India Weather: ದೇಶದ ಈ ಭಾಗಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ

India Weather: ದೇಶದ ಈಶಾನ್ಯ ಭಾಗದ ಕೆಲವೆಡೆ ಪ್ರವಾಹದಂತಹ ಮಳೆ ಸುರಿಯುತ್ತಲೇ ಇದೆ. ಇದನ್ನು ಹೊರತುಪಡಿಸಿದರೆ, ಕೆಲವು ರಾಜ್ಯಗಳ ಹಲವೆಡೆ ಮಾತ್ರ ಆಗಾಗ ಸಾಧರಣೆ ಮಳೆಯಾಗುತ್ತಿದೆ. ಇನ್ನುಳಿದಂತೆ ಬಹುತೇಕ ಭಾಗಗಳಲ್ಲಿ ತಾಪಾಮನದಲ್ಲಿ ಏರಿಕೆಯಾಗುತ್ತಲೇ ಇದೆ. ಮತ್ತೊಂದಡೆ ಮೇ 9ರವರೆಗೆ ಹಲವೆಡೆ ಗುಡುಗು, ಮಿಂಚು ಸಹಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.

ಭಾರತದ ಪೂರ್ವ ಮತ್ತು ದಕ್ಷಿಣದ ಕೆಲವು ಭಾಗಗಳಲ್ಲಿ ಬಿಸಿಲಿನ ಪ್ರಮಾಣ ಶನಿವಾರ (ಮೇ 4) ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಎರಡು ದಿನಗಳ ನಂತರ ಈ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

India Weather Heavy Rainfall forecast in These States till May 09

ಪಶ್ಚಿಮ ಬಂಗಾಳ, ತಮಿಳುನಾಡು, ಒಡಿಶಾ ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ಬಿಸಿಗಾಳಿಯ ಪ್ರಮಾಣ ಮುಂದುವರೆದಿದ್ದು, ಈ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3-5 ಡಿಗ್ರಿ ಸೆಲ್ಸಿಯಸ್‌ ಹೆಚ್ಚಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ಮಳೆ?: ಮತ್ತೊಂದೆಡೆ ಮೇ 5 ಮತ್ತು 6ರಂದು ಈಶಾನ್ಯ ಭಾರತದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ಭಾರತದಲ್ಲಿ ಮೇ 5-9ರವರೆಗೆ ಇದೇ ವಾತಾವರಣ ಇರಲಿದೆ. ಹಾಗೆಯೇ ಇದೇ ಅವಧಿಯಲ್ಲಿ ಒಡಿಶಾ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಜಾರ್ಖಂಡ್‌ನಲ್ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ನಿರೀಕ್ಷಿಸಲಾಗಿದೆ.

ಇನ್ನು ಪೂರ್ವ ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ನವದೆಹಲಿ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಹಗುರದಿಂದ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಮೇ 6 ರಿಂದ ಮೇ 9 ರವರೆಗೆ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಕರ್ನಾಟಕದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ಎಷ್ಟು ತಾಪಮಾನ?: ನಿನ್ನೆ (ಮೇ 05) ಕನೂಲ್‌ನಲ್ಲಿ (ಆಂಧ್ರಪ್ರದೇಶ) 45.9 ಡಿಗ್ರಿ ಸೆಲ್ಸಿಯಸ್, ಮಹೆಬೂಬ್ ‌ನಗರದಲ್ಲಿ (ತೆಲಂಗಾಣ) 45 ಡಿಗ್ರಿ, ಒಡಿಶಾದ ಬೌಧ್‌ನಲ್ಲಿ 44 ಡಿಗ್ರಿ, ಕರೂರ್ ಪರಮತಿ (ತಮಿಳುನಾಡು) 43.5 ಡಿಗ್ರಿ, ಆಂಧ್ರದಲ್ಲಿ 44.6 ಡಿಗ್ರಿ, ನಿಜಾಮಾಬಾದ್‌ನಲ್ಲಿ 45.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಕಡಪಾ ಮತ್ತು ಪಶ್ಚಿಮ ಬಂಗಾಳದ ಕಲೈಕುಂಡದಲ್ಲಿ 43.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ತಿಳಿದುಬಂದಿದೆ.

ತಾಪಮಾನದಲ್ಲಿ ಭಾರೀ ಏರಿಕೆ: ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ, 2023ಕ್ಕೆ ಹೋಲಿಸಿದರೆ 2024 ಏಪ್ರಿಲ್‌ನಲ್ಲಿ ತಾಪಮಾನದಲ್ಲಿ ಭಾರೀ ಏರಿಕೆಯಾಗಿದೆ. ಇನ್ನು ಮೇ ತಿಂಗಳಲ್ಲಿಯೂ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ದಕ್ಷಿಣ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಮರಾಠವಾಡ ಮತ್ತು ಗುಜರಾತ್ ಪ್ರದೇಶಗಳಲ್ಲಿ ಸುಮಾರು 8-11 ದಿನಗಳವರೆಗೆ ತಾಪಾಮಾನದಲ್ಲಿ ಏರಿಕೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ಉತ್ತರ ಪ್ರದೇಶ, ಮತ್ತು ಛತ್ತೀಸ್‌ಗಢದ ಕೆಲವು ಭಾಗಗಳು, ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಕರ್ನಾಟಕದ ಉತ್ತರ ಒಳನಾಡು ಮತ್ತು ತೆಲಂಗಾಣದಲ್ಲಿ ಮುಂದಿನ 5-7 ದಿನಗಳವರೆಗೆ ತಾಪಾಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+