India Weather: ದೇಶದ ಈ ಭಾಗಗಳಲ್ಲಿ ಜುಲೈ 27ರವರೆಗೂ ಸುನಾಮಿ ಮಳೆ ಮುನ್ಸೂಚನೆ: ರೆಡ್ ಅಲರ್ಟ್ ಘೋಷಣೆ
India Weather: ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಹಾಗೆಯೇ ಜುಲೈ 27 ರವರೆಗೂ ಈ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ವರುಣ ಅಬ್ಬರಿಸಲಿದ್ದಾನೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಭಾರೀ ಮಲೆ ಮುನ್ಸೂಚನೆ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆಯು ಇಂದು (ಜುಲೈ 23) ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಣೆ ನೀಡಿದೆ. ಇನ್ನು ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಒಡಿಶಾದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜುಲೈ 24ರವರೆಗೆ ಗುಜರಾತ್, ಗೋವಾ ಮತ್ತು ಮಹಾರಾಷ್ಟ್ರ, ಮಧ್ಯಪ್ರದೇಶ, ಗೋವಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಜುಲೈ 25 ಮತ್ತು 26ರಂದು ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಜುಲೈ 23ರಂದು ಉತ್ತರಾಖಂಡದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪ್ರದೇಶ, ಪಂಜಾಬ್ ಮತ್ತು ಹರಿಯಾಣ ಮತ್ತು ರಾಜಸ್ಥಾನದಲ್ಲಿ ಜುಲೈ 23 ಮತ್ತು 24ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಜುಲೈ 26 ರವರೆಗೆ ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಜುಲೈ 24ರಂದು ಪಂಜಾಬ್ ಮತ್ತು ಹರಿಯಾಣದಲ್ಲಿ ಭಾರೀ ಮಳೆ ಸುರಿಯಲಿದೆ. ಎಂದು ತಿಳಿಸಿದೆ. ಮುಂದಿನ 5 ದಿನಗಳ ಕಾಲ ಈಶಾನ್ಯ ಭಾರತದಲ್ಲಿ ಗುಡುಗು, ಮಿಂಚು ಜೊತೆ ವ್ಯಾಪಕವಾದ ಮಳೆಯಾಗಲಿದೆ ಎಂದಿ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಜುಲೈ 27ರವರೆಗೆ ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ. ಅರುಣಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ಮಣಿಪುರ ಸೇರಿದಂತೆ ಮೂರು ರಾಜ್ಯಗಳಲ್ಲಿ ಜುಲೈ 24ರವರೆಗೆ ಭಾರೀ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜುಲೈ 24ರವರೆಗೆ ಮುಂಬೈ ಮತ್ತು ಮಧ್ಯ ಮಹಾರಾಷ್ಟ್ರದ ಕೆಲವು ಭಾಗಗಳಿಗೆ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.












Click it and Unblock the Notifications