India Weather: ದೇಶದ ಈ ಭಾಗಗಳಲ್ಲಿ ಸೆಪ್ಟೆಂಬರ್ 9ರ ವರೆಗೂ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
India Weather: ದೇಶದ ಹಲವೆಡೆ ಮಳೆರಾಯನ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಹಾಗೆಯೇ ಸೆಪ್ಟೆಂಬರ್ 9ರ ವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿ ಇಲ್ಲಿ ಗಮನಿಸಿ.
ಮುಂದಿನ ದಿನಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಗುಜರಾತ್, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ ಮತ್ತು ಕರಾವಳಿ ಆಂಧ್ರಪ್ರದೇಶಕ್ಕೆ ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ರಾಜಸ್ಥಾನ, ಪಂಜಾಬ್, ನವದೆಹಲಿ-ಎನ್‌ಸಿಆರ್, ಕರ್ನಾಟಕ, ಕೇರಳ, ತೆಲಂಗಾಣ, ಪಶ್ಚಿಮ ಮಧ್ಯಪ್ರದೇಶ, ಉತ್ತರಾಖಂಡಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಮಂಗಳವಾರ (ಆಗಸ್ಟ್ 03) ಗುಜರಾತ್, ಕರಾವಳಿ ಕರ್ನಾಟಕ, ಕೊಂಕಣ-ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಪಶ್ಚಿಮ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಿದೆ ಮಳೆಯಾಗಿದೆ. ಇನ್ನು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ರಸ್ತೆಗಳೆಲ್ಲ ಜಲಾವೃತವಾಗಿದ್ದು, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.
ಮುಂಜಾಗ್ರತಾ ಕ್ರಮವಾಗಿ ಭೂಕುಸಿತದ ಭೀತಿಯಿಂದಾಗಿ ರಾಷ್ಟ್ರೀಯ ಹೆದ್ದಾರಿ 5 ಮತ್ತು 707, ಇತರೆ 78 ರಸ್ತೆಗಳನ್ನು ಮುಚ್ಚಲಾಗಿದೆ. ಇನ್ನು ಮಹಾರಾಷ್ಟ್ರದ ಮರಾಠವಾಡದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ತೆಲಂಗಾಣ, ರಾಜಸ್ಥಾನ, ಗುಜರಾತ್ ಮತ್ತು ನವದೆಹಲಿಯಲ್ಲಿ ಸಾಧಾರಣ ಮಳೆಯಾಗುತ್ತಿದೆ.
ಮುಂದಿನ ಕೆಲವು ದಿನಗಳ ಕಾಲ ದಕ್ಷಿಣ ಗುಜರಾತ್, ಪಶ್ಚಿಮ ಮಧ್ಯಪ್ರದೇಶ, ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದ ಎಂದು ಮುನ್ಸೂಚನೆ ನೀಡಿದೆ. ಅಲ್ಲದೆ, ರಾಜಸ್ಥಾನ, ಪಂಜಾಬ್, ಹರಿಯಾಣ, ಉತ್ತರಾಖಂಡ, ತಮಿಳುನಾಡು, ಕೇರಳ, ತೆಲಂಗಾಣ, ರಾವಳಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಸಾಧಾರಣ ಮಾಳೆಯಾಗಲಿದೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಪೂರ್ವ ಗುಜರಾತ್‌ನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಕೊಂಕಣ-ಗೋವಾ, ಕರಾವಳಿ ಕರ್ನಾಟಕ, ಕೇರಳ, ಮಧ್ಯಪ್ರದೇಶ, ರಾಜಸ್ಥಾನದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪಶ್ಚಿಮ ಹಿಮಾಲಯ, ಪಂಜಾಬ್, ಹರಿಯಾಣ, ಒಡಿಶಾ, ಕೇರಳ ಮತ್ತು ಲಕ್ಷದ್ವೀಪ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಪಶ್ಚಿಮ ಮತ್ತು ಪೂರ್ವ ಮಧ್ಯಪ್ರದೇಶ, ಪಶ್ಚಿಮ ಮಧ್ಯಪ್ರದೇಶದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಸೆಪ್ಟೆಂಬರ್ 6 ರಿಂದ 9ರ ವರೆಗೆ ಮಧ್ಯ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ, ಗೋವಾ ಕರಾವಳಿ ಪ್ರದೇಶಗಳು, ಮಧ್ಯ ಮಹಾರಾಷ್ಟ್ರ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಕರಾವಳಿ ಕರ್ನಾಟಕದಲ್ಲಿ ಸೆಪ್ಟೆಂಬರ್ 4 ರಿಂದ 7 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗದ ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಿದೆ.
ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಮುಂದಿನ ಏಳು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶದಲ್ಲಿ ಸೆಪ್ಟೆಂಬರ್ 6ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಈ ಉತ್ತರದ ರಾಜ್ಯಗಳೂ ಅಲ್ಲಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಉತ್ತರಾಖಂಡದಲ್ಲಿ ಸೆಪ್ಟೆಂಬರ್ 6ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.












Click it and Unblock the Notifications