India Weather: ಮುಂದಿನ ಮೂರು ದಿನ ದೇಶದ ಈ ಭಾಗದಲ್ಲಿ ಅಬ್ಬರದ ಮಳೆ ಮುನ್ಸೂಚನೆ, ಎಲ್ಲೆಲ್ಲಿ?-ಮಾಹಿತಿ
India Weather: ಭಾರತದ ಉತ್ತರ ಭಾಗದಲ್ಲಿ ಸುನಾಮಿಯಂತಹ ಮಳೆಯಾಗಿದ್ದು, ಭಾರೀ ಅವಾಂತರಗಳನ್ನು ಸೃಷ್ಟಿಸಿದೆ. ಹಾಗೆಯೇ ಇನ್ನು ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇಂದು (ಏಪ್ರಿಲ್ 17) ಪಶ್ಚಿಮ ಬಂಗಾಳ, ಸಿಕ್ಕಿಂ, ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗಿದೆ ಎಂದು ವರದಿಯಾಗಿದೆ. ಏಪ್ರಿಲ್ 18-21ರವರೆಗೆ ಜಮ್ಮು & ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.

ಏಪ್ರಿಲ್ 18ರಿಂದ 20ರವರೆಗೆ ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿಯಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಏಪ್ರಿಲ್ 19ರಂದು ಪಶ್ಚಿಮ ಉತ್ತರ ಪ್ರದೇಶ ಮತ್ತು ಪೂರ್ವ ರಾಜಸ್ಥಾನ, ಏಪ್ರಿಲ್ 18ರಿಂದ 19ರವರೆಗೂ ಪಶ್ಚಿಮ ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಾಖಂಡ್‌ನಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಏಪ್ರಿಲ್ 19ರಂದು ಜಮ್ಮು ಕಾಶ್ಮೀರ, ಲಡಾಖ್, ಗಿಲ್ಗಿಟ್‌ನಲ್ಲಿ, ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್‌ನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಇಂದಿನಿಂದ ಹರಿಯಾಣ, ಚಂಡೀಗಢ, ನವದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ ಎಂದು ತಿಳಿಸಿದೆ.
ಮುಂದಿನ 3 ದಿನಗಳವರೆಗೆ ಪೂರ್ವ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ° Cರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಇನ್ನು ಮುಂದಿನ 2 ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ನಿರೀಕ್ಷಿತ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಗಳಿಲ್ಲ, ನಂತರದ 3 ದಿನಗಳವರೆಗೆ 2-3° C ಕುಸಿತ ಕುಸಿಯಲಿದೆ ಎಂದು ತಿಳಿಸಿದೆ.












Click it and Unblock the Notifications