India weather: ದಟ್ಟ ಮಂಜಿನ ನಡುವೆಯೂ ದಕ್ಷಿಣ ಭಾರತದ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
ನವದೆಹಲಿ, ಜನವರಿ, 08: ಇದೀಗ ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದ್ದ. ದೇಶದ ಬಹುತೇಕ ಭಾಗಗಳಲ್ಲಿ ಬೆಳಗ್ಗೆ 11 ಗಂಟೆಯಾದರೂ ಮಂಜು ಕವಿದ ವಾತಾವರಣವೇ ಇರುತ್ತಿದೆ. ಅಲ್ಲದೆ ಈ ನಡುವೆಯೂ ದಕ್ಷಿಣ ಭಾರದ ಈ ರಾಜ್ಯಗಳಲ್ಲಿ ಮಳೆಯಾಗಲಿದ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವೆಲ್ಲ ಭಾಗಗಳಲ್ಲಿ ಮಳೆ ಬೀಳಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ತಾಪಮಾನ ಇಳಕೆಯಾಗಿ ಬಹುತೇಕ ದೇಶದ ಬಹುತೇಕ ಭಾಗಗಳಲ್ಲಿ ಚಳಿಯ ಪ್ರಮಾನ ಏರಿಕೆಯಾಗಿದೆ. ಕೆಲವು ಭಾಗಗಳಲ್ಲಿ ಮಾತ್ರದ ದಟ್ಟವಾದ ಮಂಜಿನ ನಡುವೆಯೇ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಕೆಲವೆಡೆ ಮಾತ್ರ ಭಾರೀ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ರಾಜಸ್ಥಾನದಂತಹ ಉತ್ತರ ಭಾರತದ ಭಾಗಗಳಲ್ಲಿ ಚಳಿಯ ಪ್ರಮಾನ ತುಸು ಹೆಚ್ಚಾಗಿಯೇ ಇರಲಿದೆ. ಇನ್ನು ಜನವರಿ 13ರವರೆಗೆ ದೇಶದ ಉತ್ತರ ಭಾಗಗಳಲ್ಲಿ ತಾಪಮಾನವು ಸ್ಥಿರವಾಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆದರೂ ಸೋಮವಾರ ಬೆಳಗ್ಗೆ ದೇಶದ ರಾಜಧಾನಿ ನವದೆಹಲಿಯಲ್ಲಿ 5.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸರಾಸರಿಗಿಂತ ಎರಡು ಹಂತಗಳಿಗಿಂತ ಕಡಿಮೆ ತಾಪಮಾನವಾಗಿದೆ. ಇನ್ನು ದಟ್ಟ ಮಂಜು ಹಿನ್ನೆಲೆ ನವದೆಹಲಿಗೆ ಹೋಗುವ ಸುಮಾರು 20 ರೈಲುಗಳು ಸೋಮವಾರ ವಿಳಂಬವಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
IMD ಮುನ್ಸೂಚನೆಯ ವರದಿಗಳ ಪ್ರಕಾರ, ಜನವರಿ 10ರವರೆಗೆ ಪಂಜಾಬ್, ಹರಿಯಾಣ-ಚಂಡೀಗಢ, ಉತ್ತರ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಜಾರ್ಖಂಡ್, ಒಡಿಶಾ ಮತ್ತು ಬಿಹಾರದ ಪ್ರತ್ಯೇಕ ಭಾಗಗಳಲ್ಲಿ ಬೆಳಗ್ಗೆ ಮಂಜು ಮತ್ತು ದಟ್ಟವಾದ ಮಂಜು ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇನ್ನು ನವದೆಹಲಿ-ಎನ್‌ಸಿಆರ್‌ನಲ್ಲಿ ಮಂಜು ಕವಿದ ವಾತಾವರಣ ಮುಂದುವರೆದಿದ್ದು, ಮಂಗಳವಾರ ಲಘು ಮಳೆಯಾಗುವ ನಿರೀಕ್ಷೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈಶಾನ್ಯ ರಾಜ್ಯಗಳಾದ ಮಿಜೋರಾಂ, ಮೇಘಾಲಯ, ತ್ರಿಪುರಾ ಮತ್ತು ಅಸ್ಸಾಂನಲ್ಲಿ ಇಂದಿನಿಂದ ಜನವರಿ 9ರವರೆಗೆ ದಟ್ಟವಾದ ಮಂಜು ಆವರಿಸುವ ನಿರೀಕ್ಷೆಯಿದೆ. ರಾಜಸ್ಥಾನದಲ್ಲಿ ಇದೇ ರೀತಿಯ ದಟ್ಟವಾದ ಮಂಜಿನ ಪರಿಸ್ಥಿತಿಗಳು ಜನವರಿ 12ರವರೆಗೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
IMD ಮುನ್ಸೂಚನೆಯ ಪ್ರಕಾರ, ಇಂದಿನಿಂದ(ಜನವರಿ 08) ಎರಡು ದಿನಗಳ ಕಾಲ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಕರಾವಳಿ ಪ್ರದೇಶಗಳಲ್ಲಿ ಪ್ರತ್ಯೇಕವಾದ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೆ, ಕಳೆದ 24 ಗಂಟೆಗಳಲ್ಲಿ ಸತತ ಮಳೆಯಿಂದಾಗಿ, ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸಾಮಿ ಅವರು ಇಂದು (ಜನವರಿ 8) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಅಲ್ಲದೆ, ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಕೇರಳ, ಲಕ್ಷದೀಪ, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಜನವರಿ 10ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಜನವರಿ 10ರವರೆಗೆ ಮಳೆಯಾಗಲಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ನೀಡಿದೆ.
ಜನವರಿ 8 ಮತ್ತು 9ರಂದು ಮಹಾರಾಷ್ಟ್ರ ಮತ್ತು ಗುಜರಾತ್‌ನ ಕೆಲವು ಭಾಗಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಆದರೆ, ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದ ಅಲ್ಲಲ್ಲಿ ಈ ಎರಡು ದಿನಗಳಲ್ಲಿ ಆಲಿಕಲ್ಲು ಮಳೆ ಬೀಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications