟ್ 23) ಉತ್ತರ ಪ್ರದೇಶ, ತಮಿಳುನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಸುರಿದಿದೆ. ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶದ ವಿವಿಧ ಭಾಗಗಳಲ್ಲಿ ಅಬ್ಬರದ ಮಳೆಯಾಗಿದೆ. ಮಧ್ಯ ಭಾರತ ಮತ್ತು ದಕ್ಷಿಣ ಭಾರತದ ಅಲ್ಲಲ್ಲಿ ಚದಿರಿದಂತೆ ಮಳೆ ಬಿದ್ದಿದೆ. ಇನ್ನು ಕೊಂಕಣ ಮತ್ತು ಗೋವಾ, ಕರಾವಳಿ ಆಂಧ್ರಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಮಳೆ ಸುರಿದಿದೆ ಎಂದು ತಿಳಿದುಬಂದಿದೆ.

ಅಲ್ಲದೆ ಇಂದು (ಆಗಸ್ಟ್‌ 24) ದಕ್ಷಿಣ ಭಾರತ, ಮಹಾರಾಷ್ಟ್ರ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಅಲ್ಲಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಈಶಾನ್ಯ ಭಾರತ, ಉತ್ತರಾಖಂಡ, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಕೊಂಕಣ ಮತ್ತು ಗೋವಾ ಭಾಗದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇನ್ನು ಕರಾವಳಿ ಕರ್ನಾಟಕದಲ್ಲಿ ಭಾನುವಾರದವರೆಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮಾಹಿತಿ ರವಾನಿಸಿದೆ. ಬೆಂಗಳೂರಿನಲ್ಲಿ ಆಗಸ್ಟ್ 25ರಿಂದ 28ರವರೆಗೆ ಮೋಡಕವಿದ ವಾತಾವರಣ ಇರಲಿದ್ದು, ಆಗಾಗ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಒಟ್ಟಿನಲ್ಲಿ ದಕ್ಷಿಣ ಭಾರತದ ಬಹುತೇಕ ರಾಜ್ಯಗಳಲ್ಲಿ ಮಳೆಯೇ ಇಲ್ಲದಂತಾಗಿದ್ದು, ಬಿಸಿಲಿನ ವಾತಾವರಣ ಮುಂದುವರೆದಿದೆ. ಒಂದು ವೇಳೆ ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ ಆಗಸ್ಟ್‌ ಅಂತ್ಯದಲ್ಲಿ ಅಬ್ಬರದ ಮಳೆಯಾದರೆ ಮಾತ್ರ ಭರದ ಛಾಯೆ ಆವರಿಸುವುದನ್ನು ತಪ್ಪಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+