India Weather: ಏಪ್ರಿಲ್‌ 15ರಂದು ಭಾರತದ ಈ ರಾಜ್ಯಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ

India weather: ಏಪ್ರಿಲ್‌ವರೆಗೂ ಭಾರದ ಉತ್ತರ ಭಾಗದ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗುತ್ತಿತ್ತು. ಆದರೆ ಇದೀಗ ಏಪ್ರಿಲ್‌ ಮೊದಲ ವಾರದಿಂದಲೇ ಹಲವು ರಾಜ್ಯಗಳ ಕೆಲವೆಡೆ ಮಳೆರಾಯ ಕರುಣೆ ತೋರಿದ್ದಾನೆ. ಇದಿನ ಇಂದು (ಏಪ್ರಿಲ್‌ 15) ರಲವು ರಾಜ್ಯಗಳಿಗೆ ಮಳೆರಾಯ ಕರುಣೆ ತೋರಲಿದ್ದಾನೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಭಾರತದ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ದೇಶದ ಕೆಲವು ಭಾಗಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ ಇದೆ. ಇಂದು (ಏಪ್ರಿಲ್‌) ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಮುಜಫರಾಬಾದ್, ಅರುಣಾಚಲ ಪ್ರದೇಶ, ಗಿಲ್ಗಿಟ್, ಬಾಲ್ಟಿಸ್ತಾನ್ ಮತ್ತು ಉತ್ತರಾಖಂಡದಲ್ಲಿ ಪ್ರತ್ಯೇಕವಾದ ಮಿಂಚು, ಗುಡುಗು ಸಹಿತ ಸಾಧಾರಣ ಮಳೆ ಮಳೆಯಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೆ, ಹರಿಯಾಣ, ಚಂಡೀಗಢ, ಪಶ್ಚಿಮ ಉತ್ತರ ಪ್ರದೇಶ, ನವದೆಹಲಿ, ರಾಜಸ್ಥಾನ, ಪಂಜಾಬ್ ಮತ್ತು ಮಧ್ಯಪ್ರದೇಶದಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದೆ.

India Weather update Heavy rainfall forecast in this states of India on April 15

16-17ರವರೆಗೆ ಎಲ್ಲೆಲ್ಲಿ ಮಳೆ?: ಚಂಡಮಾರುತದ ಪರಿಣಾಮ ಈಶಾನ್ಯ ರಾಜಸ್ಥಾನದ ಮೇಲೆ ಬೀರಲಿದ್ದು, ಈ ಹಿನ್ನೆಲೆ ದಕ್ಷಿಣ ಬಿಹಾರ, ಉತ್ತರ ಜಾರ್ಖಂಡ್, ಉತ್ತರ ಪ್ರದೇಶದಲ್ಲಿ ತಾಪಮಾನದ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ. ಏಪ್ರಿಲ್‌ 16-17ರವರೆಗೆ ನವದೆಹಲಿ, ಉತ್ತರ ಪ್ರದೇಶ, ಚಂಡೀಗಢ ಮತ್ತು ಹರಿಯಾಣ, ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ. ಇನ್ನು ಜಮ್ಮು ವಿಭಾಗ ಮತ್ತು ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಏಪ್ರಿಲ್ 18ರಿಂದ ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಕಾಶ್ಮೀರ, ಲಡಾಖ್, ಬಾಲ್ಟಿಸ್ತಾನ್‌, ಗಿಲ್ಗಿಟ್‌, ಮುಜಫರಾಬಾದ್‌ನಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ ಎರಡು ದಿನಗಳಲ್ಲಿ ಗುಜರಾತ್‌ನಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. ಮುಂದಿನ ಐದು ದಿನಗಳಲ್ಲಿ ಯಾನಂ, ಕರಾವಳಿ ಒಡಿಶಾ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ತಾಪಾಮನದಲ್ಲಿ ಏರಿಕೆಯಾಗುವ ಸಾಧ್ಯತೆಗಳಿದ್ದು, ಇನ್ನು ಇಂದಿನಿಂದ ಏಪ್ರಿಲ್‌ 18ರವರೆಗೆ ಪುದುಚೇರಿ, ತಮಿಳುನಾಡು ಮತ್ತು ಕಾರೈಕಲ್‌ಗೆ ಇದೇ ರೀತಿಯ ಹವಾಮಾನ ಇರಲಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+