India Weather: ಮೈಚಾಂಗ್ ಚಂಡಮಾಡುತ ಹಿನ್ನೆಲೆ ದೇಶದ ಈ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ-ಮಾಹಿತಿ
ನವದೆಹಲು, ಡಿಸೆಂಬರ್, 02: ಈಗಾಗಲೇ ಕಳೆದ ಒಂದು ವಾರದದಿಂದಲೂ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಬಿಟ್ಟುಬಿಡದೇ ಭಾರೀ ಮಳೆಯಾಗುತ್ತಿದೆ. ಮೈಚಾಂಗ್ ಚಂಡಮಾರುತ ಹಿನ್ನೆಲೆ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮ ತಮಿಳುನಾಡು, ಕೇರಳ ಸೇರಿದಂತೆ ಹಲವು ರಾಜ್ಯಗಳ ಮೇಲೂ ಬೀರಿದೆ. ಅಲ್ಲದೆ ಇಂದಿನಿಂದಲೂ ಡಿಸೆಂಬರ್ 5ರವರೆಗೂ ಈ ಚಂಡಮಾರುತದ ಪ್ರಭಾವ ತೀವ್ರತೆ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕಳೆದ 6 ಗಂಟೆಗಳಲ್ಲಿ 9 ಕಿ.ಮೀ ವೇಗದಲ್ಲಿ ಪಶ್ಚಿಮ-ವಾಯುವ್ಯದತ್ತ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ಎಚ್ಚರಿಕೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಚಂಡಮಾರುತವು ಚೆನ್ನೈನ ಪೂರ್ವ-ಆಗ್ನೇಯಕ್ಕೆ 630 ಕಿ.ಮೀಟರ್, ನೆಲ್ಲೂರಿನಿಂದ ಆಗ್ನೇಯಕ್ಕೆ 740 ಕಿಲೋ ಮೀಟರ್, ಬಾಪಟ್ಲಾದಿಂದ 810 ಕಿ.ಮೀ. ಆಗ್ನೇಯ ಮತ್ತು ಮಚಲಿಪಟ್ನಂನಿಂದ ದಕ್ಷಿಣ-ಆಗ್ನೇಯಕ್ಕೆ 800 ಕಿಲೋ ಮೀಟರ್ ಇರಲಿದೆ. ಇನ್ನು ಮುಂದಿನ 12 ಗಂಟೆಗಳಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದೆ. ಮತ್ತು ಡಿಸೆಂಬರ್ 3ರ ವೇಳೆಗೆ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಸೈಕ್ಲೋನಿಕ್ ಚಂಡಮಾರುತ 'ಮೈಚಾಂಗ್' ಆಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಚಂಡಮಾರುತವು ಡಿಸೆಂಬರ್ 4ರ ಮುಂಜಾನೆಯ ಹೊತ್ತಿಗೆ ದಕ್ಷಿಣ ಆಂಧ್ರಪ್ರದೇಶದ ಸಮೀಪ ಮತ್ತು ಉತ್ತರ ತಮಿಳುನಾಡು ಕರಾವಳಿಯನ್ನು ತಲುಪುತ್ತದೆ ಎಂದು ಮುನ್ಸೂಚನೆ ಇದೆ. ಇದು ಉತ್ತರದ ಕಡೆಗೆ ಚಲಿಸುವ ನಿರೀಕ್ಷೆಯಿದೆ. ಈಗಾಗಲೇ ಇದು ದಕ್ಷಿಣ ಆಂಧ್ರಪ್ರದೇಶ ಕರಾವಳಿಗೆ ಹತ್ತಿರದಲ್ಲಿದೆ. ಡಿಸೆಂಬರ್ 5ರ ಮುಂಜಾನೆ ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ ಭೂಕುಸಿತವಾಗುವ ನಿರೀಕ್ಷೆಯಿದೆ. ಈ ವೇಳೆ ಸೈಕ್ಲೋನಿಕ್ ಚಂಡಮಾರುತದ ಪ್ರಭಾವದಿಂದ ಗಾಳಿಯ ವೇಗವು ಗಂಟೆಗೆ 80-90 ಕಿ.ಮೀಟರ್ ಇರಲಿದ್ದು, ಗರಿಷ್ಠ ಗಾಳಿಯ ವೇಗವು ಗಾಳಿಯು 100 ಕಿ.ಮೀಟರ್‌ವರೆಗೂ ತಲುಪುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶುಕ್ರವಾರ 12 ಜಿಲ್ಲಾಡಳಿತ ಮುಖ್ಯಸ್ಥರೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಮುಂದಿನ 2-3 ದಿನಗಳಲ್ಲಿ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯನ್ನು ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಕುರಿತು ಸ್ಟಾಲಿನ್ ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಿದರು. ಮುಂಬರುವ ಚಂಡಮಾರುತಕ್ಕೆ ಗುರಿಯಾಗುವ ಪ್ರದೇಶಗಳಿಂದ ನಿವಾಸಿಗಳನ್ನು ಸ್ಥಳಾಂತರಿಸುವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಂಗಾಳ ಕೊಲ್ಲಿಯಲ್ಲಿ ಸನ್ನಿಹಿತವಾಗಿರುವ 'ಮೈಚಾಂಗ್' ಚಂಡಮಾರುತ ಹಿನ್ನೆಲೆ, ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ನೇತೃತ್ವದ ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿಯು (ಎನ್‌ಸಿಎಂಸಿ) ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಸನ್ನದ್ಧತೆಯನ್ನು ಪರಿಶೀಲಿಸಿತು.
ಭಾರೀ ಮಳೆ ಮುನ್ಸೂಚನೆ
ಇನ್ನು ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ದಕ್ಷಿಣ ಮತ್ತು ಪೂರ್ವ ಭಾರತದ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮೂನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಇನ್ನುಇಂದಿನಿಂದ ಡಿಸೆಂಬರ್ 2ರಿಂದ 5ರವರೆಗೂ ಉತ್ತರ ಕರಾವಳಿಯ ತಮಿಳುನಾಡು ಮತ್ತು ಪುದುಚೇರಿಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ 3 ಮತ್ತು 4ರಂದು ರಂದು ಕರಾವಳಿ ಆಂಧ್ರಪ್ರದೇಶದ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಡಿಸೆಂಬರ್ 5 ರಂದು ದಕ್ಷಿಣ ಕರಾವಳಿಯ ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ ಮತ್ತು ಉತ್ತರ ಕರಾವಳಿ ಆಂಧ್ರಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ತಿಳಿಸಿದೆ.












Click it and Unblock the Notifications