India Weather: ಸೆಪ್ಟೆಂಬರ್‌ 5ರ ವರೆಗೆ ದೇಶದ ಈ ಭಾಗಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ

India Weather: ದೇಶದ ಹಲವೆಡೆ ಮಳೆ ತಗ್ಗಿದ್ದು, ಕಲಲವು ಭಾಗಗಳಲ್ಲಿ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಸೆಪ್ಟೆಂಬರ್‌ 5ರ ವರೆಗೆ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಭಾರತ ಹವಾಮಾನ ಇಲಾಖೆಯು ಗುಜರಾತ್, ಕರ್ನಾಟಕ, ಒಡಿಶಾ, ಛತ್ತೀಸ್‌ಗಢ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ಇನ್ನು ಇಂದು (ಆಗಸ್ಟ್‌ 31)ಹಲವು ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

India Weather Heavy rainfall forecast in these states till September 5 from august 31

ಈಗಾಗಲೇ ಗುಜರಾತ್‌ನಲ್ಲಿ ಮಳೆರಾಯನ ಆರ್ಭಟ ಮುಂದುವರೆದು ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಹಾಗೆಯೇ ಇಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಜಾರಾತ್‌ನ ಸುರೇಂದ್ರನಗರ, ರಾಜ್‌ಕೋಟ್, ಜಾಮ್‌ನಗರ್, ಪೋರಬಂದರ್, ಜುನಾಗಢ್, ಅಮ್ರೇಲಿ, ಭಾವನಗರ, ಮೋರ್ಬಿ, ದ್ವಾರಕಾ, ಗಿರ್ ಸೋಮನಾಥ್, ಬೊಟಾಡ್, ಕಚ್ ಮತ್ತು ದಿಯು ಸೇರಿದಂತೆ ಸೌರಾಷ್ಟ್ರ-ಕಚ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ದಕ್ಷಿಣ ಗುಜರಾತ್ ಪ್ರದೇಶಕ್ಕೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಭರೂಚ್, ಸೂರತ್, ಡ್ಯಾಂಗ್, ತಾಪಿ, ನವಸಾರಿ, ವಲ್ಸಾದ್ ಮತ್ತು ದಮನ್ ಮತ್ತು ದಾದ್ರಾ ನಗರ ಹವೇಲಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಇನ್ನು ಕರ್ನಾಟಕದಲ್ಲಿ ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಭಾರೀ ಮಳೆಯಾಗಿ ಸಾಧ್ಯತೆಯಿದ್ದು, ಈ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 35-45 ಕಿಮೀ ವೇಗದಲ್ಲಿ ಬೀಸಲಿದೆ ಎಂದು ತಿಳಿಸಿದೆ.

ಸೆಪ್ಟೆಂಬರ್ 1-2 ಛತ್ತೀಸ್‌ಗಢ, ಸೆಪ್ಟೆಂಬರ್ 2ರಂದು ಪೂರ್ವ ಮಧ್ಯಪ್ರದೇಶ, 2-4 ರ ವರೆಗೆ ಗುಜರಾತ್, ಸೆಪ್ಟೆಂಬರ್ 3 ರಂದು ಮಧ್ಯಪ್ರದೇಶದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಸೆಪ್ಟೆಂಬರ್ 1-5ರ ವರೆಗೆ ಕೊಂಕಣ ಮತ್ತು ಗೋವಾ, ಸೆಪ್ಟೆಂಬರ್ 1-3ರ ವರೆಗೆ ಮರಾಠವಾಡ ಮತ್ತು ಸೆಪ್ಟೆಂಬರ್ 2-4ರ ವರೆಗೆ ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಪ್ರತ್ಯೇಕವಾಗಿ ಭಾರೀ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

ಇಂದು (ಆಗಸ್ಟ್‌ 31) ಒಡಿಶಾದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 1ರ ವರೆಗೆ ರಾಜ್ಯದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 3ರ ವರೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಭಾರತದಲ್ಲಿ, ಕರಾವಳಿ ಆಂಧ್ರಪ್ರದೇಶ, ಕರಾವಳಿ ಕರ್ನಾಟಕ, ತೆಲಂಗಾಣದಲ್ಲಿ ಸೆಪ್ಟೆಂಬರ್ 2ರ ಇದೇ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.

ವಾಯುವ್ಯ ಭಾರತದ ಹವಾಮಾನದ ವಿವರ: ಸೆಪ್ಟೆಂಬರ್ 2-3ರ ವರೆಗೆ ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್‌ನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್‌ 2ರಂದು ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ಹರಿಯಾಣದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡದಲ್ಲಿ ಸೆಪ್ಟೆಂಬರ್ 2-4, ಉತ್ತರ ಪ್ರದೇಶ ಸೆಪ್ಟೆಂಬರ್ 1-3ರ ವರೆಗೆ, ಮತ್ತು ಸೆಪ್ಟೆಂಬರ್‌ 1-5ರ ವರೆಗೆ ಪೂರ್ವ ರಾಜಸ್ಥಾನದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+