India Weather update: ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ- ಮಾಹಿತಿ, ವಿವರ
ಭಾರತದಲ್ಲಿ ಮಾನ್ಸೂನ್ ಕೊನೆಗೊಳ್ಳುತ್ತಿದೆ. ಆದರೆ, ಕೆಲ ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ. ತಮಿಳುನಾಡು, ಪುದುಚೇರಿ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕೇರಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಐಎಂಡಿ ತಿಳಿಸಿದೆ.
ಇದೇ ರೀತಿ, ಅಂಡಮಾನ್- ನಿಕೋಬಾರ್ ದ್ವೀಪಗಳು, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಮತ್ತು ಕೇರಳ-ಮಾಹೆಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗಬಹುದು.

ಬಿಹಾರ, ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ ಮತ್ತು ಆಂಧ್ರದ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 13 ರಿಂದ 15 ರ ವರೆಗೆ ಕಾಶ್ಮೀರದ ಗಿಲ್ಗಿಟ್, ಬಾಲ್ಟಿಸ್ತಾನ್ ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಅಕ್ಟೋಬರ್ 14 ಮತ್ತು 15 ರಂದು ಪಂಜಾಬ್, ಉತ್ತರ ಹರಿಯಾಣದ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ. ಇದಲ್ಲದೆ, ಉಪ-ಹಿಮಾಲಯದ ಪಶ್ಚಿಮ ಬಂಗಾಳದಲ್ಲಿ ಲಘುವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಕರ್ನಾಟಕದಲ್ಲಿ ಮಳೆ
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಕೂಡಿದ ಗುಡುಗು ಸಹಿತ ಮಳೆಯಾಗಲಿದೆ.
ಶಿವಮೊಗ್ಗ, ರಾಮನಗರ, ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ನಿನ್ನೆ ಸುರಿದ ಮಳೆ ಪ್ರಮಾಣ
ರಾಮನಗರ: 113.5 ಮಿ.ಮೀ
ದಕ್ಷಿಣ ಕನ್ನಡ: 94 ಮಿ.ಮೀ
ಮೈಸೂರು: 93 ಮಿ.ಮೀ
ಕೊಡಗು: 84 ಮಿ.ಮೀ
ಮಂಡ್ಯ: 71.5 ಮಿ.ಮೀ
ಉಡುಪಿ: 64.5 ಮಿ.ಮೀ
ಚಾಮರಾಜನಗರ: 62.5 ಮಿ.ಮೀ
ಕೋಲಾರ: 53 ಮಿ.ಮೀ
ಅತಿ ಹೆಚ್ಚು ಮಳೆ ಸುರಿದ ಪ್ರದೇಶಗಳು
ಚಾಕನಹಳ್ಳಿ, ರಾಮನಗರ: 113.5 ಮಿ.ಮೀ
ಬೆಳಂದೂರು, ದಕ್ಷಿಣ ಕನ್ನಡ: 94 ಮಿ.ಮೀ
ಕೆಸ್ತೂರು, ಮೈಸೂರು: 93 ಮಿ.ಮೀ
ಹರವೆ, ಮೈಸೂರು; 91 ಮಿ.ಮೀ
ಬಡಗ, ಕೊಡಗು: 84 ಮಿ.ಮೀ
ಸೋಮವಾರ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದ ಪರಿಣಾಮ ಕೆಲವು ಭಾಗಗಳಲ್ಲಿ ತೀವ್ರ ಜಲಾವೃತವಾಗಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications