India Weather: ಏಪ್ರಿಲ್ 19ರಿಂದ ಜೂನ್ 1ರವರೆಗೆ ದೇಶದ ಈ ಭಾಗಗಳಲ್ಲಿ ತಾಪಮಾನದಲ್ಲಿ ಭಾರೀ ಏರಿಕೆ, ಎಲ್ಲೆಲ್ಲಿ?-ಮಾಹಿತಿ
India Weather Report: ಉತ್ತರ ಭಾರತದ ಕೆಲವೆಡೆ ಮಾತ್ರ ಮಳೆರಾಯ ಕರುಣೆ ತೋರಿದ್ದಾನೆ. ಇದನ್ನು ಹೊರತುಪಡಿಸಿ ದೇಶದ ಬಹುತೇಕ ರಾಜ್ಯದಲ್ಲಿ ರಣಬಿಸಿಲಿನ ವಾತಾವರಣ ಮುಂದುವರೆದಿದೆ. ಹಾಗೆಯೇ ಏಪ್ರಿಲ್ 19ರಿಂದ ಜೂನ್ 1ರವರೆಗೆ ಜೂನ್‌ವರೆಗೆ ಈ ರಾಜ್ಯಗಳಲ್ಲಿ ತಾಪಮಾನದ ಪ್ರಮಾಣ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತದ ಮಧ್ಯ ಮತ್ತು ಪಶ್ಚಿಮ ಪರ್ಯಾಯ ದ್ವೀಪ ಭಾಗಗಲ್ಲಿ ತಾಪಮಾನದ ಪ್ರಮಾಣ ಸಾಮನ್ಯ ದಿನಗಳಿಗಿಂತ ತುಸು ಹೆಚ್ಚಾಗಿಯೇ ಇರಲಿದೆ. ಇನ್ನು ಏಪ್ರಿಲ್ 19 ಮತ್ತು ಜೂನ್ 1ರ ನಡುವೆ ಏಳು ಹಂತಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ವೇಳೆಯೇ ತಾಪಮಾನದ ಪ್ರಮಾಣ ಹೆಚ್ಚಿರಲಿದೆ ಎಂದು ತಿಳಿಸಿದೆ.

ಹವಾಮಾನ ಇಲಾಖೆಯ ಡೈರೆಕ್ಟರ್ ಜನರಲ್ ಮೃತ್ಯುಂಜಯ್ ಅವರು, ಏಪ್ರಿಲ್-ಜೂನ್ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಅದರಲ್ಲೂ ಮಧ್ಯ ಪಶ್ಚಿಮ ಪರ್ಯಾಯ ದ್ವೀಪದ ಮೇಲೆ ಹೆಚ್ಚಿನ ಪರಿಣಾಮ ಭೀರಲಿದೆ ಎಂದು ತಿಳಿಸಿದೆ.
ಅಲ್ಲದೆ, ಗುಜರಾತ್, ಮಧ್ಯ ಮಹಾರಾಷ್ಟ್ರ, ಉತ್ತರ ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ಉತ್ತರ ಛತ್ತೀಸಗಢ ಮತ್ತು ಆಂಧ್ರಪ್ರದೇಶದಂತಹ ಪ್ರದೇಶಗಳಲ್ಲಿ ಹೆಚ್ಚಿನ ತಾಪಮಾನ ದಾಖಲಾಗಲಿದೆ. ಹೀಗೆ ಮಧ್ಯಭಾರತ, ದಕ್ಷಿಣ ಭಾರದತದ ಹಲವು ರಾಜ್ಯಗಳಲ್ಲಿ ಪ್ರದೇಶಗಳಲ್ಲಿ ಒಂದರಿಂದ ಮೂರು ದಿನಗಳ ಕಾಲ ತಾಪಮಾನ ಹೆಚ್ಚಿರಲಿದೆ ಎಂದು ತಿಳಿಸಿದೆ.
ಏಪ್ರಿಲ್‌ನಲ್ಲಿ ಗುಜರಾತ್, ಮಹಾರಾಷ್ಟ್ರ, ಉತ್ತರ ಕರ್ನಾಟಕ, ಒಡಿಶಾ, ಪಶ್ಚಿಮ ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶಗಳಲ್ಲಿ ತಾಪಮಾನದ ಪ್ರಮಾಣ ತುಸು ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಈ ಭಾಗಗಳ ಜನರಿಗೆ ಹೊರಗಡೆ ಹೋಗುವಾಗ ನೀರು, ಛತ್ರಿಗಳನ್ನು ತೆಗೆದುಕೊಂಡು ಹೋಗುವಂತೆಯೂ ಮುಂಜಾಗ್ರತಾ ಸಂದೇಶವನ್ನು ರಾವಾನಿಸಿದೆ.












Click it and Unblock the Notifications