India Weather: ದೇಶದ ಈ ಭಾಗಗಳಲ್ಲಿ ಸೆಪ್ಟೆಂಬರ್ 14ರ ವರೆಗೂ ಭಾರೀ ಮಳೆ ಮುನ್ಸೂಚನೆ
India Weather: ದೇಶದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಮುಂದಿನ 6 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಇಂದು (ಸೆಪ್ಟೆಂಬರ್ 08) ಮಹಾರಾಷ್ಟ್ರ, ತೆಲಂಗಾಣ ಮತ್ತು ಒಡಿಶಾಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಆಂಧ್ರಪ್ರದೇಶಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಇನ್ನು ಹಲವು ರಾಜ್ಯಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಸೆಪ್ಟೆಂಬರ್ 8 ಮತ್ತು 9ರಂದು ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 12ರಿಂದ 14ರ ವರೆಗೆ ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ಗೋವಾದಲ್ಲಿ ಮಳೆಯಾಗಲಿದೆ. ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡ ಕೂಡ ಸೆಪ್ಟೆಂಬರ್ 13ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಭಾರತದ ಹವಾಮಾನದ ವಿವರ: ಸೆಪ್ಟೆಂಬರ್ 8ರಂದು ಕರಾವಳಿ ಆಂಧ್ರಪ್ರದೇದಲ್ಲಿ ಅಲ್ಲಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗಲಿದೆ. ಸೆಪ್ಟೆಂಬರ್ 8 ಮತ್ತು 9ರಂದು ತೆಲಂಗಾಣ ಮತ್ತು ಕರಾವಳಿ ಆಂಧ್ರಪ್ರದೇಶ, ಸೆಪ್ಟೆಂಬರ್ 9 & 10 ರಂದು ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣ ಮತ್ತು ಕರ್ನಾಟಕದಲ್ಲಿ ಅಲ್ಲಲ್ಲಿ ಸೆಪ್ಟೆಂಬರ್ 11ರವರೆಗೆ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಪೂರ್ವ ಮತ್ತು ಈಶಾನ್ಯ ಭಾರತದ ಹವಾಮಾನ: ಸೆಪ್ಟೆಂಬರ್ 10ರ ವರೆಹೆ ಒಡಿಶಾ, ಸೆಪ್ಟೆಂಬರ್ 10 ರಿಂದ 12ರ ವರೆಗೆ ಅಸ್ಸಾಂ ಮತ್ತು ಮೇಘಾಲಯ, ಸೆಪ್ಟೆಂಬರ್ 10 ಮತ್ತು 11ರಂದು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುವ್ಯ ಭಾರತದ ಹವಾಮಾನದ ವಿವರ: ಸೆಪ್ಟೆಂಬರ್ ಸೆಪ್ಟೆಂಬರ್ 13ರ ವರೆಗೆ ರಾಜಸ್ಥಾನದಲ್ಲಿ, ಮುಂದಿನ ಮೂರು ದಿನಗಳ ಕಾಲ ಉತ್ತರಾಖಂಡ್ ಮತ್ತು ಸೆಪ್ಟೆಂಬರ್ 10 ಮತ್ತು 11ರಂದು ಉತ್ತರ ಪ್ರದೇಶದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications