India Weather: ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ-ಎಲ್ಲೆಲ್ಲಿ, ಯಾವಾಗ?-ಮಾಹಿತಿ
India Rain: ಕಳೆದ ಒಂದು ವಾರದವರೆಗೂ ಉತ್ತರ ಭಾರತದ ಕೆಲವೆಡೆ ಮಾತ್ರ ಮಳೆಯಾಗುತ್ತಿತ್ತು. ಇದೀಗ ಬಹುತೇಕ ರಾಜ್ಯಗಳ ಹಲವೆಡೆ ಮಳೆರಾಯನ ಆರ್ಭಟ ಶುರುವಾಗಿದೆ. ಇನ್ನು ಇಂದು ಮತ್ತು ನಾಳೆ ಕರ್ನಾಟಕ ಸೆರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಸೋಮವಾರದವರೆಗೆ ಉತ್ತರ ಭಾರತ ಮತ್ತು ಮಧ್ಯ ಭಾರತ ಹಾಗೂ ದಕ್ಷಿಣ ಭಾರತದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಏಪ್ರಿಲ್ 15ರಂದು ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡದದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಇಲ್ಲಿ ಬಿರುಗಾಳಿ ವೇಗವು ಗಂಟೆಗೆ 30-40 ಕಿಲೋ ಮೀಟರ್‌ವರೆಗೂ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಇಂದು (ಏಪ್ರಿಲ್ 14) ಮಧ್ಯಪ್ರದೇಶ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ ಮತ್ತು ರಾಜಸ್ಥಾನದಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ನವದೆಹಲಿಯಲ್ಲಿ ಭಾನುವಾರದಂದು ಗುಡುಗು ಸಹಿತ ಲಘು ಮಳೆಯಾಗುವ ಮುನ್ಸೂಚನೆ ಇದೆ. ಜೊತೆಗೆ ಇಲ್ಲಿ ಗಾಳಿ ವೇಗವು 35-45 ಕಿಲೋ ಮೀಟರ್ ಬೀಸುವ ಸಾಧ್ಯತೆಯಿದೆ. ಆದರೆ ಕನಿಷ್ಠ ತಾಪಮಾನವು ಸುಮಾರು 20 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಬಹುದು. ಇನ್ನು ಸೋಮವಾರ (ಏಪ್ರಿಲ್ 15) ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಲಘುವಾದ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಗಾಳಿಯು ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಬೀಸುವ ನಿರೀಕ್ಷೆಯಿದೆ.












Click it and Unblock the Notifications