India Weather: ಮಾರ್ಚ್‌ 29ರವರೆಗೆ ದೇಶದ ಈ ಭಾಗಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

India Weather: ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆಯಿಲ್ಲದೆ ಭೀಕರ ಬಿಸಿಲಿನ ವಾತಾವರಣ ನಿರ್ಮಾಣ ಆಗುತ್ತಿದೆ. ಮತ್ತೊಂದೆಡೆ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ಸುರಿಯುತ್ತಿದೆ. ಇನ್ನು ಮಾರ್ಚ್‌ 29ರವರೆಗೂ ಹಲವು ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಆಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ವಾಯುವ್ಯ ಭಾರತದ ಪಕ್ಕದ ಹಲವೆಡೆ ಮಾರ್ಚ್ 29ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ತಿಳಿಸಿದೆ.

India Weather Heavy rainfall forecast in this parts of India till March 29

ಮಾರ್ಚ್ 29 ರವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವ್ಯಾಪಕವಾಗಿ ಲಘು ಮಳೆಯಾಗಲಿದೆ. ಇನ್ನು ಇಂದು (ಮಾರ್ಚ್‌ 26) ಅರುಣಾಚಲ ಪ್ರದೇಶದಲ್ಲಿ ಪ್ರತ್ಯೇಕವಾದ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎನ್ನುವ ಮಾಹಿತಿಯನ್ನು ರವಾನಿಸಿದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ನದೆಹಲಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಇಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾದರೆ, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ (ಮಾರ್ಚ್‌ 25) ನಗರದಲ್ಲಿ ಗರಿಷ್ಠ ತಾಪಮಾನವು 33.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಕನಿಷ್ಠ ತಾಪಮಾನ 15.8 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದ್ದು, ಇದು ಋತುವಿನ ಸರಾಸರಿಗಿಂತ ಕಡಿಮೆಯಾಗಿದೆ.

ಈ ರಾಜ್ಯಗಳಲ್ಲಿ ಮಳೆ: ಚಂಡಮಾರುತದ ಪರಿಣಾಮದಿಂದಾಗಿ ಇಂದು ಈಶಾನ್ಯ ಅಸ್ಸಾಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಸಿಕ್ಕಿಂ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ವ್ಯಾಪಕವಾಗಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಮಾರ್ಚ್ 29ರವರೆಗೆ ಪಂಜಾಬ್, ಹರಿಯಾಣ, ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+