ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಡಾಖ್‌ನಲ್ಲಿ ಚೀನಾದಿಂದ ಭಾರತೀಯ ಯೋಧರ ಬಂಧನ?

|
Google Oneindia Kannada News

ನವದೆಹಲಿ, ಮೇ 24: ಲಡಾಖ್‌ನಲ್ಲಿ ಭಾರತೀಯ ಯೋಧರನ್ನು ಚೀನಾ ಬಂಧಿಸಿದೆ ಎನ್ನುವ ವರದಿಯನ್ನು ಭಾರತೀಯ ಸೇನೆ ತಳ್ಳಿ ಹಾಕಿದೆ. ಲಡಾಖ್‌ನ ಪ್ಯಾಂಗ್ಯಾಂಗ್ ಸರೋವರದ ಬಳಿ ಹಲವು ದಿನಗಳಿಂದ ಬೀಡು ಬಿಟ್ಟಿರುವ ಚೀನಾ ಸೇನೆ, ಕಳೆದ ಬುಧವಾರ ಭಾರತದ ಗಡಿಯೊಳಗೆ ನುಗ್ಗಿ ಭಾರತದ ನೆಲದಲ್ಲಿ ಓಡಾಟ ನಡೆಸಿತ್ತು.

ಲಡಾಖ್ ನಲ್ಲಿ ಭಾರತ ಹಾಗೂ ಚೀನಾ ನಡುವೆ ಸಂಘರ್ಷ ತಾರಕಕ್ಕೇರಿರುವ ನಡುವಲ್ಲೇ ಭಾರತೀಯ ಯೋಧರನ್ನು ಚೀನಾ ಪಡೆಗಳು ಕಳೆದ ವಾರ ಬಂಧನಕ್ಕೊಳಪಡಿಸಿತ್ತು ಎಂಬ ವರದಿಯನ್ನು ಭಾರತೀಯ ಸೇನಾಪಡೆ ತಿರಸ್ಕರಿಸಿದೆ.

ಕಾಶ್ಮೀರದ ಗಡಿಯಲ್ಲಿ ಪಾಕ್‌ನಿಂದ ಅಪ್ರಚೋದಿತ ಗುಂಡಿನ ದಾಳಿ: ಇಬ್ಬರು ಯೋಧರು ಹುತಾತ್ಮಕಾಶ್ಮೀರದ ಗಡಿಯಲ್ಲಿ ಪಾಕ್‌ನಿಂದ ಅಪ್ರಚೋದಿತ ಗುಂಡಿನ ದಾಳಿ: ಇಬ್ಬರು ಯೋಧರು ಹುತಾತ್ಮ

ಭಾರತೀಯ ಯೋಧರು ಆಕ್ಷೇಪ ವ್ಯಕ್ತಪಡಿಸಿದಾಗ ಹೆಚ್ಚಿನ ಸಂಖ್ಯೆಯಲ್ಲಿದ್ದ ಚೀನಾ ಯೋಧರು ಭಾರತೀಯ ಯೋಧರನ್ನು ತಮ್ಮ ವಶಕ್ಕೆ ಪಡೆದಿದ್ದೂ ಅಲ್ಲದೆ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ಬಳಿಕ ಮರಳಿಸಿದ್ದರು.

Indian Army Denies About Patrol Being Detained By Chinas PLA In Ladakh

ಈ ವಿಚಾರ ಕೈ ಮೀರುವ ಹಂತಕ್ಕೆ ತಲುಪುತ್ತಲೇ ಉಭಯ ದೇಶಗಳ ಕಮಾಂಡರ್ ಗಳು ಮಾತುಕತೆ ನಡೆಸಿ, ಪರಿಸ್ಥಿತಿ ತಿಳಿಗೊಳಿಸಿ, ಬಳಿಕ ಭಾರತೀಯ ಯೋಧರನ್ನು ಬಿಡುಗಡೆ ಮಾಡಲಾಗಿತ್ತು ಎಂದು ವರದಿಗಳಾಗಿದ್ದವು.

ಈ ವರದಿಯನ್ನು ಇದೀಗ ಭಾರತೀಯ ಸೇನಾಪಡೆ ತಿರಸ್ಕರಿಸಿದೆ. ಚೀನಾ ಪಡೆಗಳಿಂದ ಯಾವುದೇ ಭಾರತೀಯ ಯೋಧರೂ ಬಂಧನಕ್ಕೊಳಪಟ್ಟಿರಲಿಲ್ಲ ಎಂದು ಸ್ಪಷ್ಟಪಡಿಸಿದೆ.

ಭಾರತೀಯ ಹಾಗೂ ಚೀನಾ ಗಡಿ ಪ್ರದೇಶಗಳಲ್ಲಿ ವಾಸ್ತವಿಕ ನಿಯಂತ್ರಣ ರೇಖೆ ಕುರಿತ ನಿಯಮಗಳಿಗೆ ಭಾರತೀಯ ಸೇನಾಪಡೆ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ತಿಳಿಸಿದೆ.

ಈ ನಡುವೆ ವಿದೇಶಾಂಗ ಸಚಿವಾಲಯ ಕೂಡ ಹೇಳಿಕೆ ನೀಡಿದ್ದು, ಪಾಶ್ಚಿಮಾತ್ಯ ವಲಯ ಅಥವಾ ಸಿಕ್ಕಿಂ ವಲಯದಲ್ಲಿ ಎಲ್ಎಸಿ ಉದ್ದಕ್ಕೂ ಭಾರತೀಯ ಸೇನೆ ಕಾರ್ಯಚಟುವಟಿಕೆ ನಡೆಸುತ್ತಿವೆ ಎಂಬ ಹೇಳಿಕೆಗಳು ನಿಖರವಾಗಿಲ್ಲ ಎಂದು ಹೇಳಿದೆ.

English summary
The Indian Army has denied reports that suggested that a border patrolling party was detained by Chinese soldiers in the Eastern Ladakh sector.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X