India Weather: ಮುಂದಿನ 5 ದಿನಗಳ ಕಾಲ ದೇಶದ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ
ನವದೆಹಲಿ, ಆಗಸ್ಟ್, 06: ಕಳೆದ ಕೆಲವು ದಿನಗಳಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಲೇ ಇದ್ದಾನೆ. ಹಾಗೆಯೇ ಮುಂದಿನ ನಾಲ್ಕೈದು ದಿನಗಳ ಕಾಲ ಈ ರಾಜ್ಯಗಳಲ್ಲಿ ಅಬ್ಬರದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹೆಚ್ಚು ಪ್ರಮಾಣದ ಮಳೆಯಾಗಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ನವದೆಹಲಿಯಲ್ಲಿ ಭಾನುವಾರ (ಆಗಸ್ಟ್ 06) ಮೋಡ ಕವಿದ ವಾತಾವರಣ ಇದ್ದು, ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ತಲುಪುವ ನಿರೀಕ್ಷೆಯಿದ್ದು, ಕನಿಷ್ಠ ತಾಪಮಾನ ಸುಮಾರು 27 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅಲ್ಲದೆ ಉತ್ತರಾಖಂಡ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ, ಚಂಡೀಗಢ, ಪಂಜಾಬ್, ರಾಜಸ್ಥಾನ, ಜಮ್ಮು ಸೇರಿದಂತೆ ಹಲವು ರಾಜ್ಯಗಳಲ್ಲಿ ಆಗಸ್ಟ್ 9ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಪೂರ್ವ ಉತ್ತರ ಪ್ರದೇಶ ಮತ್ತು ಉತ್ತರಾಖಂಡ್‌ನಲ್ಲಿ ಇಂದು ಭಾರೀ ಮಳೆ ಸುರಿಯಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ.
ಇಂದು ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಜಾರ್ಖಂಡ್ ಮತ್ತು ಗಂಗಾನದಿ ಪಶ್ಚಿಮ ಬಂಗಾಳ ಸೇರಿದಂತೆ ಪೂರ್ವ ಭಾರತದಲ್ಲಿ ಸಾಧರಣ ಮಳೆಯಾಗಲಿದ್ದು, ಇದೇ ಮಳೆ ವ್ಯಾಪಕವಾಗಿ ಹರಡುವ ಸಾಧ್ಯತೆಯೂ ಇದೆ. ಇನ್ನು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಮುಂದಿನ 5 ದಿನಗಳ ಕಾಲ ಭಾರೀ ಮಳೆ
ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರದ ಘಾಟ್ ಪ್ರದೇಶಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಆಗಸ್ಟ್ 6ರ ನಂತರ ಹಿಮಾಚಲ ಪ್ರದೇಶದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದ ಅಂತಲೂ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ಹಿಮಾಚಲ ಪ್ರದೇಶದ ಮುಖ್ಯಸ್ಥ ಸುರೇಂದರ್ ಪಾಲ್ ಈ ಬಗ್ಗೆ ಮಾಹಿತಿ ನೀಡಿದ್ದು, "ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಅದರಲ್ಲೂ ಕಂಗ್ರಾದ ಧರ್ಮಶಾಲಾದಲ್ಲಿ ಗರಿಷ್ಠ ಮಳೆ ದಾಖಲಾಗಿದೆ. ಹಾಗೆಯೇ ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಮಾತ್ರ ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.












Click it and Unblock the Notifications