Weather Update: ಮುಗಿಯಿತಾ ಮಳೆ ಅಧ್ಯಾಯ, ಮತ್ತೆ ಎದ್ದಿವೆ ಶಾಖದ ಅಲೆಗಳು!

ನವದೆಹಲಿ, ಏಪ್ರಿಲ್. 23: ಕೆಲ ದಿನಗಳಿಂದ ದೇಶದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಇದರ ಬೆನ್ನಲ್ಲೇ ಮಳೆ ತಗ್ಗಿದ್ದು ಮತ್ತೆ ಶಾಖದ ಅಲೆಗಳು ಹೆಚ್ಚಾಗುವ ಮುನ್ಸಚೂನೆ ನೀಡಿದೆ ಭಾರತೀಯ ಹವಾಮಾನ ಇಲಾಖೆ.

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೇಶದ ಹಲವಾರು ರಾಜ್ಯಗಳು ಬಿಸಿಲಿನ ತಾಪದಿಂದ ತತ್ತರಿಸುತ್ತಿವೆ. ಹಲವಾರು ರಾಜ್ಯಗಳಲ್ಲಿ ಉಷ್ಣಾಂಶ 40 ಡಿಗ್ರಿ ಗೆರೆ ದಾಟಿದೆ. ಹವಾಮಾನ ಇಲಾಖೆಯು ಹಲವು ರಾಜ್ಯಗಳಲ್ಲಿ ಹೀಟ್ ವೇವ್ ಅಲರ್ಟ್ ಘೋಷಿಸಿದೆ. ಮುಂದಿನ ದಿನಗಳಲ್ಲಿ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.

India Weather Update Heatwave Aggravates In Many Parts Of India

ಹಲವು ಭಾಗಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಏಪ್ರಿಲ್ 24 ರಿಂದ 26 ರ ನಡುವೆ ಪಾಟ್ನಾ ಮತ್ತು ಹಲವಾರು ದಕ್ಷಿಣ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಕಾರಣ ಎಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಮೂರು ದಿನಗಳಲ್ಲಿ ತಾಪಮಾನದಲ್ಲಿ ಮೂರರಿಂದ ನಾಲ್ಕು ಡಿಗ್ರಿಗಳಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ನೈಋತ್ಯ ಮತ್ತು ದಕ್ಷಿಣ ಮಧ್ಯ ಭಾಗದ 14 ಜಿಲ್ಲೆಗಳಿಗೆ ಬಿಸಿ ದಿನಗಳ ಎಚ್ಚರಿಕೆ ನೀಡಲಾಗಿದೆ. ಇನ್ನು, ಪಾಟ್ನಾ ಸೇರಿದಂತೆ 25 ನಗರಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ದಾಖಲಾಗಿದೆ.

ಹಿಮಾಲಯದ ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಅಸ್ಸಾಂ, ಪಶ್ಚಿಮ ಮೇಘಾಲಯ, ತ್ರಿಪುರ, ಕೊಂಕಣ ಮತ್ತು ಗೋವಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಕರಾವಳಿ ಆಂಧ್ರಪ್ರದೇಶ ಮತ್ತು ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೆಹಲಿ ಹವಾಮಾನ:

ಹವಾಮಾನ ಇಲಾಖೆಯ ಪ್ರಕಾರ, ಸೋಮವಾರದಂತಲ್ಲದೆ ಇಂದು ರಾಷ್ಟ್ರ ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗಂಟೆಗೆ 25 ರಿಂದ 35 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38 ಮತ್ತು 22 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹದು.

ಬಿಹಾರ, ಉತ್ತರ ಪ್ರದೇಶದಲ್ಲಿ ಹೆಚ್ಚಾಗಲಿದೆ ಬಿಸಿಗಾಳಿ

ಏಪ್ರಿಲ್ 24 ರಿಂದ 26 ರ ನಡುವೆ ಪಾಟ್ನಾ ಮತ್ತು ಹಲವಾರು ದಕ್ಷಿಣ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಎಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಮೂರು ದಿನಗಳಲ್ಲಿ ತಾಪಮಾನದಲ್ಲಿ ಮೂರರಿಂದ ನಾಲ್ಕು ಡಿಗ್ರಿಗಳಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಸೇರಿದಂತೆ ಉತ್ತರ ಪ್ರದೇಶದ ಬಹುತೇಕ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಗಳು ಮುಂದುವರಿದಿವೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಗಾಳಿಯ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ 36 ಜಿಲ್ಲೆಗಳಲ್ಲಿ ಹಗಲು ಮತ್ತು ರಾತ್ರಿ ತಾಪಮಾನವು ಮೂರರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+