ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತಕ್ಕೆ ಕೆಲವೇ ದಿನಗಳಲ್ಲಿ ಕೊರೊನಾ ಲಸಿಕೆ ಲಭ್ಯ: ಏಮ್ಸ್ ನಿರ್ದೇಶಕ

|
Google Oneindia Kannada News

ನವದೆಹಲಿ, ಡಿಸೆಂಬರ್ 31: ಭಾರತಕ್ಕೆ ಕೆಲವೇ ದಿನಗಳಲ್ಲಿ ಕೊರೊನಾ ಲಸಿಕೆ ಲಭ್ಯವಾಗಲಿದೆ ಎಂದು ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ತಿಳಿಸಿದ್ದಾರೆ.

ಬ್ರಿಟನ್‌ನಲ್ಲಿ ಆಸ್ಟ್ರಾಜೆನೆಕಾ ಕೊರೊನಾ ಲಸಿಕೆ ಬಳಕೆಗೆ ತುರ್ತು ಅನುಮತಿ ನೀಡಿರುವುದು ಸಂತಸದ ವಿಚಾರವಾಗಿದೆ. ಕೆಲವೇ ದಿನಗಳಲ್ಲಿ ಭಾರತಕ್ಕೂ ಕೊರೊನಾ ಲಸಿಗೆ ಸಿಗಲಿದೆ ಎಂದರು.

ಆಕ್ಸ್‌ಫರ್ಡ್ ಕೊರೊನಾ ಲಸಿಕೆ ತುರ್ತು ಬಳಕೆಗೆ ಬ್ರಿಟನ್ ಅನುಮತಿಆಕ್ಸ್‌ಫರ್ಡ್ ಕೊರೊನಾ ಲಸಿಕೆ ತುರ್ತು ಬಳಕೆಗೆ ಬ್ರಿಟನ್ ಅನುಮತಿ

ಅದೇ ಕೊರೊನಾ ಲಸಿಕೆಯನ್ನು ಪುಣೆಯಲ್ಲಿರುವ ಸೆರಂ ಇನ್‌ಸ್ಟಿಟ್ಯೂಟ್‌ ಕೂಡ ತಯಾರಿಸುತ್ತಿದೆ. ಕೇವಲ ಭಾರತಕ್ಕೆ ಮಾತ್ರವಲ್ಲದೆ, ಇಡೀ ವಿಶ್ವಕ್ಕೆ ಕೊರೊನಾ ಲಸಿಕೆಯನ್ನು ನೀಡಲಾಗುತ್ತದೆ.

India Will Have COVID-19 Vaccine Within Days: AIIMS Director

ಈ ಲಸಿಕೆಯನ್ನು 2 ರಿಂದ 8 ಡಿಗ್ರಿ ತಾಪಮಾನದಲ್ಲಿರಿಸಬಹುದಾಗಿದೆ. ಸಾಮಾನ್ಯ ಫ್ರಿಡ್ಜ್‌ನಲ್ಲಿ ಕೂಡ ಲಸಿಕೆಯನ್ನು ಶೇಖರಿಸಿಡಬಹುದು. ಫೈಜರ್ ಕೊರೊನಾ ಲಸಿಕೆಯನ್ನು ಮೈನಸ್ 70 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶದಲ್ಲಿ ಇರಿಸಬೇಕಾಗುತ್ತದೆ.

ಆಕ್ಸ್‌ಫರ್ಡ್‌ನ ಆಸ್ಟ್ರಾಜೆನೆಕಾ ಕೊರೊನಾ ಲಸಿಕೆ ತುರ್ತು ಬಳಕೆಗೆ ಬ್ರಿಟನ್ ಸರ್ಕಾರ ಅನುಮತಿ ನೀಡಿದೆ.

ಇದೀಗ ಬ್ರಿಟನ್‌ನಲ್ಲಿ ರೂಪಾಂತರಿತ ಕೊರೊನಾವೈರಸ್ ಪತ್ತೆಯಾಗಿದ್ದು, ವಿವಿಧ ದೇಶಗಳಿಗೆ ಮತ್ತೆ ಕೊರೊನಾ ಸೋಂಕನ್ನು ಪಸರಿಸುತ್ತಿದೆ. ಹೀಗಾಗಿ ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬ್ರಿಟನ್ ಸರ್ಕಾರವು ಆಸ್ಟ್ರಾಜೆನೆಕಾ ಕೊರೊನಾ ಲಸಿಕೆಗೆ ಅನುಮತಿ ನೀಡಿದೆ.

ಮೊದಲ ಡೋಸ್ ಇಂದು ಬಿಡುಗಡೆಯಾಗಿದೆ. ಯುಕೆ ಮೆಡಿಸಿನ್ಸ್ ಆಂಡ್ ಹೆಲ್ತ್ ಕೇರ್ ಪ್ರೊಡಕ್ಟ್ಸ್ ರೆಗ್ಯುಲೇಟರಿ ಏಜೆನ್ಸಿ(ಎಂಎಚ್‌ಆರ್‌ಎ) ಲಸಿಕೆ ತುರ್ತು ಬಳಕೆಗೆ ಅನುಮೋದನೆ ನೀಡಿದೆ.

18 ವರ್ಷಕ್ಕಿಂತ ದೊಡ್ಡವರಿಗೆ ಈ ಆಸ್ಟ್ರಾಜೆನೆಕಾ ಕೊರೊನಾ ಲಸಿಕೆಯನ್ನು ನೀಡಬಹುದಾಗಿದೆ ಎಂದು ಹೇಳಲಾಗಿದೆ.

Recommended Video

ಐಟಿ ಉದ್ಯೋಗಿಗಳಿಗೆ ಮತ್ತೆ ಶಾಕ್!, H1B ವೀಸಾಗಳ ಮೇಲಿನ ನಿರ್ಬಂಧ ಅವಧಿ ಮುಂದುವರೆಸಿದ ಟ್ರಂಪ್‌ | Oneindia Kannada

ಒಟ್ಟು ಎರಡು ಡೋಸ್‌ಗಳನ್ನು ನೀಡಲಾಗುತ್ತದೆ. ನಾಲ್ಕರಿಂದ 12 ವಾರಗಳ ಕಾಲ ಅವರ ಮೇಲೆ ನಿಗಾ ಇಡಲಾಗುತ್ತದೆ. ಪ್ರಕರಣಗಳು ಸಂಭೀರವಾಗಿರದಿದ್ದರೆ 14 ದಿನಗಳಿಗಿಂತ ಹೆಚ್ಚು ದಿನಗಳ ಕಾಲ ಆಸ್ಪತ್ರೆಯಲ್ಲಿರು ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

English summary
Terming the approval for Oxford-AstraZeneca vaccine for use in the UK as a "big step forward", AIIMS Delhi Director Dr Randeep Guleria on Wednesday said that India will have the COVID-19 vaccine within days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X