IMD Weather Forecast: ದೇಶದಲ್ಲೇ ಅತೀ ಗರಿಷ್ಠ ತಾಪಮಾನ ಕರ್ನಾಟಕದಲ್ಲಿ ದಾಖಲು, ಹವಾಮಾನ ಮುನ್ಸೂಚನೆ
ನವದೆಹಲಿ: ದೇಶಾದ್ಯಂತ ಒಣಹವೆಯ ವಾತಾವರಣ ನಿರ್ಮಾಣವಾಗುತ್ತಿದ್ದು, ಕೆಲವೆಡೆ ಶಾಖದ ಅಲೆಯ ವಾತಾವರಣ ಕಂಡು ಬರುತ್ತಿದೆ. ಈ ಮಧ್ಯೆ ಕೆಲವೆಡೆ ಮಳೆ ಆಗಿದೆ. ಮಂಜು ಮತ್ತು ತೀವ್ರ ಚಳಿ ವಾತಾವರಣ ವಿವಿಧ ರಾಜ್ಯಗಳಲ್ಲಿ ದಾಖಲಾಗಿದೆ. ಇದರ ಮಧ್ಯ ಭೂಮಿ ಮೇಲ್ಮೈನಲ್ಲಿ ವಾಯು ಚಂಡಮಾರುತ ಪ್ರಸರಣ ಏರ್ಪಟ್ಟಿದೆ. ವಿಶೇಷವೆಂದರೆ ದೇಶದ ಅತ್ಯಧಿಕ ಗರಿಷ್ಠ ತಾಪಮಾನ ಕರ್ನಾಟಕ ಈ ಜಿಲ್ಲೆಯಲ್ಲಿ ದಾಖಲಾಗಿದೆ. ದೇಶದ ಅತೀ ಕನಿಷ್ಠ ತಾಪಮಾನ ದಾಖಲಾಗಿದ್ದೆಲ್ಲಿ, ಮುಂದಿನ ಐದು ದಿನಗಳ ಹವಾಮಾನ ಮುನ್ಸೂಚನೆ ವಿವರ ಇಲ್ಲಿದೆ.
ದೇಶದ ಉತ್ತರ ಮತ್ತು ಈಶಾನ್ಯ ಭಾರತದ ಹಲವು ರಾಜ್ಯಗಳಲ್ಲಿ ಬೇಸಿಗೆಯಲ್ಲೂ ಸಹ ಮಂಜು ಮುಸುಕಿದ ವಾತಾವರಣ ಕಂಡು ಬಂದಿದೆ. ಇಲ್ಲಿ ಕೆಲವೆಡೆ ಸಂಪೂರ್ಣವಾಗಿ ಚಳಿ ಕಡಿಮೆಯಾಗಿಲ್ಲ. ಪೂರ್ವ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಅತಿ ದಟ್ಟವಾದ ಮಂಜು ಬೀಳುವ ಮುನ್ಸೂಚನೆ ನೀಡಲಾಗಿದೆ. ಜೊತೆಗೆ ಅಸ್ಸಾಂ, ಮೇಘಾಲಯ, ಬಿಹಾರ ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲವು ಕಡೆಗಳಲ್ಲಿ ಸಾಧಾರಣವಾಗಿ ಮಂಜು ಕವಿಯಲಿದ್ದು, ಚಳಿ ಕಂಡು ಬರಲಿದೆ. ಮೇಘಾಲಯದ ಬಾರಾಪಾನಿಯಲ್ಲಿ ಅತ್ಯಂತ ದಟ್ಟ ಮಂಜು ಕವಿದ ಪರಿಣಾಮ ಗೋಚರತೆ ಕಡಿಮೆ ಇತ್ತು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ವರದಿ ತಿಳಿಸಿದೆ.

ಪ್ರಸ್ತುತದಲ್ಲಿ ವಾಯು ಚಂಡಮಾರುತ ಪ್ರಸರಣವು ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ಸಕ್ರಿಯವಾಗಿದೆ. ಇದಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ತನ್ನ ಪ್ರಭಾವ ಬೀರಲಿದೆ. ರಾಜಸ್ಥಾನದ ಪಶ್ಚಿಮ ಹಾಗೂ ವಾಯುವ್ಯ ಉತ್ತರ ಪ್ರದೇಶದ ಮೇಲೆ ಪ್ರತ್ಯೇಕವಾಗಿ ಚಂಡಮಾರುತದ ಮಾದರಿಯ ಗಾಳಿಯ ಬೀಸುವಿಕೆ ಕಂಡು ಬಂದಿದೆ. ಈಶಾನ್ಯ ಭಾರತದ ಕೆಲವು ಪ್ರದೇಶಗಳ ಮೇಲೂ ಈ ಹವಾಮಾನ ವೈಪರೀತ್ಯಗಳ ಪ್ರಭಾವ ಕಂಡು ಬರಲಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಮುಂದಿನ 05 ದಿನ ಗರಿಷ್ಠ ತಾಪಮಾನದಲ್ಲಿ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ಕರ್ನಾಟಕದಲ್ಲಿ ದೇಶದ ಅತ್ಯಧಿಕ ಗರಿಷ್ಠ ತಾಪಮಾನ ದಾಖಲು
ಕರ್ನಾಟಕ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ದೇಶದ ಅತ್ಯಧಿಕ ಗರಿಷ್ಠ ತಾಪಮಾನ ದಾಖಲಾಗಿದೆ. ಇಲ್ಲಿ 37.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದೇಶದ ಅತೀ ಕನಿಷ್ಠ ತಾಪಮಾನವು ಉತ್ತರ ಪ್ರದೇಶದ ಶಹಜಹಾನ್‌ಪುರದ ದೇಶದ ಬಯಲು ಪ್ರದೇಶದ (6.6 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ. ತೆಲಂಗಾಣ, ಒಡಿಶಾ, ಛತ್ತೀಸ್‌ಗಢ ಮತ್ತು ಕರ್ನಾಟಕದ ಒಳನಾಡಿನ ಹಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್ ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಕಡಿಮೆ ದಾಖಲಾಗಿದೆ.
ಎಲ್ಲೆಲ್ಲಿ ಮಳೆ ಮತ್ತು ಒಣ ಹವೆ ಎಚ್ಚರಿಕೆ
ಕಳೆದ 24 ಗಂಟೆಗಳಲ್ಲಿ ಅರುಣಾಚಲ ಪ್ರದೇಶದ ದಿಬಾಂಗ್ ಕಣಿವೆಯಂತಹ ಪ್ರತ್ಯೇಕ ಸ್ಥಳಗಳಲ್ಲಿ ಮಾತ್ರ ಅಲ್ಪ ಪ್ರಮಾಣದ ಮಳೆ ದಾಖಲಾಗಿದೆ. ಇದನ್ನು ಹೊರತುಪಡಿಸಿ ದೇಶದ ಉಳಿದ ಎಲ್ಲಾ ಭಾಗಗಳಲ್ಲಿ ಒಣ ಹವೆ ಮುಂದುವರಿದಿದೆ. ಸದ್ಯಕ್ಕೆ ಮೀನುಗಾರರಿಗೆ ಯಾವುದೇ ಸಮುದ್ರದ ಎಚ್ಚರಿಕೆಗಳನ್ನು ನೀಡಲಾಗಿಲ್ಲ.ಮುಂದಿನ ಐದು ದಿನ ಇದೇ ರೀತಿಯ ಶುಷ್ಕ ವಾತಾವರಣ ಕಂಡು ಬರಲಿದೆ.
ದೆಹಲಿ, ಕರ್ನಾಟಕ, ಉತ್ತರ ಭಾರತದ ಹಾಗೂ ದಕ್ಷಿಣ ಭಾರತದ ರಾಜ್ಯಗಳು ಸೇರಿದಂತೆ ತೀವ್ರ ಸ್ವರೂಪದ ಶಾಖ ಅಲೆಯು ಪೂರ್ಣವಾಗಿ ಸೃಷ್ಟಿಯಾಗಿಲ್ಲ. ಆದರೆ ಫೆಬ್ರವರಿ ಅಂತ್ಯಕ್ಕೆ ಶಾಖದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
---------
ಕ್ರಿಕೆಟ್ ಬಗ್ಗೆ ನಿಮಗೇನು ಬೇಕೋ ಅದೆಲ್ಲ 'ಮೈಖೇಲ್' ವೆಬ್‌ಸೈಟ್‌ನಲ್ಲಿದೆ
ಕ್ರಿಕೆಟ್ ಆಟವನ್ನು ಲೈವ್ ನೋಡುವುದಷ್ಟೇ ಅಲ್ಲ, ರಿಪೋರ್ಟ್ ಓದುವುದೂ ಸಹ ಅಭಿಮಾನಿಗಳ ಪಾಲಿಗೆ ಸುಖ. ಕನ್ನಡದಲ್ಲಿ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ 'ಮೈಖೇಲ್' ಜಾಲತಾಣದಲ್ಲಿ ಲಭ್ಯ. ಇಲ್ಲಿ ಲೈವ್ ಸ್ಕೋರ್, ಬ್ರೇಕಿಂಗ್ ನ್ಯೂಸ್, ಪಂದ್ಯಗಳ ವೇಳಾಪಟ್ಟಿ, ಮ್ಯಾಚ್ ರಿಪೋರ್ಟ್, ಆಟಗಾರರ ಹೇಳಿಕೆ, ವಿವಾದ, ಗಾಸಿಪ್, ಪ್ರೊಫೈಲ್, ಆಕರ್ಷಕ ಫೋಟೊಗಳು, ಇನ್‌ಫೋಗ್ರಾಫಿಕ್ಸ್ ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಬಯಸುವ ಎಲ್ಲವೂ ಇದೆ. ಕ್ರಿಕೆಟ್ ಬಗ್ಗೇ ಏನೇ ಬೇಕಿದ್ದರೂ 'ಮೈಖೇಲ್' ವೆಬ್‌ಸೈಟ್ ನೋಡಿ. ನೆನಪಿರಲಿ: ಕನ್ನಡದಲ್ಲಿ ಕ್ರಿಕೆಟ್, 'ಮೈಖೇಲ್' ವೆಬ್‌ಸೈಟ್ ಬೆಸ್ಟ್.
ಕ್ರೀಡಾಲೋಕದ ತಾಜಾ ಮಾಹಿತಿಗಾಗಿ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲೂ ಮೈಖೇಲ್ ಫಾಲೊ ಮಾಡಿ.












Click it and Unblock the Notifications