India Weather: ಜುಲೈ 28ರವರೆಗೂ ದೇಶದ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ-ರೆಡ್‌ ಅಲರ್ಟ್‌ ಘೋಷಣೆ

India Weather: ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ವರುಣಾರ್ಭಟ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಭಾರತದ ಹಲವು ರಾಜ್ಯಗಳಲ್ಲಿ ಮುಂಗಾರು ದಿನದಿಂದ ದಿನಕ್ಕೆ ಬಿರುಸು ಪಡೆಯುತ್ತಲೇ ಇದೆ. ಇನ್ನು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಭಾರತೀಯ ಹವಾಮಾನ ಇಲಾಖೆ ಗುಜರಾತ್ ಮತ್ತು ಮಹಾರಾಷ್ಟ್ರಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ಮಧ್ಯಪ್ರದೇಶ, ಕರ್ನಾಟಕ, ಒಡಿಶಾ ಮತ್ತು ಗೋವಾ ರಾಜ್ಯಗಳಿಗೆ ಆರೆಂಜ್‌ ಅಲರ್ಟ್‌ ನೀಡಿದೆ.

India Weather Heavy rainfall forecast in these states till July 28th IMD prediction

ಜುಲೈ 24 ರಂದು ಗುಜಾರಾತ್‌ನಲ್ಲಿ ರಣಭೀಕರ ಮಳೆಯಾಗಿದ್ದು, ಪ್ರವಾಹದ ವಾತಾವರಣ ನಿರ್ಮಾಣವಾಗಿತ್ತು. ಪರಿಣಾಮ ಇದುವರೆಗೂ ರಾಜ್ಯದಲ್ಲಿ ಮಳೆ ಸಂಬಂಧಿತ ಸಾವಿನ ಸಂಖ್ಯೆ 61ಕ್ಕೆ ಏರಿದೆ ಎನ್ನುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. ಈಗಲೂ ಮಳೆರಾಯನ ಆರ್ಭಟ ಮುಂದುವರೆದ ಹಿನ್ನೆಲೆ, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು ಇಲ್ಲಿ ನೆಲೆಯೂರಿವೆ ಎಂದು ತಿಳಿದುಬಂದಿದೆ.

ಇಂದು (ಜುಲೈ 25) ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಜುಲೈ 25 ಮತ್ತು 26ರಂದು ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯೆತೆ ಹೆಚ್ಚಿದ್ದರೆ, ಗುಜರಾತ್‌ನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಈಗಾಗಲೇ ಭಾರೀ ಮಳೆಯಿಂದ ಮುಂಬೈ ನಗರದಲ್ಲಿ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನು ಪಶ್ಚಿಮ ಮತ್ತು ಮಧ್ಯ ಭಾರತದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಮತ್ತು ಜುಲೈ 27ರವರೆಗೆ ಗೋವಾದಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ವಾಯುವ್ಯ ಭಾರತ, ಹಿಮಾಚಲ ಪ್ರದೇಶ, ಉತ್ತರಾಖಂಡ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಜುಲೈ 28ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ ತೆಲಂಗಾಣ, ಆಂಧ್ರಪ್ರದೇಶ ಜುಲೈ 26ರವರೆಗೆ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಹಾಗೆಯೇ ಕೇರಳದಲ್ಲಿ ಜುಲೈ 27ರವರೆಗೆ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಜುಲೈ 27 ಮತ್ತು 28ರಂದು ಒಡಿಶಾ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+