ಭಾರತ; ಒಂದೇ ದಿನ ದಾಖಲೆ ಬರೆದ ಕೋವಿಡ್ ಪ್ರಕರಣಗಳ ಸಂಖ್ಯೆ

ನವದೆಹಲಿ, ಜುಲೈ 23 : ಕೊರೊನಾ ವೈರಸ್ ಸೋಂಕಿನ ವಿಚಾರದಲ್ಲಿ ಭಾರತ ದಾಖಲೆ ಬರೆದಿದೆ. 24 ಗಂಟೆಯಲ್ಲಿ ದೇಶದಲ್ಲಿ 45, 720 ಹೊಸ ಪ್ರಕರಣ ದಾಖಲಾಗಿದೆ. ಒಂದೇ ದಿನದಲ್ಲಿ ಇಷ್ಟು ಪ್ರಕರಣ ದಾಖಲಾಗಿದ್ದು ಇದೇ ಮೊದಲು.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಬುಧವಾರ ಬೆಳಗ್ಗೆ 8 ರಿಂದ ಗುರುವಾರ ಬೆಳಗ್ಗೆ 8 ಗಂಟೆ ತನಕ ದೇಶದಲ್ಲಿ 45,720 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. 1,129 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

India Witness Biggest One Day Jump In Coronavirus Cases

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 12 ಲಕ್ಷದ ಗಡಿ ದಾಟಿದೆ. ಒಟ್ಟು ಪ್ರಕರಣಗಳ ಸಂಖ್ಯೆ 12,38,635ಕ್ಕೆ ಏರಿಕೆಯಾಗಿದೆ. ಇವುಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,26,167. ಗುಣಮುಖರಾದವರು 7,82,606.

24 ಗಂಟೆಯಲ್ಲಿ ದೇಶದಲ್ಲಿ 1,129 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಇದರಿಂದಾಗಿ ದೇಶದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 29,861ಕ್ಕೆ ಏರಿಕೆಯಾಗಿದೆ.

ಐಸಿಎಂಆರ್ ನೀಡಿರುವ ಮಾಹಿತಿ ಪ್ರಕಾರ ಬುಧವಾರ ಅತಿ ಹೆಚ್ಚು ಅಂದರೆ 3,50,823 ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದೆ. ಭಾರತದಲ್ಲಿ ಕೊರೊನಾದಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಶೇ 63.18.

ಒಂದು ದಿನದಲ್ಲಿ ಮಹಾರಾಷ್ಟ್ರದಲ್ಲಿ 10,576, ತಮಿಳುನಾಡಿನಲ್ಲಿ 5,849, ಕರ್ನಾಟಕದಲ್ಲಿ 4,764, ಆಂಧ್ರಪ್ರದೇಶದಲ್ಲಿ 6045, ಉತ್ತರ ಪ್ರದೇಶದಲ್ಲಿ 2,300, ದೆಹಲಿಯಲ್ಲಿ 1,227 ಹೊಸ ಪ್ರಕರಣಗಳು ದಾಖಲಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+