India Weather: ದೇಶದ ಈ ಭಾಗದಲ್ಲಿ ಮುಂದಿನ ನಾಲ್ಕು ದಿನ ಸುನಾಮಿ ಮಳೆ ಮುಂದುವರೆಯುವ ಮುನ್ಸೂಚನೆ-ರೆಡ್‌ ಅಲರ್ಟ್‌

India Weather: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆದು ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಹಾಗೆಯೇ ಮುಂದಿನ ನಾಲ್ಕು ದಿನಗಳ ಕಾಲ ಈ ಭಾಗಗಳಲ್ಲಿ ಸುನಾಮಿಯಂತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 31ರಂದು ತಮಿಳುನಾಡು ಮತ್ತು ಕೇರಳದಲ್ಲಿ ಪ್ರತ್ಯೇಕವಾಗಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಮುಂದಿನ ನಾಲ್ಕು ದಿನಗಳ ಕಾಲ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

India Weather Heavy rainfall forecast in this states for next four days from july 31

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ, ಕೇರಳದ ವಯನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮತ್ತೊಂದೆಡೆ, ಉತ್ತರಾಖಂಡ, ಹಿಮಾಚಲ ಪ್ರದೇಶ, ನವದೆಹಲಿ, ಹರಿಯಾಣ, ಚಂಡೀಗಢ, ಪಂಜಾಬ್, ಪಶ್ಚಿಮ ಉತ್ತರ ಪ್ರದೇಶ, ತಮಿಳುನಾಡು, ಕಾರೈಕಲ್, ಪುದುಚೇರಿ, ಒಡಿಶಾ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಗೋವಾ, ಮಹಾರಾಷ್ಟ್ರ, ತ್ರಿಪುರಾ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಪಶ್ಚಿಮ ಮತ್ತು ಮಧ್ಯ ಭಾರತದ ಹವಾಮಾನ: ಛತ್ತೀಸ್‌ಗಢ, ಪಶ್ಚಿಮ ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರದಲ್ಲಿ ಆಗಸ್ಟ್ 1-3ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಗೋವಾ ಮತ್ತು ಕೊಂಕಣದಲ್ಲಿ ಜುಲೈ 31 ರಿಂದ ಆಗಸ್ಟ್ 3 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಗುಜರಾತ್‌ನಲ್ಲಿ ಪ್ರತ್ಯೇಕವಾಗಿ ಭಾರೀ ಮಳೆ ಸುರಿಯು ಸಾಧ್ಯತೆಯಿದೆ. ಹಾಗೆಯೇ ಇದೇ ವೇಳೆ ಕಚ್ ಮತ್ತು ಸೌರಾಷ್ಟ್ರದಲ್ಲಿ, ಮರಾಠವಾಡದಲ್ಲಿ ಇದೇ ವಾತಾವತಣ ಮುಂದುವರೆಯಲಿದೆ ಎಂದು ತಿಳಿಸಿದೆ.

ವಾಯುವ್ಯ ಭಾರತದ ಹವಾಮಾನದ ವಿವರ: ಜುಲೈ 31ರಿಂದ ಆಗಸ್ಟ್ 1ರವರೆಗೆ ಪಶ್ಚಿಮ ಉತ್ತರ ಪ್ರದೇಶ, ಚಂಡೀಗಢ, ಪಂಜಾಬ್ ಮತ್ತು ಹರಿಯಾಣ, ಉತ್ತರಾಖಂಡದಲ್ಲಿ ಜುಲೈ 30 ರಿಂದ ಆಗಸ್ಟ್ 1ರವರೆಗೆ, ಹಿಮಾಚಲ ಪ್ರದೇಶ ಮತ್ತು ಜಮ್ಮು-ಕಾಶ್ಮೀರದಲ್ಲಿ ಆಗಸ್ಟ್ 1ರಂದು ಮಳೆಯಾಗಲಿದೆ ಎಂದು ಹವಾಮಾಣ ಇಲಾಖೆ ಮುನ್ಸೂಚನೆ ನೀಡಿದೆ.

ಪೂರ್ವ ರಾಜಸ್ಥಾನ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಸುತ್ತಮುಮುತ್ತಲಿನ ಪ್ರದೇಶಗಳಲ್ಲಿ ಜುಲೈ 31ರಿಂದ ಆಗಸ್ಟ್ 3ರವರೆಗೆ ಪ್ರತ್ಯೇಕವಾಗಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಪೂರ್ವ ಉತ್ತರ ಪ್ರದೇಶದಲ್ಲಿ ಜುಲೈ 31ರಿಂದ ಆಗಸ್ಟ್ 1ರವರೆಗೆ, ಜಮ್ಮು-ಕಾಶ್ಮೀರ, ಚಂಡೀಗಢದಲ್ಲಿ ಜುಲೈ 31ರಿಂದ ಆಗಸ್ಟ್ 2ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ, ಪೂರ್ವ ಮತ್ತು ಈಶಾನ್ಯ ಭಾರತದ ಹವಾಮಾನ: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಜುಲೈ 31 ಮತ್ತು ಆಗಸ್ಟ್ 1ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಇದೇ ವೇಳೆ ಪುದುಚೇರಿ, ತಮಿಳುನಾಡು, ಕಾರೈಕಲ್, ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಇನ್ನು ಆಗಸ್ಟ್ 2ರಂದು ಉತ್ತರ ಕರ್ನಾಟಕದ ಭಾಗದಲ್ಲೂ ಕೂಡ ಅಬ್ಬರದ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಜುಲೈ 31 ರಿಂದ ಆಗಸ್ಟ್ 1ರವರೆಗೆ ಒಡಿಶಾ, ನಾಗಾಲ್ಯಾಂಡ್, ಮಿಜೋರಾಂ, ಮಣಿಪುರ ಮತ್ತು ತ್ರಿಪುರಾದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ. ಜುಲೈ 31ರಿಂದ ಆಗಸ್ಟ್ 2ರ ವರೆಗೆ ಮಣಿಪುರ, ಒಡಿಶಾ, ಜಾರ್ಖಂಡ್, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರಾ, ಗಂಗಾ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಮೇಘಾಲಯ, ಸಿಕ್ಕಿಂ ಮತ್ತು ಹಿಮಾಲಯ ಪ್ರದೇಶದಲ್ಲಿ ಜುಲೈ 31ರಿಂದ ಆಗಸ್ಟ್ 3ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+