India Weather: ದೇಶದ ಈ ಭಾಗಗಳಲ್ಲಿ ಸೆಪ್ಟೆಂಬರ್ 13ರ ವರೆಗೂ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
India Weather: ಅಸ್ನಾ ಚಂಡಮಾರುತದ ಪ್ರಭಾವ ಹಿನ್ನೆಲೆ ದೇಶದ ಹಲವೆಡೆ ಮಳೆ ಮತ್ತಷ್ಟು ಚುರುಕು ಪಡೆದಿದೆ. ಹಾಗೆಯೇ ಸೆಪ್ಟೆಂಬರ್ 13ರ ವರೆಗೆ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಭಾರತ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳ ಕಾಲ ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ, ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಪಶ್ಚಿಮ ಮತ್ತು ಮಧ್ಯ ಭಾರತಕ್ಕೆ ಹವಾಮಾನ: ಗುಜರಾತ್‌ನಲ್ಲಿ ಸೆಪ್ಟೆಂಬರ್ 7 & 8ರಂದು ಭಾರೀ ಮಳೆಯಾಗಿದೆ. ಹಾಗೆಯೇ ಸೆಪ್ಟೆಂಬರ್ 9ರವರೆಗೆ ಗುಜಾರಾತ್ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಮಳೆ ಮುಂದುವರೆಯಲಿದೆ. ಛತ್ತೀಸ್‌ಗಢದಲ್ಲಿ ಸೆಪ್ಟೆಂಬರ್ 13ರವರೆಗೆ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 10ರ ವರೆಗೆ ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಸೆಪ್ಟೆಂಬರ್ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 9ರಿಂದ 12ರ ವರೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 9ರಂದು ಅಂದರೆ ಇಂದು ಒಡಿಶಾದಲ್ಲೂ ಇದೇ ವಾತಾವರಣ ಇರಲಿದೆ. ಸೆಪ್ಟೆಂಬರ್ 9 ಮತ್ತು 10 ಸಿಕ್ಕಿಂ, ಸೆಪ್ಟೆಂಬರ್ 9 ರಿಂದ 12ರ ವರೆಗೆ ಪಶ್ಚಿಮ ಬಂಗಾಳ ಮತ್ತು ಅರುಣಾಚಲ ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ವಾಯುವ್ಯ ಭಾರತದ ಹವಾಮಾನದ ವಿವರ: ರಾಜಸ್ಥಾನದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡ, ಉತ್ತರ ಪ್ರದೇಶದಲ್ಲಿ ಸೆಪ್ಟೆಂಬರ್ 9 ಮತ್ತು 10ರಂದು ಇದೇ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications