India Weather: ದೇಶದ ಈ ಭಾಗಗಳಲ್ಲಿ ಸೆಪ್ಟೆಂಬರ್ 11ರ ವರೆಗೂ ಭಾರೀ ಮಳೆ ಮುನ್ಸೂಚನೆ-ಆರೆಂಜ್ ಅಲರ್ಟ್ ಘೋಷಣೆ
India Weather: ದೇಶದ ಹಲವೆಡೆ ಮಳೆರಾಯನ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಸೆಪ್ಟೆಂಬರ್ 11ರ ವರೆಗೂ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇದೀಗ ದೇಶದಲ್ಲಿ ಮತ್ತೆ ಮುಂಗಾರು ಮಳೆ ಚುರುಕು ಪಡೆದಿದೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಿಂದ ಪ್ರವಾಹದ ಪರಿಸ್ಥಿನಿ ಉಂಟಾಗಿರುವ ಘಟನೆಗಳು ನಡೆದಿವೆ. ಇನ್ನು ಕಳೆದ ವಾರ ಗುಜರಾತ್‌ನಲ್ಲಿ ಸುರಿದ ಭಾರಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಈ ಹಿಂದೆ ಉತ್ತರ ಪ್ರದೇಶದಲ್ಲಿ ಇಂತಹದ್ದೇ ಘಟನೆ ನಡೆದಿತ್ತು.

ಇಂದು (ಸೆಪ್ಟೆಂಬರ್ 06) ಭಾರೀ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತೆಲಂಗಾಣ ಮತ್ತು ಆಂಧ್ರಪ್ರದೇಶಕ್ಕೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಗುಜಾರಾತ್‌ನ ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಗೋವಾ, ಕರಾವಳಿ ಆಂಧ್ರ ಪ್ರದೇಶ, ತೆಲಂಗಾಣ, ಕರಾವಳಿ ಕರ್ನಾಟಕ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮತ್ತು ಕೇರಳದಲ್ಲಿ ಸೆಪ್ಟೆಂಬರ್ 8ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯುದೆ. ಇದೇ ವೇಳೆ ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅದರಲ್ಲೂ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ 11 ರವರೆಗೆ ಮಿಜೋರಾಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ ಮತ್ತು ತ್ರಿಪುರಾ, ಅರುಣಾಚಲ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 8ರವರೆಗೆ ಒಡಿಶಾ, ಉತ್ತರಾಖಂಡ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ಮಳೆ?: ಮತ್ತೊಂದೆಡೆ ಕರ್ನಾಟಕ ರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆ ಸುರಿಯಲಿದ ಎನ್ನುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಬೀದರ್, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಇನ್ನು ದಾವಣಗೆರೆ, ಚಿತ್ರದುರ್ಗ, ತುಮಕೂರು, ಕಲಬುರಗಿ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.












Click it and Unblock the Notifications